ಮೈಸೂರು: ಮನೆಯ ಮುಂಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಬೆಲೆಬಾಳುವ 25 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಜೆಪಿ ನಗರದ ಸಿದ್ದಲಿಂಗೇಶ್ವರ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಚಂದ್ರಶೇಖರ್ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಇವರು ಜೂ.20ರಂದು ಕಾರ್ಯ ನಿಮಿತ್ತ ಮನೆಗೆ ಬೀಗ ಹಾಕಿಕೊಂಡು ಹೊರಗಡೆ ತೆರಳಿದ್ದಾರೆ. ಪುನಃ ಜೂ.21ರಂದು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿದ್ಯಾರಣ್ಯಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.