ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
ಮೈಸೂರು

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

February 15, 2021

ಮೈಸೂರು,ಫೆ.14(ಆರ್‍ಕೆ)-ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೈಸೂರಿನ ಹೆಬ್ಬಾಳು 2ನೇ ಹಂತದ ನೀವಾಗಿ ನಿಂಗಪ್ಪ ಅವರ ಮಗ ಮಲ್ಲಿಕಾರ್ಜುನ(54) ಸಾವನ್ನಪ್ಪಿದವರು. ಹೆಬ್ಬಾಳು ಕೈಗಾರಿಕಾ ಬಡಾವಣೆಯ ಖಾಸಗಿ ಇಂಜಿನಿಯರಿಂಗ್ ಕಂಪನಿ ಉದ್ಯೋಗಿಯಾಗಿದ್ದ ಅವರು ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಸಹೋದ್ಯೋಗಿ ನಾಗರಾಜ್ ಎಂಬುವರ ಬೈಕಿನಲ್ಲಿ ಬರುತ್ತಿದ್ದಾಗ ಜನವರಿ 31ರ ಬೆಳಿಗ್ಗೆ 8 ಗಂಟೆಯಲ್ಲಿ ಕೆಆರ್‍ಎಸ್ ರಸ್ತೆಯ ರಿಂಗ್ ರೋಡ್ ಜಂಕ್ಷನ್ (ರಾಯಲ್ ಇನ್ ಜಂಕ್ಷನ್)ನಲ್ಲಿ ಹಿಂದಿನಿಂದ ಬಂದ ಮಾರುತಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿತ್ತು. ಬೈಕಿನ ಹಿಂಬದಿ ಕುಳಿತಿದ್ದ ಮಲ್ಲಿಕಾರ್ಜುನ ಅವರ ತಲೆಗೆ ತೀವ್ರ ಗಾಯ ಗಳಾಗಿದ್ದು, ಅವರನ್ನು ಗೋಕುಲಂನ ಆದಿತ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ಕೊನೆ ಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದ ನಾಗರಾಜು ಚೇತರಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ವಿವಿ.ಪುರಂ ಸಂಚಾರ ಠಾಣೆ ಇನ್‍ಸ್ಪೆಕ್ಟರ್ ಅರುಣಕುಮಾರಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಂತರ ಮಲ್ಲಿಕಾರ್ಜುನ ಅವರ ದೇಹವನ್ನು ವಾರಸುದಾರರಿಗೆ ಒಪ್ಪಿಸಿದರು.

Translate »