ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲು ಸಿಇಓ ಸೂಚನೆ
ಹಾಸನ

ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲು ಸಿಇಓ ಸೂಚನೆ

May 27, 2019

ಹಾಸನ: ಆರೋಗ್ಯ ಸೌಲಭ್ಯ ಪ್ರಮುಖ ಸಾಮಾಜಿಕ ಆದ್ಯತೆ ಹಾಗಾಗಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಜನಸಾಮಾ ನ್ಯರಿಗೆ ಗರಿಷ್ಠ ಚಿಕಿತ್ಸೆಗಳು ದೊರಕುವಂ ತಾಗಬೇಕು ಹಾಗೂ ಎಲ್ಲಾ ಯೋಜನೆ ಗಳು ಅರ್ಹ ಫಲಾನುಭವಿಗಳಿಗೆ ಸಮ ರ್ಪಕವಾಗಿ ತಲುಪಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯ ಪ್ರಕಾಶ್ ತಿಳಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಶನಿವಾರ ಜಿಲ್ಲಾ ಆರೋಗ್ಯ ಸಂಘದ ಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಮಾಜದ ನಿರ್ಲಕ್ಷಿತ, ಅಶಕ್ತ, ಧ್ವನಿರಹಿತ, ಧಮನಿತ ರನ್ನು ಗುರುತಿಸಿ ಅವರಿಗೆ ಆರೋಗ್ಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.

ಎಲ್ಲಾ ರೀತಿಯ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಜಿಲ್ಲಾದ್ಯಂತ, ವ್ಯವಸ್ಥಿತ ಪರಿ ಣಾಮಕಾರಿ ಯೋಜನೆಗಳ ಅನುಷ್ಠಾನ ಗಳು ಮುಂದುವರೆಯಬೇಕು. ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯಗಳು ದೊರೆಯುವಂ ತಾಗಬೇಕು ಎಂದು ಸೂಚನೆ ನೀಡಿದರು.

ಆರೋಗ್ಯ ಇಲಾಖೆಯ ವಿವಿಧ ಯೋಜನೆ ಗಳ ಬಗ್ಗೆ, ಚಿಕಿತ್ಸಾ ಸೌಲಭ್ಯಗಳು, ಮುಂಜಾ ಗ್ರತಾ ಕ್ರಮಗಳ ಬಗ್ಗೆ ಮಾಹಿತಿ, ಸಂವ ಹನ, ಶಿಕ್ಷಣ ಚಟುವಟಿಕೆಗಳು ಹೆಚ್ಚಾಗಿ ನಡೆಯಬೇಕು ಅರ್ಹ ಫಲಾನುಭವಿ ಗಳನ್ನು ಗುರುತಿಸಿ ಅವರಿಗೆ ಸೌಲಭ್ಯಗಳನ್ನು ತಲುಪಿಸಬೇಕು ಎಂದು ತಿಳಿಸಿದರು.

ಹಿರಿಯ ನಾಗರಿಕರು, ವಿಕಲಚೇತನರು, ಹದಿಹರೆಯದ ಹೆಣ್ಣುಮಕ್ಕಳ ಆರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನಹರಿಸಿ ಸುಲಭವಾಗಿ ಚಿಕಿತ್ಸೆ, ಸಮಾಲೋಚನಾ ಸೌಲಭ್ಯ ದೊರೆಯುವಂತಾಗಬೇಕು ದೀನ ದಲಿತರು, ಅಲ್ಪಸಂಖ್ಯಾತರು, ಆರ್ಥಿಕ ವಾಗಿ ಹಿಂದುಳಿದ ಎಲ್ಲಾ ವರ್ಗದ ಜನ ಸಮುದಾಯಕ್ಕೆ ಸರ್ಕಾರಿ ಆಸ್ಪತ್ರೆಯಲ್ಲೇ ಉತ್ತಮ ತಪಾಸಣೆ, ಚಿಕಿತ್ಸೆಗಳು ದೊರೆಯ ಬೇಕು ಎಂದು ನಿರ್ದೇಶನ ನೀಡಿದರು.

ಎಲ್ಲಾ ವೈದ್ಯಾಧಿಕಾರಿಗಳು ಕೇಂದ್ರ ಸ್ಥಾನ ದಲ್ಲಿದ್ದು, ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕು ಸ್ವಚ್ಛತೆ, ಘನ, ದ್ರವ ತ್ಯಾಜ್ಯಗಳ ವಿಲೇವಾರಿಯ ಬಗ್ಗೆ ಸಾರ್ವ ಜನಿಕರಿಗೆ ಅರಿವು ಮೂಡಿಸಬೇಕು. ಡೆಂಗ್ಯೂ, ಚಿಕುನ್ ಗುನ್ಯಾ, ಮಲೇರಿಯಾ ರೋಗಾಣು ಗಳ ನಿಯಂತ್ರಣ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ಎಂದು ತಿಳಿಸಿದರು.

ಆರೋಗ್ಯ ಇಲಾಖೆಯಿಂದ ಅಂಗನ ವಾಡಿಗಳ ಮೂಲಕ ಹಾಗೂ ಪ್ರಾಥಮಿಕ ಕೇಂದ್ರಗಳಿಗೆ ನೀಡಲಾಗುತ್ತಿರುವ ಸೌಲಭ್ಯ ಗಳು ಸಮರ್ಪಕವಾಗಿ ಸದ್ಬಳಕೆಯಾಗು ತ್ತಿವೆ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಅತಿಸಾರ ಬೇಧಿಯ ನಿಯಂತ್ರಣ ಪಾಕ್ಷಿಕ, ವಿಶ್ವ ತಂಬಾಕು ದಿನಾಚರಣೆ, ಪರೀಷ್ಕøತ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ, ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮ, ರಾಷ್ಟ್ರೀಯ ಅಂಧತ್ವ ನಿರ್ಮೂಲನಾ ಕಾರ್ಯ ಕ್ರಮ, ಸಮಗ್ರ ರೋಗಗಳ ಕಣ್ಗಾವಲು ಕಾರ್ಯ ಕ್ರಮ, ರಾಷ್ಟ್ರೀಯ ಕೀಟವಾಹಕ ರೋಗ ನಿಯಂತ್ರಣ ಕಾರ್ಯಕ್ರಮ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಾಷ್ಟ್ರೀಯ ಅಭಿಯಾ ನದ ಆರ್ಥಿಕ ಪ್ರಗತಿ, ಕುಟುಂಬ ಕಲ್ಯಾಣ ಕಾರ್ಯಕ್ರಮ ಇನ್ನಿತರ ಕಾರ್ಯ ಕ್ರಮಗಳ ಆಯೋಜನೆ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ಜಿಲ್ಲಾ ಆರ್.ಸಿಹೆಚ್ ಅಧಿಕಾರಿ ಡಾ.ಜನಾರ್ಧನ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ರಾಜ್‍ಗೋಪಾಲ್, ಕ್ಷಯರೋಗ ನಿಯಂ ತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ ಹಾಗೂ ವಿವಿಧ ತಾಲೂಕು ವೈದ್ಯಾಧಿಕಾರಿಗಳು, ಕಾರ್ಯಕ್ರಮ ಅಧಿಕಾರಿಗಳು ಹಾಜರಿದ್ದರು.

Translate »