ಹೊರ ರಾಜ್ಯಕ್ಕೆ ಕಬ್ಬು ಸಾಗಾಣಿಕೆ ವೆಚ್ಚ ಸರ್ಕಾರವೇ ಭರಿಸುತ್ತದೆಕಂದಾಯ ಸಚಿವ ಆರ್.ಅಶೋಕ್
ಮೈಸೂರು

ಹೊರ ರಾಜ್ಯಕ್ಕೆ ಕಬ್ಬು ಸಾಗಾಣಿಕೆ ವೆಚ್ಚ ಸರ್ಕಾರವೇ ಭರಿಸುತ್ತದೆಕಂದಾಯ ಸಚಿವ ಆರ್.ಅಶೋಕ್

October 14, 2019

ಬೆಂಗಳೂರು: ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ್ದು, ಕಬ್ಬು ಬೆಳೆಗಾರರು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಕಬ್ಬು ಸಾಗಿಸಲು ತಗಲುವ ವೆಚ್ಚವನ್ನು ಸರ್ಕಾರವೇ ಭರಿಸಲು ಕ್ರಮ ಕೈಗೊಳ್ಳುವು ದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ.

ವಿಧಾನಪರಿಷತ್‍ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಂಡ್ಯ, ಮೈಸೂರು ಭಾಗದಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಮುಚ್ಚಿರುವ ಹಿನ್ನೆಲೆಯಲ್ಲಿ ಕಬ್ಬು ಸಾಗಣೆ ವೆಚ್ಚವನ್ನು ಭರಿಸಬೇಕೆಂದು ಒತ್ತಾಯಿಸಿ ದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಆರ್.ಅಶೋಕ್, ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸ ಲಾಗಿದ್ದು, ಕೆಲವು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಮಾಲೋಚನೆ ಮಾಡಿ ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಶೋಕ್ ತಿಳಿಸಿದರು.

Translate »