ಆಯುಷ್ಮಾನ್ ಭಾರತ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಧಾರ
ಮೈಸೂರು

ಆಯುಷ್ಮಾನ್ ಭಾರತ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಧಾರ

September 6, 2018

ಬೆಂಗಳೂರು: ಕೇಂದ್ರ ಸರ್ಕಾರ ಪ್ರಕಟಿಸಿರುವ ‘ಆಯುಷ್ಮಾನ್ ಭಾರತ ‘ ಕಾರ್ಯ ಕ್ರಮ ಹಾಗೂ ರಾಜ್ಯ ಸರ್ಕಾರದ ‘ಆರೋಗ್ಯ ಕರ್ನಾಟಕ’ ಯೋಜನೆ ಯನ್ನು ವಿಲೀನಗೊಳಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

‘ಆಯುಷ್ಮಾನ್ ಭಾರತ’ ಯೋಜನೆಯ ಹಲವಾರು ಲೋಪದೋಷಗಳ ಬಗ್ಗೆ ರಾಜ್ಯ ಸರ್ಕಾರ ಕೋರಿದ ಮಾಹಿತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವೈದ್ಯಕೀಯ ಸಂಘಟನೆಗಳ ಮುಖ್ಯಸ್ಥರೊಂದಿಗೆ ಇಂದು ಚರ್ಚಿಸಿ ಅವರ ಅಭಿಪ್ರಾಯವನ್ನು ಪಡೆಯಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿ, ಆರ್ಥಿಕ ಇಲಾಖೆಯ ಕಾರ್ಯದರ್ಶಿ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರು, ಬೆಂಗಳೂರು ಮೆಡಿಕಲ್ ಕಾಲೇಜ್‍ನ ಮುಖ್ಯಸ್ಥರು, ಬೌರಿಂಗ್ ಮತ್ತು ಲೇಡಿ ಕರ್ಝನ್ ಆಸ್ಪತ್ರೆ, ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕರು ಸೇರಿದಂತೆ, ಖಾಸಗಿ ಹಾಗೂ ಸ್ವಾಯತ್ತ ಆರೋಗ್ಯ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

Translate »