ಸಮಾಜದ್ರೋಹಿ ಶಕ್ತಿಗಳನ್ನು ಮಟ್ಟ ಹಾಕಲು ಪೆÇಲೀಸ್ ಇಲಾಖೆ ಸಮರ್ಥ
ಮೈಸೂರು

ಸಮಾಜದ್ರೋಹಿ ಶಕ್ತಿಗಳನ್ನು ಮಟ್ಟ ಹಾಕಲು ಪೆÇಲೀಸ್ ಇಲಾಖೆ ಸಮರ್ಥ

October 22, 2020

ಬೆಂಗಳೂರು, ಅ.21-ಕೋವಿಡ್ ಸೋಂಕು ನಿಯಂತ್ರಣ ಮತ್ತು ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡುವಲ್ಲಿ ಪೆÇಲೀಸರ ಶ್ರಮ ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ

ಪೆÇಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಇಂದು ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೆÇಲೀಸರಿಗೆ ಗೌರವ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಕರ್ತವ್ಯದಲ್ಲಿದ್ದಾಗ ದೇಶಾದ್ಯಂತ ಒಟ್ಟಾರೆ 264 ಮಂದಿ ಪೆÇಲೀಸರು ಹುತಾತ್ಮರಾಗಿದ್ದಾರೆ. ಈ ಎಲ್ಲಾ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದರು. 8999 ಪೆÇಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ಒಳಗಾಗಿದ್ದು, 99 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲರಿಗೂ ಸರ್ಕಾರ ಶ್ರದ್ಧಾಂಜಲಿ ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಹೇಳಿದರು. ಡ್ರಗ್ ಮಾಫಿಯಾ ನಿಯಂತ್ರಣಕ್ಕೆ ಸರ್ಕಾರ ಬದ್ದವಾಗಿದ್ದು, ಸಮಾಜ ದ್ರೋಹಿ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಪೆÇಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದೆ. ರಾಜ್ಯದ ಪೆÇೀಲಿಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡುವಂತಾಗಲಿ ಎಂದು ಹಾರಿಸಿದರು.

ಪೆÇಲೀಸರಿಗೆ ವಸತಿ ಸೇರಿದಂತೆ ಎಲ್ಲಾ ರೀತಿಯ ಸವಲತ್ತುಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಪೆÇಲೀಸರು ಮತ್ತಷ್ಟು ಕರ್ತವ್ಯ ನಿಷ್ಠೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸಲಿ ಎಂದು ಯಡಿಯೂರಪ್ಪ ಆಶಿಸಿದರು.
ಎಡಿಜಿಪಿ ಅವರು ದೇಶಾದ್ಯಂತ ಹುತಾತ್ಮರಾದವರ ವಿವರಗಳನ್ನು ನೀಡಿದರು. ಅಬೈಡ್ ವಿತ್ ಮಿ ಗೀತೆಯನ್ನು ಪೆÇೀಲಿಸ್ ವಾದ್ಯವೃಂದದ ಅತ್ಯಂತ ಸುಶ್ರಾವ್ಯವಾಗಿ ನುಡಿಸಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ರಾಜ್ಯದ ಪೆÇಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ವಿವಿಧ ರಕ್ಷಣಾ ಪಡೆಗಳ ಸಿಬ್ಬಂದಿ ಸಹ ಪುಚ್ಪಗುಚ್ಚವಿರಿಸಿ ಗೌರವ ಸಲ್ಲಿಸಿದರು.

Translate »