ಬೆಂಗಳೂರು, ಮೇ ೮- ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರ ದರ್ಶಕತೆ ಹಾಗೂ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಲಸಂಪನ್ಮೂಲ ಇಲಾಖೆ ನಿವೃತ್ತ ಕಾರ್ಯ ದರ್ಶಿ ಬಿ.ಜಿ. ಗುರುಪಾದಸ್ವಾಮಿ (ಎಂಜಿನಿ ಯರಿಂಗ್ ಪರಿಣತ) ಹಾಗೂ ರಾಜ್ಯ ಲೆಕ್ಕ ಪತ್ರ ಇಲಾಖೆ ನಿವೃತ್ತ ನಿರ್ದೇಶಕ ಕೆ.ನಂದಕುಮಾರ್ ಈ ಸಮಿತಿಯ ಸದಸ್ಯ ರಾಗಿ ನೇಮಕಗೊಂಡಿದ್ದಾರೆ. ಈ ಸಮಿತಿಯು ಈಗಾಗಲೇ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳಂತೆ ೫೦ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಟೆಂಡರ್‌ಗಳು, ಪಾರದರ್ಶಕತೆ, ನ್ಯಾಯಸಮ್ಮತವಾಗಿರುವ ಕುರಿತು ಪರಿಶೀಲನೆ ನಡೆಸಲಿದೆ. ಯೋಜನೆ ರೂಪಿಸಲಾಗಿರುವ ರೀತಿ, ಅದಕ್ಕೆ ತಗುಲುವ ವೆಚ್ಚದ ಕುರಿತು ಸಮಿತಿ ಪರಿಶೀಲನೆ ನಡೆಸಲಿದೆ.