ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಹ್ಯಾಟ್ರಿಕ್ ಗೆಲುವು
ಚಾಮರಾಜನಗರ

ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಹ್ಯಾಟ್ರಿಕ್ ಗೆಲುವು

April 9, 2019

ಕಾಂಗ್ರೆಸ್ ಮುಖಂಡ ಹೆಚ್.ಎಂ. ಗಣೇಶ್ ಪ್ರಸಾದ್ ಭವಿಷ್ಯ
ಗುಂಡ್ಲುಪೇಟೆ: ಚಾ.ನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಈ ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಮುಖಂಡ ಹೆಚ್.ಎಂ.ಗಣೇಶ್ ಪ್ರಸಾದ್ ಭವಿಷ್ಯ ನುಡಿದರು.

ತಾಲೂಕಿನ ಯಡಹುಂಡಿ, ಸಂಗೇಗೌಡನಹುಂಡಿ, ತ್ರಿಯಂಬಕಪುರ, ಕೆಲಸೂರು, ಲಕ್ಕೂರು, ದೇಪಾಪುರ, ಶೀಲವಂತಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳ ಮೂಲಕ ಬಡವರಿಗೆ ಅಗತ್ಯವಾದ ಕಾರ್ಯಕ್ರಮಗಳನ್ನು ನೀಡಿತ್ತು. ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸದ ಆರ್. ಧ್ರುವನಾರಾಯಣ್‍ರನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿ ಮತ್ತಷ್ಟು ಅಭಿವೃದ್ಧಿಗೆ ನಾಂದಿ ಹಾಡಿ ಎಂದರು.

ಕಳೆದ ಎರಡು ಬಾರಿಯೂ ಸಂಸದರಾಗಿದ್ದ ಆರ್.ಧ್ರುವ ನಾರಾಯಣ್ ತಮ್ಮ ಸರಳ ಸಜ್ಜನಿಕೆಯಿಂದ ಸಾಮಾನ್ಯ ಜನರ ಸಮಸ್ಯೆಗಳಿಗೂ ಸ್ಪಂದಿಸುತ್ತಿದ್ದಾರೆ. ಹೆಚ್ಚಿನ ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅಲ್ಲದೆ ಉತ್ತಮ ಸಂಸದೀಯ ನಡವಳಿಕೆಯಿಂದ ಕ್ಷೇತ್ರದ ಮತದಾರರ ಗೌರವ ಹೆಚ್ಚಿಸಿದ್ದಾರೆ. ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಈ ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ. ಆದ್ದರಿಂದ ಈ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತನೀಡಿ ವಿಜೇತರನ್ನಾಗಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಮಾಜಿ ಸಂಸದ ಎ.ಸಿದ್ದರಾಜು, ಚಾಮುಲ್ ನಿರ್ದೇಶಕ ಹೆಚ್.ಎಸ್.ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಪಂ ಸದಸ್ಯರಾದ ಬಿ.ಕೆ.ಬೊಮ್ಮಯ್ಯ, ಕೆ.ಎಸ್.ಮಹೇಶ್, ಅಶ್ವಿನಿ ವಿಶ್ವನಾಥ್, ಜಿಪಂ ಮಾಜಿ ಉಪಾಧ್ಯಕ್ಷ ಮಹದೇವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಮುನಿರಾಜು, ಮುಖಂಡರಾದ ಎಲ್.ಸುರೇಶ್, ಎಚ್.ಎನ್.ಬಸವರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ. ಶಿವಪ್ಪ, ಗ್ರಾ.ಪಂ.ಅಧ್ಯಕ್ಷ ಉಮೇಶ್ ಸೇರಿದಂತೆ ಮುಖಂಡರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

Translate »