ಅರಕಲಗೂಡು, ಹೊಳೆನರಸೀಪುರ ತಾಲೂಕು ಅಧಿಕಾರಿಗಳ ಸಭೆ: ಜನರ ಸಮಸ್ಯೆಗೆ ಸ್ಪಂದಿಸಲು ಸಿಇಓ ಸೂಚನೆ
ಹಾಸನ

ಅರಕಲಗೂಡು, ಹೊಳೆನರಸೀಪುರ ತಾಲೂಕು ಅಧಿಕಾರಿಗಳ ಸಭೆ: ಜನರ ಸಮಸ್ಯೆಗೆ ಸ್ಪಂದಿಸಲು ಸಿಇಓ ಸೂಚನೆ

May 16, 2019

ಹಾಸನ: ತಾಲೂಕು ಆಡ ಳಿತಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯ ಪ್ರಕಾಶ್ ಅವರು ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕು ಪಂಚಾ ಯಿತಿಗಳಲ್ಲಿ ಅಧಿಕಾರಿಗಳ ಪ್ರಗತಿ ಪರಿ ಶೀಲನಾ ಸಭೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ, ಮುಖ್ಯ ಯೋಜನಾಧಿಕಾರಿ, ಯೋಜನಾ ನಿರ್ದೇಶಕರೊಂದಿಗೆ ಆಯಾ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಭೆಗಳನ್ನು ನಡೆಸಿದ ಸಿಇಓ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡು ವಂತೆ ಕಿವಿಮಾತು ಹೇಳಿದರು.

ಬರ ಪರಿಸ್ಥಿತಿ ಮುಂದುವರೆದಿರುವ ಹಿನ್ನೆಲೆ ಯಲ್ಲಿ ಹಾಗೂ ಮುಂಗಾರು ಸಮೀಪಿಸು ತ್ತಿರುವುದರಿಂದ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಬೇಕಿರುವುದರಿಂದ ಯಾವುದೇ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಮತ್ತು ಕಡ್ಡಾಯವಾಗಿ ಎಲ್ಲಾ ದಿನ ಮತ್ತು ಎಲ್ಲಾ ಸಮಯ ದಲ್ಲಿ ಕೇಂದ್ರ ಸ್ಥಾನದಲ್ಲಿ ರಬೇಕು ಎಂದು ನಿರ್ದೇಶನ ನೀಡಿದರು.

ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿ ಯುವ ನೀರು ಪೂರೈಕೆಯಾಗಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕ ಸದ್ಬಳಕೆ ಮಾಡಿಕೊಂಡು ಎಲ್ಲಾ ಗ್ರಾಮಗಳಲ್ಲಿ ಸಾರ್ವಜನಿಕ-ಸಮು ದಾಯದ ಸಂಪತ್ತುಗಳು ವೃದ್ಧಿಯಾಗ ಬೇಕು ಎಂದು ಹೇಳಿದರು.

ಅರಕಲಗೂಡು ಮತ್ತು ಹೊಳೆನರಸೀ ಪುರ ತಾಲೂಕುಗಳಲ್ಲಿ ಯಾವುದೇ ಟ್ಯಾಂಕರ್‍ಗಳ ಮೂಲಕ ಅಥವಾ ಖಾಸಗಿ ಕೊಳವೆಬಾವಿಗಳ ಅಧಿಗ್ರಹಣ ಮಾಡಿಲ್ಲ ವಾದರೂ ಮುಂದೆ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ ಗ್ರಾಮ ಗಳನ್ನು ಪಟ್ಟಿ ಮಾಡಿ ಅವುಗಳ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಕೂಡಲೇ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಜಲ ಸಂವರ್ಧನೆ, ಜಲಮರುಪೂರಣ, ಜಲಧಾರೆ, ಹಸಿರೀಕರಣ, ಸಣ್ಣ ನೀರಾ ವರಿ, ಮೇವಿನ ಲಭ್ಯತೆ, ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಹೂಳೆತ್ತುವ ಕಾರ್ಯ ಗಳಿಗೆ ಹೆಚ್ಚಿನ ಆದÀ್ಯತೆ ನೀಡಬೇಕು. ಎಲ್ಲಾ ಗ್ರಾಮಗಳಲ್ಲಿ ಇರುವ ಕೆರೆಗಳು ಅಭಿವೃದ್ಧಿ ಯಾಗಬೇಕು. ಆ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಠ ಎರಡರಂತೆ ಕೆರೆ ಗಳ ಪುನರುಜ್ಜೀವನ ಕಾರ್ಯ ಕೈಗೊಳ್ಳ ಬೇಕು ಎಂದು ತಿಳಿಸಿದರು.

ಪ್ರವಾಹ ಸಂಭವನೀಯ ಗ್ರಾಮ ಪಂಚಾ ಯಿತಿಗಳಲ್ಲಿ ತಾತ್ಕಾಲಿಕ ಪುನರ್ ವಸತಿ ಕೇಂದ್ರ ಹಾಗೂ ಆಹಾರ ವ್ಯವಸ್ಥೆಗೆ ಮೊದಲೇ ಪೂರ್ವ ಸಿದ್ಧತೆಗಳನ್ನು ನಡೆಸಿಕೊಳ್ಳಬೇಕು ಎಂದು ಹೇಳಿದರು.

ಎಲ್ಲಾ ತಾಲೂಕು ಆಸ್ಪತ್ರೆಗಳನ್ನು ಸಮು ದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸಾ ಸೌಲಭ್ಯಗಳು ಉತ್ತಮ ಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳಿಗೆ ರೋಗಿ ಗಳನ್ನು ಕಳಿಸುವುದು ಸಂಪೂರ್ಣವಾಗಿ ನಿಯಂತ್ರಣಗೊಳ್ಳಬೇಕು. ಈ ನಿಟ್ಟಿನಲ್ಲಿ ತಾಲೂಕು ವೈದ್ಯಾಧಿಕಾರಿಗಳು ನಿಗಾ ವಹಿಸಬೇಕು ಎಂದರು. ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿ ಕಾರಿಗಳು ಮತ್ತು ತಹಸೀಲ್ದಾರರು ತಾಲೂ ಕಿನ ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅತಿ ವೃಷ್ಟಿ ಮತ್ತು ಅನಾವೃಷ್ಟಿಯ ನಿರ್ವಹಣೆ ಯಲ್ಲಿ ಯಾವುದೇ ಲೋಪಗಳಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಯೋಜನಾ ನಿರ್ದೇಶಕ ಅರುಣ್‍ಕುಮಾರ್, ಹೊಳೆ ನರಸೀಪುರ ತಾಲೂಕು ತಹಸೀಲ್ದಾರ ರಾದ ವೈ.ಎಂ.ರೇಣುಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಧಿಕಾರಿ ಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Translate »