ಮಾ.16ಕ್ಕೆ ಕಾಂಗ್ರೆಸ್ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಮೈಸೂರು

ಮಾ.16ಕ್ಕೆ ಕಾಂಗ್ರೆಸ್ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ

March 15, 2019

ಬೆಂಗಳೂರು: ಜೆಡಿಎಸ್ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಈ ತಿಂಗಳ 16ರಂದು ತನ್ನ ಪಾಲಿನ ಎಲ್ಲಾ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸ ಲಿದೆ. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ತಲಾ 14 ಲೋಕಸಭಾ ಕ್ಷೇತ್ರ ಗಳಿಗೆ ಚುನಾವಣೆ ನಡೆಯಲಿದೆ.

ಪ್ರತಿ ಬಾರಿಯಂತೆ ಅಭ್ಯರ್ಥಿಗಳನ್ನು ಕೊನೆ ಗಳಿಗೆಯಲ್ಲಿ ಪ್ರಕಟಿಸಿ, ಚುನಾ ವಣಾ ಪ್ರಚಾರಕ್ಕೆ ಸಮಯಾವಕಾಶ ಇಲ್ಲದಂತೆ ಆಗುತ್ತಿತ್ತು. 2 ಮತ್ತು 3ನೇ ಹಂತದಲ್ಲಿ ಚುನಾವಣೆ ನಡೆಯುತ್ತಿರು ವುದರಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ ನಿರ್ಧಾರಕ್ಕೆ ಬಂದಿದ್ದಾರೆ.
ಹಾಲಿ ಎಲ್ಲಾ 10ರಲ್ಲಿ 9 ಸಂಸದರಿಗೆ ಮತ್ತೆ ಟಿಕೆಟ್ ದೊರೆಯಲಿದೆ, ಉಳಿದ 11 ಕ್ಷೇತ್ರಗಳಿಗಷ್ಟೇ ಹೊಸ ಮುಖಗಳು ಬರಲಿವೆ. ಪಟ್ಟಿ ಪ್ರಕಟಕ್ಕೂ ಮುನ್ನ ಮಿತ್ರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರೊಂದಿಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಚರ್ಚೆ ಮಾಡಲಿದ್ದಾರೆ. ಬೆಂಗಳೂರು ನಗರದ ಮೂರು ಕ್ಷೇತ್ರಗಳ ಪೈಕಿ ಕಾಂಗ್ರೆಸ್‍ಗೆ ಬೆಂಗಳೂರು ದಕ್ಷಿಣ ಹಾಗೂ ಕೇಂದ್ರ ಕ್ಷೇತ್ರಗಳು ಲಭ್ಯವಾಗಿವೆ. ಬೆಂಗಳೂರು ದಕ್ಷಿಣ ಕ್ಷೇತ್ರ ದಲ್ಲಿ ಸ್ಪರ್ಧಿಸಲು ಮುಖಂಡರು ಹಿಂದೇಟು ಹಾಕುತ್ತಿದ್ದಾರೆ. ಮಾಜಿ ಸಚಿವ ರಾಮ ಲಿಂಗಾರೆಡ್ಡಿ, ಮಾಜಿ ಶಾಸಕ ಪ್ರಿಯಾಕೃಷ್ಣ ಅವರ ಹೆಸರುಗಳು ಕೇಳಿ ಬಂದಿವೆಯಾ ದರೂ ಈ ಇಬ್ಬರು ಸ್ಪರ್ಧೆಗೆ ಹೆಚ್ಚಿನ ಒಲವು ತೋರುತ್ತಿಲ್ಲ. ಕಳೆದ ಬಾರಿ ಸ್ಪರ್ಧಿಸಿದ್ದ ಉದ್ಯಮಿ ನಂದನ್ ನಿಲೇಕಣಿ ಆಧಾರ್ ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ.

ಅವರ ಪತ್ನಿ ರೋಹಿಣಿ ನಿಲೇಕಣಿ ಅವರನ್ನು ಕಣಕ್ಕಿಳಿಸುವ ತಯಾರಿಗಳು ನಡೆದಿವೆ.
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಸುಮಾರು ಒಂದು ಡಜನ್‍ಗೂ ಹೆಚ್ಚು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಬೀದರ್ ಕ್ಷೇತ್ರವನ್ನು ಮತ್ತೆ ವಶಕ್ಕೆ ಪಡೆಯಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಪುತ್ರ ವಿಜಯ್‍ಸಿಂಗ್, ಸಿದ್ದರಾಮಯ್ಯ ಆಪ್ತ ಸಿ.ಎಂ.ಇಬ್ರಾಹಿಂ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು. ಕೊಪ್ಪಳದಲ್ಲಿ ಮಾಜಿ ಸಂಸದ ಬಸವರಾಜ ರಾಯರೆಡ್ಡಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳು ಕಂಡುಬರುತ್ತಿವೆ. ಬಸವರಾಜ್ ಹಿಟ್ನಾಳ್, ವಿರೂಪಾಕ್ಷಪ್ಪ ಸಹ ಟಿಕೆಟ್‍ಗೆ ಪೈಪೆÇೀಟಿ ನಡೆಸುತ್ತಿದ್ದು, ಜೊತೆಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಯಾಗಿದ್ದು, ಅದನ್ನು ಈ ಬಾರಿ ಛಿದ್ರ ಮಾಡಲು ಮತ್ತೆ ಮಾಜಿ ಸಚಿವ ವಿನಯ್‍ಕುಲಕರ್ಣಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ. ಹಿರಿಯ ಕಾಂಗ್ರೆಸ್ಸಿಗ ಐ.ಜಿ.ಸನದಿ ಪುತ್ರ ಶಾಕೀರ್ ಸನದಿ ಹಾಗೂ ಹಿರಿಯ ಕಾಂಗ್ರೆಸ್ಸಿಗ ವೀರಣ್ಣ ಮತ್ತಿಕಟ್ಟಿ ಟಿಕೆಟ್ ಕೇಳುತ್ತಿದ್ದಾರೆ.

Translate »