ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆ
ಮೈಸೂರು

ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆ

September 18, 2018

ಬೆಂಗಳೂರು: ಜನ ಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‍ಗೆ 2 ರೂ.ವರೆಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ಪ್ರವಾಸ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಇಳಿಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರಿಂದ ವ್ಯಕ್ತವಾದ ವಿರೋಧಕ್ಕೆ ಮನ್ನಣೆ ನೀಡಿ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಕೇಂದ್ರ ಸರ್ಕಾರ ದಿನನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡುತ್ತಲೇ ಇದೆ. ಇದು ಸಾರ್ವಜನಿಕರಿಗೆ ಹೊರೆಯಾಗಿರು ವುದನ್ನು ಅರಿತು ನಾವು ಕಳೆದ ಮುಂಗಡ ಪತ್ರದಲ್ಲಿ 1.50 ರೂ.ವರೆಗೂ ಸೆಸ್ ಹೆಚ್ಚಳ ಮಾಡಿದ್ದರೂ ಒಟ್ಟಾರೆಯಾಗಿ 2 ರೂ. ಇಳಿಕೆ ಮಾಡಿದ್ದೇವೆ. ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‍ಗಳಲ್ಲಿ ರೈತರು ಪಡೆದ ಕೃಷಿ ಸಾಲ ಮನ್ನಾ ನಿರ್ಧಾರ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಆಗುತ್ತಿರುವ ಹೊರೆ ಕಡಿಮೆ ಮಾಡಲು ಮುಖ್ಯಮಂತ್ರಿಗಳು ತೈಲದ ಮೇಲಿನ ಸೆಸ್ ಹೆಚ್ಚಿಸಿದ್ದರು. ತೈಲದ ಜೊತೆಗೆ ಅಬಕಾರಿ ಸುಂಕವನ್ನೂ ಹೆಚ್ಚಿಸಿದ್ದಲ್ಲದೆ, ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಪ್ರತಿ ಯೂನಿಟ್‍ಗೆ 5ರಿಂದ 7 ಕೆ.ಜಿ. ಅಕ್ಕಿ ಕೋಟಾ ಹೆಚ್ಚಿಸುವ ನಿರ್ಧಾರದಿಂದಲೂ ಹಿಂದೆ ಸರಿದಿದ್ದರು.

Translate »