ಪ್ರಜ್ವಲ್ ರೇವಣ್ಣರಿಂದ 69 ಎಕರೆ ಸರ್ಕಾರಿ ಭೂಮಿ ಕಬಳಿಕೆ ಪರಿಶೀಲಿಸಿ ವರದಿ ನೀಡುವಂತೆ ಡಿಸಿಗೆ ಕೋರ್ಟ್ ಸೂಚನೆ ಮಾಜಿ ಸಚಿವ ಎ.ಮಂಜು ದಾಖಲಿಸಿದ್ದ ಪ್ರಕರಣ

ಹಾಸನ:ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಿ ಜ.14ರೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.

ಪ್ರಜ್ವಲ್ ರೇವಣ್ಣ ಅವರು ಹಾಸನ ಜಿಲ್ಲೆ ದುದ್ದ ಹೋಬಳಿಯ ಗೌರಿ ಪುರ ಮತ್ತು ಸೋಮನಹಳ್ಳಿ ಬಳಿ 69 ಎಕರೆ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆ ಸೃಷ್ಠಿಸಿ ಕಬಳಿಸಿದ್ದಾರೆ ಎಂದು ಮಾಜಿ ಸಚಿವ ಎ.ಮಂಜು ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾ ಲಯದಲ್ಲಿ ದೂರು ದಾಖಲಿಸಿದ್ದರು.

ಈ ದೂರಿನ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು, ಪ್ರಜ್ವಲ್ ರೇವಣ್ಣ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನ ಲಾದ ಸರ್ಕಾರಿ ಭೂಮಿ ಬಗ್ಗೆ ಪರಿಶೀಲನೆ ನಡೆಸಿ ಜ.14ರೊಳಗಾಗಿ ವರದಿ ಸಲ್ಲಿಸು ವಂತೆ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸೂಚನೆ ನೀಡಿದ್ದಾರೆ.