ಜಿಲ್ಲಾಡಳಿತದ ಪೂರ್ವ ನಿಗದಿ ಪ್ರಕಾರವೇ ರಕ್ಷಣಾ ಸಚಿವರು ಕಾರ್ಯಕ್ರಮದಲ್ಲಿ ಹಾಜರಾಗಿದ್ದಾರೆ
ಕೊಡಗು

ಜಿಲ್ಲಾಡಳಿತದ ಪೂರ್ವ ನಿಗದಿ ಪ್ರಕಾರವೇ ರಕ್ಷಣಾ ಸಚಿವರು ಕಾರ್ಯಕ್ರಮದಲ್ಲಿ ಹಾಜರಾಗಿದ್ದಾರೆ

August 26, 2018

ಮಡಿಕೇರಿ: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ವಿರುದ್ಧ ಕಿಡಿಕಾರಿದ ಘಟನೆಗೆ ಸಂಬಂಧಪಟ್ಟಂತೆ ರಕ್ಷಣಾ ಇಲಾಖೆ ಸ್ಪಷ್ಟನೆ ನೀಡಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಕ್ಷಣಾ ಇಲಾಖೆ, ರಕ್ಷಣಾ ಮಂತ್ರಿಗಳು ಕೊಡಗು ಭೇಟಿ ವೇಳೆ ಜಿಲ್ಲಾಡಳಿತದೊಂದಿಗೆ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಮೇಲೆ ಕೋಪಗೊಂಡಿದ್ದರು ಎಂದು ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದ್ದು, ಅದಕ್ಕಾಗಿ ಸ್ಪಷ್ಟನೆ ನೀಡುತ್ತಿರುವುದಾಗಿ ತಿಳಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವರು ರಕ್ಷಣಾ ಸಚಿವರ ಬಗ್ಗೆ ವೈಯಕ್ತಿಕವಾಗಿ ಟೀಕೆ ಮಾಡಿರುವ ಬಗ್ಗೆಯೂ ವರದಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಟೀಕೆಯು ರಾಜ್ಯ ಸಭೆಯ ಘನತೆಗೆ ಚ್ಯುತಿ ಉಂಟುಮಾಡುವಂತಹದ್ದಾಗಿದೆ. ಅಲ್ಲದೆ ಭಾರತದ ರಾಜಕೀಯ ವ್ಯವಸ್ಥೆ ಬಗ್ಗೆ ಯಾವುದೇ ಗೌರವ ಮತ್ತು ತಿಳುವಳಿಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಇಲ್ಲ ಎನ್ನುವುದನ್ನು ತೋರಿಸಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ರಕ್ಷಣಾ ಸಚಿವರ ಪ್ರವಾಸ ಕಾರ್ಯಕ್ರಮವನ್ನು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಮಾಲೋಚಿಸಿ, ಕೊಡಗು ಜಿಲ್ಲಾಡಳಿತವೇ ಅಂತಿಮಗೊಳಿಸಿತ್ತು. ರಕ್ಷಣಾ ಸಚಿವರು ಕೊಡಗಿಗೆ ಭೇಟಿ ನೀಡುವ ಎರಡು ದಿನ ಮೊದಲೇ ಸಂಬಂಧಪಟ್ಟವರಿಗೆ ಪ್ರವಾಸದ ವಿವರಗಳನ್ನು ಕಳುಹಿಸಲಾಗಿತ್ತು. ನಂತರ ಜಿಲ್ಲಾಡಳಿತದ ಮನವಿ ಮೇರೆಗೆ ಸ್ಥಳೀಯ ಗಣ್ಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಪಟ್ಟಿಗೆ ಸೇರಿಸಲಾಗಿತ್ತು.

ಹಾನಿಗೀಡಾದ ಪ್ರದೇಶಗಳ ಭೇಟಿಯ ನಂತರ ನೆರೆಯಿಂದ ತೀವ್ರ ತೊಂದರೆಗೊಳಗಾದ ನಿವೃತ್ತ ಸೈನಿಕರೊಂದಿಗೂ ರಕ್ಷಣಾ ಸಚಿವರು ಸಂವಾದ ನಡೆಸುವಾಗ ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಧಿಕಾರಿಗಳೊಂದಿಗಿನ ಸಭೆ ಮೊದಲು ನಡೆಯಬೇಕೆಂಬುದು ಅವರ ವಾದವಾಗಿತ್ತು. ಆದರೆ ನಿವೃತ್ತ ಸೈನಿಕರ ಯೋಗಕ್ಷೇಮವೂ ರಕ್ಷಣಾ ಇಲಾಖೆಯ ಆದ್ಯತೆಗಳಲ್ಲಿ ಒಂದಾದ ಕಾರಣ ರಕ್ಷಣಾ ಸಚಿವರು ಆ ಬಗ್ಗೆ ಸ್ಪಷ್ಟನೆ ನೀಡಿದ್ದರು. ಆದರೂ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಸಂವಾದ ನಿಲ್ಲಿಸಿ, ಅಧಿಕಾರಿಗಳ ಸಭೆಗೆ ಹೋಗಬೇಕೆಂದು ಒತ್ತಾಯಿಸಿದರು.

ಆಗ ರಕ್ಷಣಾ ಸಚಿವರು ಮತ್ತಷ್ಟು ಗೊಂದಲ ಉಂಟಾಗುವುದನ್ನು ತಪ್ಪಿಸಲು ಸಂವಾದವನ್ನು ಸ್ಥಗಿತಗೊಳಿಸಿ, ಅಧಿಕಾರಿಗಳ ಸಭೆಗೆ ತೆರಳಿದರು. ಅಲ್ಲಿ ಅದಾಗಲೇ ಪತ್ರಿಕಾಗೋಷ್ಟಿಗೂ ವ್ಯವಸ್ಥೆ ಮಾಡಲಾಗಿತ್ತು. ಅದೇ ಸ್ಥಳಕ್ಕೆ ಅಧಿಕಾರಿಗಳನ್ನು ತರಾತುರಿಯಿಂದ ಕರೆದು ಮಾಧ್ಯಮ ಪ್ರತಿನಿಧಿಗಳ ಉಪಸ್ಥಿತಿಯಲ್ಲೇ ಅಧಿಕಾರಿಗಳ ಸಭೆ ಆರಂಭವಾಯಿತು. ಮಾಧ್ಯಮ ಪ್ರತಿನಿಧಿಗಳ ಎದುರಿನಲ್ಲೇ ಪರಿಶೀಲನಾ ಸಭೆ ನಡೆಸುವ ನಿದರ್ಶನ ಇಲ್ಲವಾದರೂ ರಕ್ಷಣಾ ಸಚಿವರು ಪರಿಸ್ಥಿತಿಯನ್ನು ತಿಳಿಯಾಗಿಸಲು ಸಭೆ ನಡೆಸಿದರು. ಆ ನಂತರ ತಮಗಾಗಿ ಕಾದಿದ್ದ ಮಾಜಿ ಸೈನಿಕರೊಂದಿಗೆ ರಕ್ಷಣಾ ಸಚಿವರು ಸಂವಾದ ನಡೆಸಿ, ಅವರ ಅಹವಾಲು ಆಲಿಸಿ ದರು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಜಿಲ್ಲಾಡಳಿತವೇ ಅಂತಿಮಗೊಳಿಸಿದ್ದ ಕಾರ್ಯಕ್ರಮದ ಪ್ರಕಾರವೇ ರಕ್ಷಣಾ ಸಚಿವರು ಸಭೆ ನಡೆಸಿದರೂ ಜಿಲ್ಲಾ ಉಸ್ತು ವಾರಿ ಸಚಿವರು ನೀಡಿದ ಪ್ರತಿಕ್ರಿಯೆ ಮತ್ತು ಟೀಕೆ ದುರದೃಷ್ಟಕರ. ಅಲ್ಲದೇ ರಕ್ಷಣಾ ಸಚಿವರ ಬಗ್ಗೆ ಮಾಡಿರುವ ವೈಯಕ್ತಿಕ ಟೀಕೆಯು ಕೀಳು ಅಭಿರುಚಿಯಿಂದ ಕೂಡಿದ್ದಾಗಿದ್ದು, ಅವರ ಈ ನಡವಳಿಕೆಯು ಪ್ರತಿಕ್ರಿಯೆಗೂ ಯೋಗ್ಯವಲ್ಲ. ರಕ್ಷಣಾ ಸಚಿವರು ಪತ್ರಿಕಾ ಗೋಷ್ಟಿಯಲ್ಲಿ ‘ಪರಿವಾರ’ ಎಂದು ಉಲ್ಲೇ ಖಿಸಿದ್ದನ್ನು ತಪ್ಪಾಗಿ ವ್ಯಾಖ್ಯಾನಿಸಿರುವುದು ಗಮನಕ್ಕೆ ಬಂದಿದೆ. ರಕ್ಷಣಾ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ನಿವೃತ್ತ ಸೈನಿಕರ ಕಲ್ಯಾಣವೂ ಒಂದು. ರಕ್ಷಣಾ ಇಲಾಖೆಯ ಪರಿವಾರದಲ್ಲಿ ನಿವೃತ್ತ ಸೈನಿಕರು ಸೇರು ತ್ತಾರೆ ಎಂಬುದು ಗಮನಿಸಬೇಕಾದ ಅಂಶ. ಈ ಅರ್ಥದಲ್ಲಿ ರಕ್ಷಣಾ ಸಚಿವರು ‘ಪರಿವಾರ’ ಪದ ಬಳಕೆ ಮಾಡಿದ್ದಾರೆ ಹೊರತು ಉಳಿದಂತೆ ಬೇರೆಲ್ಲಾ ಅಭಿಪ್ರಾಯಗಳು ಅಪಾರ್ಥದಿಂದ ಕೂಡಿದ್ದು ಹಾಗೂ ಖಂಡನೀಯವಾದದ್ದು ಎಂದು ರಕ್ಷಣಾ ಇಲಾಖೆಯ ಸ್ಪಷ್ಟನೆಯಲ್ಲಿ ತಿಳಿಸಲಾಗಿದೆ.

Translate »