ದೇವಾಲಯಗಳ ತೆರವು ಮರುಕಳಿಸಲ್ಲ
ಮೈಸೂರು

ದೇವಾಲಯಗಳ ತೆರವು ಮರುಕಳಿಸಲ್ಲ

September 20, 2021

ಬಿಜೆಪಿ ಕಾರ್ಯಕಾರಿಣ ಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ದಾವಣಗೆರೆ: ಜನರು ಮೆಚ್ಚುವ ರೀತಿ ಆಡಳಿತ ನೀಡುತ್ತೇವೆ. ಯಾರಿಗೂ ತೊಂದರೆಯಾಗದAತೆ ಕ್ರಮ ತೆಗೆದುಕೊಳ್ಳಲಾಗುವುದು. ಮೈಸೂರಿನಲ್ಲಿ ದೇಗುಲ ತೆರವು ಮಾಡಿದ್ದು ಭಕ್ತರಲ್ಲಿ ಘಾಸಿ ಉಂಟಾಗಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮುಂದೆ ಇಂಥ ಘಟನೆ ನಡೆಯದಂತೆ ಎಚ್ಚರ ವಹಿಸಲಾಗು ವುದು. ಇಂಥ ಅಚಾತುರ್ಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಭಾನುವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯ ಕಾರಿಣ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂ ರಿನಲ್ಲಿ ನಡೆದ ದೇಗುಲಗಳ ತೆರವು ಅಚಾತುರ್ಯ ಘಟನೆ. ಶಾಂತಿ ಕದಡುವ ವಿಚಾರಗಳಿಗೆ ಪೂರ್ಣ ವಿರಾಮ ಹಾಡುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ನಿಮ್ಮ ಸಹಕಾರ ಇರಲಿ, ಸಹನೆಯಿಂದ ಇರಿ. ನಿಮ್ಮ ಮನಸ್ಸಿಗೆ ಮುಟ್ಟುವ ಹಾಗೆ ಕೆಲಸ ಮಾಡುತ್ತೇವೆ. ಮುಂಬರುವ ಜಿಪಂ, ತಾಪಂ, ವಿಧಾನಪರಿಷತ್, ಬಿಬಿಎಂಪಿ ಹಾಗೂ ಎರಡು ಉಪಚುನಾವಣೆ ಗಳಲ್ಲಿ ಗೆಲ್ಲಲು ರಣತಂತ್ರ ರೂಪಿಸಲಾಗುವುದು. ಈಗಾಗಲೇ ಈ ಬಗ್ಗೆ ಯಾವ ರೀತಿ ನಡೆಯಬೇಕೆಂಬ ಬಗ್ಗೆ ಸಮಾ ಲೋಚನೆ, ಚರ್ಚೆ ಮಾಡಲಾಗುತ್ತಿದೆ ಎಂದು ಹೇಳಿದರು.

ಸೊಸೈಟಿ ಇರಲಿ, ಲೋಕಸಭೆ ಇರಲಿ ಎಲ್ಲಾ ಚುನಾವಣೆ ಯನ್ನು ಗಂಭೀರವಾಗಿ ಪರಿಗಣ ಸಿದ್ದೇವೆ. ಬೆಳಗಾವಿ, ಹುಬ್ಬಳ್ಳಿ -ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಪಟ್ಟ ಪಡೆಯುವುದು ಖಚಿತ. ಬಿಬಿಎಂಪಿಯಲ್ಲೂ ನಾವೇ ಸ್ವತಂತ್ರ ವಾಗಿ ಅಧಿಕಾರಕ್ಕೆ ಬರುವುದು ಖಚಿತ. ದೊಡ್ಡಬಳ್ಳಾಪುರದಲ್ಲೂ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ಹಾಡಿ ಹೊಗಳಿದ ಸಿಎಂ: ಕಾರ್ಯಕಾರಿಣ ಯಲ್ಲಿಯೂ ಯಡಿಯೂರಪ್ಪರನ್ನು ಹಾಡಿ ಹೊಗಳಿದ ಸಿಎಂ ಬಸವರಾಜ ಬೊಮ್ಮಾಯಿ, ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪರ ದಣ ವರಿಯದ ಶ್ರಮ ಕಾರಣ. ೨ ಬಾರಿ ಅಧಿಕಾರಕ್ಕೆ ಬರುವುದು ಅಷ್ಟು ಸುಲಭ ಅಲ್ಲ. ಜನರ ಸಮಸ್ಯೆ ತಿಳಿದು ಪರಿಹರಿಸುವ ಕೆಲಸ ಮಾಡಿದ್ದರ ಪರಿಣಾಮ ನಾವು ಅಧಿಕಾರ ದಲ್ಲಿದ್ದೇವೆ. ಒಬ್ಬರೇ ಇದ್ದಾಗಲೂ, ನೂರು ಜನರು ಇದ್ದಾಗಲೂ ಯಡಿಯೂರಪ್ಪ ಅವರು ಪಕ್ಷ ಕಟ್ಟುವ ಕೆಲಸ ಮಾಡಿದ್ದಾರೆ. ಉತ್ತಮ ಆಡಳಿತದ ಪರಿಣಾಮ ಹಳ್ಳಿ ಹಳ್ಳಿಗಳಲ್ಲೂ ಯುವಕರು ಹಾಗೂ ರೈತರು ಬಿಜೆಪಿಯ ಪರ ಇದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ವೀಕ್ ಆಗಿದೆ. ಗಾಂಧೀಜಿ ಸಿದ್ದಾಂತವೇ ಬೇರೆ. ಆ ನಂತರ ಅಧಿಕಾರಕ್ಕೆ ಬಂದ ಗಾಂಧಿ ತತ್ವ, ಸಿದ್ಧಾಂತವೇ ಬೇರೆ ಬೇರೆ. ಇದು ತದ್ವಿರುದ್ಧವಾದ ರೀತಿಯಲ್ಲಿ ಕಾಂಗ್ರೆಸ್ ಬಳಸಿಕೊಂಡಿದೆ. ೬೦ ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಜನರ ಪರ ಕೆಲಸ ಮಾಡಿದ್ದೇ ಕಡಿಮೆ. ಕಾಂಗ್ರೆಸ್ಸೇತರ ಪಕ್ಷಗಳು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಕಿರುಕುಳ ಕೊಟ್ಟಿದೆ. ಪ್ರಾದೇಶಿಕವಾಗಿ ಕಾಂಗ್ರೆಸ್‌ನಲ್ಲಿ ನಾಯಕತ್ವ ಇಲ್ಲ. ಇದು ಬಿಜೆಪಿಯಲ್ಲಿದೆ. ಹಾಗಾ ಗಿಯೇ ಇವತ್ತು ಎಷ್ಟೋ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಇಂಥ ಅಚಾತುರ್ಯ ಮತ್ತೆ ಆಗಬಾರದು ಎಂದು. ಈಗ ನೊಂದುಕೊAಡಿರುವ ಹಾಗೂ ಬೇಸರದಲ್ಲಿ ಇರುವವರಿಗೆ

ಸಮಾಧಾನ ತರುವ ರೀತಿಯ ನಿರ್ಧಾರ ಮಾಡಲಾಗುತ್ತದೆ. ಈ ಘಟನೆ ಬಗ್ಗೆ ಈಗಾಗಲೇ ಕಾನೂನು ಪಂಡಿತರು, ಪಕ್ಷದ ಹಿರಿಯರು, ಸಂಘದ ಮುಖಂ ಡರ ಜೊತೆ ಸಮಾಲೋಚನೆ ಮಾಡಿದ್ದೇನೆ. ಯಾರೂ ಆತಂಕ ಪಡಬೇಕಿಲ್ಲ. ಕಾನೂನಾತ್ಮಕವಾಗಿಯೂ ರಕ್ಷಣೆ ನೀಡುತ್ತೇವೆ. ಮತ್ತೆ ಈ ರೀತಿ ಆಗುವುದಿಲ್ಲ, ನಿಮ್ಮೆಲ್ಲರಿಗೂ ಒಪ್ಪಿಗೆ ಆಗುವ ರೀತಿಯಲ್ಲೇ ಎಲ್ಲವೂ ಇರಲಿದೆ. -ಬಸವರಾಜ ಬೊಮ್ಮಾಯಿ

`ಸುಪ್ರೀಂ’ ಮೊರೆ ಹೋಗಲು ನಿರ್ಧಾರ  ಮಾಜಿ ಸಿಎಂ ಯಡಿಯೂರಪ್ಪ
ದಾವಣಗೆರೆ: ದೇಗುಲ ತೆರವು ಕಾರ್ಯಾಚರಣೆ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯಾದ್ಯಂತ ದೇಗುಲ ತೆರವು ವಿಚಾರದಲ್ಲಿ ಸುಪ್ರೀಂ ಕೋರ್ಟ್ ವಿಚಾರ ಸರಿಯಿಲ್ಲ ಎಂದು ನಮಗೆ ಅನಿಸುತ್ತಿದೆ. ಈ ವಿಚಾರದಲ್ಲಿ ಸಾಕಷ್ಟು ಗೊಂದಲ ಕೂಡ ಇದೆ. ದೇಗುಲ ತೆರವು ಸಂಬAಧ ಸಾರ್ವಜನಿಕರಲ್ಲಿ ಕೂಡ ಸಾಕಷ್ಟು ಆಕ್ರೋಶ ವ್ಯಕ್ತವಾಗು ತ್ತಿದೆ. ಹೀಗಾಗಿ ಆದೇಶ ಮರುಪರಿಶೀಲಿ ಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ್ದ ಸಿಎಂ ಬೊಮ್ಮಾಯಿ ಕೂಡ ದೇಗುಲ ತೆರವು ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದಿದ್ದರು.

Translate »