ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ಹಾಸನ

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

September 23, 2018

ಚನ್ನರಾಯಪಟ್ಟಣ: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೇವರಾಜು(55) ಮೃತರು. ಪತ್ನಿ ಜತೆಯಲ್ಲಿ ಮಧ್ಯಾಹ್ನ ತೋಟದ ಕೆಲಸ ಮಾಡುತ್ತಿದ್ದ ವೇಳೆ ಮರದ ರೆಂಬೆ ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ತುಂಡಾಗಿ ದೇವರಾಜು ಅವರ ಮೇಲೆ ಬಿದ್ದಿದೆ. ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಅಸುನೀಗಿದರು. ಹಿರೀಸಾವೆ ಠಾಣೆಯಲ್ಲಿ ದೂರು ದಾಖಲಾಗಿದೆ.

Translate »