ಸಮ್ಮಿಶ್ರ ಸರ್ಕಾರದ ನಿಜಬಣ್ಣ ಬಯಲು  ಬಿಜೆಪಿ ಮೈಸೂರು ನಗರಾಧ್ಯಕ್ಷ ಡಾ.ಮಂಜುನಾಥ್ ವ್ಯಂಗ್ಯ
ಮೈಸೂರು

ಸಮ್ಮಿಶ್ರ ಸರ್ಕಾರದ ನಿಜಬಣ್ಣ ಬಯಲು ಬಿಜೆಪಿ ಮೈಸೂರು ನಗರಾಧ್ಯಕ್ಷ ಡಾ.ಮಂಜುನಾಥ್ ವ್ಯಂಗ್ಯ

January 6, 2019

ಮೈಸೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸುವ ಮೂಲಕ ರಾಜ್ಯದ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ನಿಜಬಣ್ಣ ಬಯಲು ಮಾಡಿಕೊಂಡಿದೆ. ಜನರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಬಿಜೆಪಿ ಮೈಸೂರು ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, 2 ತಿಂಗಳ ಹಿಂದೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ದಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗುತ್ತಿತ್ತು. ನಂತರ ತೈಲ ಬೆಲೆ ಇಳಿತವಾಗಿದ್ದರಿಂದ ಪೆಟ್ರೋಲ್, ಡೀಸೆಲ್ ದರ 14 ರೂ. ಇಳಿಕೆಯಾಗಿದೆ. ಇದರಿಂದ ಬೊಬ್ಬೆ ಹೊಡೆಯುತ್ತಿದ್ದ ವಿಪಕ್ಷದವರು, ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ಡಾ.ಮಂಜುನಾಥ್ ವ್ಯಂಗ್ಯವಾಡಿದ್ದಾರೆ.

ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುವುದನ್ನೇ ಕಾಯುತ್ತಾ ಕುಳಿತಿದ್ದ ಮುಖ್ಯ ಮಂತ್ರಿ ಕುಮಾರಸ್ವಾಮಿ ಪೆಟ್ರೋಲ್ ಶೇ.32, ಡೀಸೆಲ್ ಶೇ.21ರಷ್ಟು ತೆರಿಗೆ ಹೆಚ್ಚಿಸಿ, ಈ ಹಿಂದೆ ಇವೆರಡರ ತೆರಿಗೆ ಇಳಿಸಿದ್ದ ಬೂಟಾಟಿಕೆ ಬಣ್ಣ ಬಯಲು ಮಾಡಿ ಕೊಂಡಿದ್ದಾರೆ. ವಾಸ್ತವವಾಗಿ ರಾಜ್ಯದ ಜನರ ಬಗ್ಗೆ ಕಾಳಜಿ, ಕಳಕಳಿ ಇದ್ದಿದ್ದರೆ ಇಂತಹ ಕೆಲಸಕ್ಕೆ ಸಿಎಂ ಕುಮಾರಸ್ವಾಮಿ ಕೈ ಹಾಕುತ್ತಿರಲಿಲ್ಲ. ಜನರ ಜೇಬಿಗೆ ಕತ್ತರಿ ಹಾಕುವ ಮೂಲಕ ವಂಚಿಸಲಾಗಿದೆ ಎಂದು ದೂರಿದ್ದಾರೆ.

ಭ್ರಷ್ಟಾಚಾರದ ಹಣ: ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಕಚೇರಿ ಸಿಬ್ಬಂದಿ ಬಳಿ 26 ಲಕ್ಷ ರೂ. ಸಿಕ್ಕಿರುವುದು ಭ್ರಷ್ಟಾಚಾರದ ಹಣ. ನೈತಿಕ ಹೊಣೆ ಹೊತ್ತು ಪುಟ್ಟ ರಂಗಶೆಟ್ಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಡಾ.ಮಂಜುನಾಥ್ ಆಗ್ರಹಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಜನತೆ ವಿಶ್ವಾಸ ಕಳೆದುಕೊಂಡಿದೆ. ರೈತರ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅನ್ನದಾತgನ್ನುÀ ವಂಚಿಸುತ್ತಿ ದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್, ಜೆಡಿಎಸ್‍ಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.

Translate »