ಮೈಸೂರು ಸೇರಿ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ನಾಮ ನಿರ್ದೇಶನಕ್ಕೆ ನಿರ್ಧಾರ
ಮೈಸೂರು

ಮೈಸೂರು ಸೇರಿ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ನಾಮ ನಿರ್ದೇಶನಕ್ಕೆ ನಿರ್ಧಾರ

October 5, 2018

ಮೈಸೂರು: ಮೈಸೂರು ಮಹಾನಗರಪಾಲಿಕೆ ಸೇರಿದಂತೆ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರದ ನಾಮ ನಿರ್ದೇಶನ ಸದಸ್ಯರ ನೇಮಕಕ್ಕೆ ಸಚಿವ ಸಂಪುಟ ತೀರ್ಮಾನಿಸಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರಾಬಲ್ಯ ಹೊಂದಿರುವ ಸ್ಥಳೀಯ ಸಂಸ್ಥೆಗಳಿಗೆ ಆಯಾಯ ಪಕ್ಷಗಳ ಅಧಿಕ ಸದಸ್ಯರನ್ನು, ವಿಪಕ್ಷ ವಾದ ಬಿಜೆಪಿ ಪ್ರಾಬಲ್ಯವಿರುವ ಸಂಸ್ಥೆಗಳಿಗೆ ಮೈತ್ರಿ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಸದಸ್ಯರನ್ನು ನೇಮಿಸಲು ನಿರ್ಧರಿಸಲಾಗಿದೆ. ಅಂತೆಯೇ ಮೈಸೂರು ನಗರ ಪಾಲಿಕೆಗೆ ಎಲ್ಲಾ ನಾಮ ನಿರ್ದೇಶನ ಸದಸ್ಯ ಸ್ಥಾನಗಳು ಜೆಡಿಎಸ್ ಪಾಲಾಗುವ ಸಾಧ್ಯತೆ ಹೆಚ್ಚಿದೆ. ಮೇಯರ್ ಚುನಾವಣೆಗೂ ಮುನ್ನವೇ ನಾಮನಿರ್ದೇಶನ ಸದಸ್ಯರ ನೇಮಕಕ್ಕೆ ತೀರ್ಮಾನಿಸಿದ್ದು, ಅದಾಗಲೇ ಆಕಾಂಕ್ಷಿಗಳ ಲಾಬಿಯೂ ಆರಂಭವಾಗಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಗದ್ದುಗೆ ಹಿಡಿದಿದ್ದು, ಮೈತ್ರಿ ಪಕ್ಷವಾದ ಜೆಡಿಎಸ್‍ಗೆ ಮೈಸೂರು ನಗರ ಪಾಲಿಕೆ ಮೇಯರ್ ಸ್ಥಾನ ದಕ್ಕುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

Translate »