ನಾಡಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ಇನ್ನಿಲ್ಲ
ಮೈಸೂರು

ನಾಡಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ಇನ್ನಿಲ್ಲ

May 27, 2021

ಬೆಂಗಳೂರು, ಮೇ 26-ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಬುಧವಾರ ಮಧ್ಯಾಹ್ನ ನಿಧನರಾದರು. ಅವರಿಗೆ 103 ವರ್ಷ ವಯಸ್ಸಾಗಿತ್ತು.
ಹೃದಯ ಸಂಬಂಧಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಚ್.ಎಸ್. ದೊರೆಸ್ವಾಮಿ ಅವರನ್ನು ಬೆಂಗಳೂರು ಜಯದೇವ ಆಸ್ಪತ್ರೆಗೆ ದಾಖಲಿಸಲಾ ಗಿತ್ತು. ಆದರೆ ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ಅವರು ನಿಧನ ರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ದೊರೆ ಸ್ವಾಮಿ ಅವರಿಗೆ ಹೃದಯ ಕಾಯಿಲೆ, ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ (ಶ್ವಾಸನಾಳಗಳ ಒಳಪೆÇರೆಯ ಉರಿ ಯೂತ) ಸೇರಿದಂತೆ ವಿವಿಧ ವಯೋ ಸಹಜ ಸಮಸ್ಯೆಗಳು ಇದ್ದವು. ಕೆಲದಿನಗಳ ಹಿಂದೆ ಹೃದಯ ಸಮಸ್ಯೆ ಸಂಬಂಧ ಜಯದೇವ ಆಸ್ಪತ್ರೆಗೆ ದಾಖಲಾದ ಅವ ರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಅವರಿಗೆ ಜ್ವರ, ನೆಗಡಿ ಹಾಗೂ ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಆಗ ಕೊರೊನಾ ಸೋಂಕಿತರಾಗಿರುವುದು ಖಚಿತಪಟ್ಟಿತ್ತು. 7 ದಿನಗಳಲ್ಲಿ ಅವರು ಚೇತರಿಸಿಕೊಂಡು ಜಯನಗರದಲ್ಲಿ ರುವ ತಮ್ಮ ನಿವಾಸಕ್ಕೆ ತೆರಳಿದ್ದರು.

ಕಳೆದ 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿಯಿಂದ ಆರೋಗ್ಯ ಸ್ವಲ್ಪ ಹದಗೆಟ್ಟು ಇಂದು ಬೆಳಿಗ್ಗೆ ಉಸಿರಾಟಕ್ಕೆ ತೊಂದರೆ ಆಗಿತ್ತು. ತೀವ್ರ ನಿಗಾ ಘಟಕಕ್ಕೆ ಕರೆದುಕೊಂಡು ಬಂದ ಸ್ವಲ್ಪ ಹೊತ್ತಿಗೆ ಹೃದಯಾಘಾತ ಆಯಿತು. ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾದರು ಎಂದು ಹೇಳಲಾಗಿದೆ.

ಎಚ್.ಎಸ್.ದೊರೆಸ್ವಾಮಿ ಅವರ ಪೂರ್ಣ ಹೆಸರು ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ. ಏಪ್ರಿಲ್ 10, 1918ರಲ್ಲಿ ಜನಿಸಿದ್ದ ಅವರು ಸ್ವಾತಂತ್ರ್ಯ ಹೋರಾಟ ದಲ್ಲಿ ಪಾಲ್ಗೊಂಡಿದ್ದರು. ಬ್ರಿಟಿಷರ ಕಾಲ ದಲ್ಲಿ ಕನ್ನಡದ ಜನಪ್ರಿಯ ಪತ್ರಿಕೆ ಎನಿ ಸಿದ್ದ `ಪೌರವಾಣಿ’ ವರದಿಗಾರರಾಗಿ ಜನ ಪ್ರಿಯರಾಗಿದ್ದರು. ಸಾಹಿತ್ಯ ಮಂದಿರದ ಮೂಲಕ ಹಲವು ಪುಸ್ತಕಗಳನ್ನು ಪ್ರಕಟಿ ಸಿದ್ದರು. ಇತಿಹಾಸಕಾರ ರಾಮಚಂದ್ರ ಗುಹಾ ಅವರು ದೊರೆಸ್ವಾಮಿ ಅವ ರನ್ನು ಕುರಿತು, `ದೊರೆಸ್ವಾಮಿ ಅಂದರೆ ಕರ್ನಾಟಕದ ಸಾಕ್ಷಿಪ್ರಜ್ಞೆ’ ಎಂದು ಬಣ್ಣಿಸಿದ್ದರು. ಅಂದಿನ ಮೈಸೂರು ಪ್ರಾಂತ್ಯ ದಲ್ಲಿದ್ದ ಕನಕಪುರ ತಾಲೂಕು ಹಾರೋ ಹಳ್ಳಿ ದೊರೆಸ್ವಾಮಿ ಅವರ ಜನ್ಮಸ್ಥಳ. ಕೇವಲ 5 ವರ್ಷದವರಿದ್ದಾಗ ತಮ್ಮ ತಂದೆ-ತಾಯಿಯನ್ನು ಕಳೆದುಕೊಂ ಡರು. ತಾತ ಶ್ಯಾನುಭೋಗ ಶಾಮಣ್ಣ ಅವರ ಪಾಲನೆಯಲ್ಲಿ ದೊರೆಸ್ವಾಮಿ ದೊಡ್ಡವರಾದರು. ದೊರೆಸ್ವಾಮಿ ಅವರ ಅಣ್ಣ ಸೀತಾರಾಮ್ ಬೆಂಗಳೂ ರಿನ ಮೇಯರ್ ಆಗಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಜೂನ್ 1942ರಲ್ಲಿ ಬೆಂಗಳೂ ರಿನ ಪ್ರೌಢಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿ ವೃತ್ತಿ ಆರಂಭಿಸಿದರು. ಅದೇ ವರ್ಷ ಆಗಸ್ಟ್ ತಿಂಗಳಲ್ಲಿ ಆರಂಭವಾದ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಕ್ರಿಯ ರಾಗಿ ಪಾಲ್ಗೊಂಡರು. ಬ್ರಿಟಿಷರ ಆಡಳಿತಕ್ಕೆ ಧಕ್ಕೆ ತರುವ ಉದ್ದೇಶದಿಂದ ದಾಖಲೆಗಳನ್ನು ಸುಟ್ಟುಹಾಕಲೆಂದು ಪೆÇೀಸ್ಟ್‍ಬಾಕ್ಸ್‍ಗಳು ಮತ್ತು ರೆಕಾರ್ಡ್ ರೂಮ್‍ಗಳಲ್ಲಿ ಟೈಮ್‍ಬಾಂಬ್ ಗಳನ್ನು ಸ್ಫೋಟಿಸಿದ್ದರು. ಕಾರ್ಮಿಕ ಚಳವಳಿಗಳಲ್ಲೂ ಸಕ್ರಿಯರಾಗಿ ಪಾಲ್ಗೊಂಡಿದ್ದರು. ದೊರೆಸ್ವಾಮಿ ಅವರು ತಮ್ಮ 19ನೇ ವಯಸ್ಸಿನಲ್ಲಿ ಲಲಿತಮ್ಮ ಅವರನ್ನು ಮದುವೆ ಯಾಗಿದ್ದರು. ಲಲಿತಮ್ಮ ಅವರು 2019ರ ಡಿಸೆಂಬರ್ 17ರಂದು ನಿಧನರಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಬುಧವಾರ ಸಂಜೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು. ದೊರೆಸ್ವಾಮಿ ಅವರ ಪುತ್ರ ರಾಜು ಅಂತಿಮ ವಿಧಿ ವಿಧಾನಗಳನ್ನು ಪೂರೈಸಿದರು.

Translate »