ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು
ಹಾಸನ

ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

April 25, 2018

ಹೊಳೆನರಸೀಪುರ: ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ಇಂದು ನಡೆದಿದೆ.

ಪಟ್ಟಣದ ವಕ್ಕರಣೆ ಬಾವಿ ಬೀದಿಯ ನಿವಾಸಿ ಪೋಲಿಸ್ ಸಿಬ್ಬಂದಿ ಶೇಷಣ್ಣರ ಪುತ್ರ ಮಹೇಶ್ ಮೃತರು. ಮನೆ ಬಳಿ ಇರುವ ಕುಡಿಯುವ ನೀರಿನ ಬೋರ್‍ವೆಲ್ ಬಳಿ ಮೋಟರ್ ಆನ್ ಮಾಡಲು ಹೋದಾಗ ವಿದ್ಯುತ್ ಪ್ರವಹಿಸಿ ಕುಸಿದು ಬಿದ್ದಿದ್ದಾರೆ. ಅಸ್ವಸ್ಥರಾದ ಇವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ

ದಾಖಲಿಸಲಾಯಿತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದರು.
ಮೃತರು ಪತ್ನಿ, ಬಂಧು-ಬಳಗವನ್ನು ಅಗಲಿದ್ದಾರೆ. ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಸಂತಾಪ ಸೂಚಿಸಿದ್ದಾರೆ.

Translate »