ಡಿ.7 ರಂದು ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ
ಕೊಡಗು

ಡಿ.7 ರಂದು ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ

December 5, 2018

ಮಡಿಕೇರಿ:  ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ನಿರಾಶ್ರಿತ ಕುಟುಂ ಬದವರಿಗೆ ಮನೆ ನಿರ್ಮಿಸುವ ಕಾಮಗಾರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಡಿಸೆಂಬರ್ 7 ರಂದು ಮಾದಾಪುರದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಡಿ.7 ರಂದು ಮಧ್ಯಾಹ್ನ 12 ಗಂಟೆಗೆ ಮಾದಾಪುರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

Translate »