ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಿಂದ ಕಾಂಗ್ರೆಸ್‍ಗೆ ಹಿನ್ನಡೆ ಆಗಿಲ್ಲ
ಮೈಸೂರು

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಿಂದ ಕಾಂಗ್ರೆಸ್‍ಗೆ ಹಿನ್ನಡೆ ಆಗಿಲ್ಲ

October 23, 2018

ಮೈಸೂರು: ಪ್ರತ್ಯೇಕ ಲಿಂಗಾ ಯತ ಧರ್ಮದ ವಿಚಾರವಾಗಿ ಹಿಂದಿನ ಸರ್ಕಾರ ಕೈಗೊಂಡ ನಿರ್ಧಾರದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಅಂದಿನ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇ ಕಾರಣ ಎಂಬರ್ಥದಲ್ಲಿ ಸಚಿವ ಡಿಕೆಶಿ ಧರ್ಮ ಸಮ್ಮೇಳನವೊಂದ ರಲ್ಲಿ ಹೇಳಿಕೆ ನೀಡಿದ್ದರು. ಆದರೆ, ಈ ಶಿಫಾರಸ್ಸು, ತಜ್ಞರ ವರದಿ ಆಧರಿಸಿ ಮತ್ತು ಅಂದಿನ ಸಚಿವ ಸಂಪುಟ ತೆಗೆದು ಕೊಂಡ ಒಮ್ಮತ ನಿರ್ಧಾರವಾಗಿದೆ. ಇದರಲ್ಲಿ ಡಿ.ಕೆ.ಶಿವ ಕುಮಾರ್ ಸಹ ಇದ್ದರು ಎಂಬುದನ್ನು ಮರೆಯುವಂತಿಲ್ಲ.

ಜತೆಗೆ ಉತ್ತರ ಕರ್ನಾಟಕದಲ್ಲಿ ಲಿಂಗಾಯತರ ಪ್ರಾಬಲ್ಯ ವಿದ್ದ ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಬಹುತೇಕ ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು, ಇತರೆ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿ ರುವುದನ್ನು ಸಚಿವ ಡಿ.ಕೆ.ಶಿವಕುಮಾರ್ ತಿಳಿಯದೇ ಮಾತನಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಮುಂಬೈ ಹಾಗೂ ಹೈದ್ರಾಬಾದ್ ಕರ್ನಾಟಕದ ಭಾಗದಲ್ಲಿ ಲಿಂಗಾ ಯತ ಮತದಾರರೇ ಅಧಿಕ ಸಂಖ್ಯೆಯಲ್ಲಿದ್ದು, ಈ ಪ್ರದೇಶಗಳಲ್ಲಿ ಪ್ರತ್ಯೇಕ ಧರ್ಮದ ಹೋರಾಟದ ಕೂಗು ಚುನಾವಣಾ ಸಂದರ್ಭದಲ್ಲಿ ತೀವ್ರತೆ ಪಡೆದುಕೊಂಡಿತ್ತು. ಈ ಹೋರಾಟಕ್ಕೆ ಮಣಿದ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ತಜ್ಞರು ನೀಡಿರುವ ವರದಿ ಆಧಾರದ ಮೇಲೆ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.

ಈ ಅಂಶವನ್ನು ಅರಿಯದೇ ಸಚಿವ ಡಿ.ಕೆ.ಶಿವ ಕುಮಾರ್, ಇದೀಗ ತಮ್ಮ ರಾಜಕೀಯ ಬೇಳೆ ಬೇಯಿಸಿ ಕೊಳ್ಳಲು ಪ್ರತ್ಯೇಕ ಲಿಂಗಾಯತ ಧರ್ಮದ ಶಿಫಾರಸ್ಸಿನ ಬಗ್ಗೆ ಮಾತನಾಡದಂತೆ ಎಚ್ಚರಿಕೆ ವಹಿಸಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಕಾರ್ಯದರ್ಶಿ ಶರಣ ಮಹದೇವಪ್ಪ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Translate »