ಬರ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸೂಚನೆ
ಹಾಸನ

ಬರ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸೂಚನೆ

May 7, 2019

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಿ,  ಅಗತ್ಯವಿರುವೆಡೆ ಗೋ ಶಾಲೆ, ಮೇವಿನ ಬ್ಯಾಂಕ್ ಪ್ರಾರಂಭಿಸಿ: ನವೀನ್‍ರಾಜ್ ಸಿಂಗ್
ಹಾಸನ: ಜಿಲ್ಲೆಯಲ್ಲಿ ಬರ ಪರಿ ಸ್ಥಿತಿಯನ್ನು ಇನ್ನಷ್ಟು ಸಮರ್ಪಕವಾಗಿ ಎದು ರಿಸಲು ಎಲ್ಲಾ ಇಲಾಖಾಧಿಕಾರಿ, ಸಿಬ್ಬಂದಿ ಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಕೆಶಿಪ್‍ನ ಮುಖ್ಯ ಯೋಜನಾಧಿ ಕಾರಿ ನವೀನ್ ರಾಜ್‍ಸಿಂಗ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬರ ನಿರ್ವಹಣೆ ಕುರಿತಂತೆ ಪರಿಶೀಲನಾ ಸಭೆ ನಡೆಸಿದ ಅವರು, ಈಗಾಗಲೇ ಜಿಲ್ಲೆಯ 8 ತಾಲೂಕುಗಳು ಬರಪೀಡಿತ ಎಂದು ಘೋಷಿಸಲ್ಪಟಿದ್ದು, ಎಲ್ಲಿಯೂ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ವಿಶೇಷ ನಿಗಾ ವಹಿಸಬೇಕು ಎಂದು ತಿಳಿಸಿದರು.
ಅನುದಾನಕ್ಕೆ ಕೊರತೆ ಇಲ್ಲ. ಯಾವುದೇ ಗ್ರಾಮವೂ ಕುಡಿಯುವ ನೀರಿನ ಪೂರೈಕೆ ಯಿಂದ ವಂಚಿತವಾಗಬಾರದು. ಕೊಳವೆ ಬಾವಿ, ಟ್ಯಾಂಕರ್ ಯಾವ ರೂಪದಲ್ಲಿಯಾ ದರೂ ನೀರು ಒದಗಿಸಿ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳು ಕುಡಿಯವ ನೀರಿನ ಪೂರೈಕೆ ಮೇಲ್ವಿಚಾರಣೆಯನ್ನು ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿ ಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ನಗರಾಭಿವೃದ್ಧಿ ಕೋಶ, ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ಮುಖ್ಯಸ್ಥರು ಜವಾಬ್ದಾರಿವಹಿಸಿ ಜನರಿಗೆ ತೊಂದರೆಯಾಗದಂತೆ ಗಮನ ಹರಿಸಬೇಕು ಎಂದು ಹೇಳಿದರು.

ದನಕರುಗಳಿಗೂ ಕುಡಿಯುವ ನೀರಿಗೆ ತೊಂದರೆಯಾಗಬಾರದು. ಅಲ್ಲದೆ ಮೇವಿನ ಕೊರತೆಯಾಗಬಾರದು. ಪಶು ಪಾಲನಾ ಇಲಾಖೆ ಜಿಲ್ಲೆಯಲ್ಲಿನ ಮೇವಿನ ಲಭ್ಯತೆ ಬಗ್ಗೆ ಸಮೀಕ್ಷೆ ನಡೆಸಿ ಸಮಸ್ಯಾ ತ್ಮಕವೆನಿಸುವ ಪ್ರದೇಶಗಳಲ್ಲಿ ಮೇವಿನ ಬ್ಯಾಂಕ್ ಹಾಗೂ ಗೋ ಶಾಲೆಗಳನ್ನು ತೆರೆಯಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.

ಇನ್ನೇನು ಮುಂಗಾರು ಪ್ರಾರಂಭವಾಗ ಲಿದ್ದು ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂಕಿನ ಹವಾಗುಣಕ್ಕೆ ಅನುಗುಣವಾಗಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ, ರಸಗೊಬ್ಬರಗಳನ್ನು ದಾಸ್ತಾನು ಇರಿಸಲು ಅಗತ್ಯ ಕ್ರಮ ವಹಿಸಬೇಕು ಮತ್ತು ರೈತರಿಗೆ ಬೇಸಾಯದ ಬಗ್ಗೆ ಪೂರಕ ಮಾಹಿತಿ, ಸಹಕಾರ ನೀಡಬೇಕು ಎಂದು ತಿಳಿಸಿದರು.
ಆಲೂಗಡ್ಡೆ ಬಿತ್ತನೆಗೆ ಈಗಾಗಲೇ ದಾಸ್ತಾನು 20,000 ಟನ್ ಬೀಜ ದಾಸ್ತಾನು ಆಗಿರು ವುದರಿಂದ ರೈತರ ಅಗತ್ಯಕ್ಕೆ ತಕ್ಕಂತೆ ಅದನ್ನು ವಿತರಣೆ ಮಾಡಿ ಸಬ್ಸಿಡಿ ಹಣ ಬಿಡುಗಡೆ ಸಂಬಂಧಿಸಿದಂತೆ ತಾಲೂಕು ಸಹ ಇಲಾ ಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಬೇಕು ಎಂದು ಹೇಳಿದರು.

ರೈತಾಪಿ ವರ್ಗ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸಕಾಲದಲ್ಲಿ ಸೂಕ್ತವಾಗಿ ಸ್ಪಂದಿಸಿ ನೆರವು ನೀಡಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಿ. ಈಗಾಗಲೇ, ಯೋಜಿ ಸಲಾಗಿರುವ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನ ಗೊಳಿಸಿ ಬಾಕಿ ಬಿಲ್‍ಗಳನ್ನು ಶೀಘ್ರವಾಗಿ ಪಾವತಿಗಾಗಿ ಸಲ್ಲಿಸಿ ಎಂದು ಹೇಳಿದರು.
ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಜಿಲ್ಲೆಯಲ್ಲಿ ಈವರೆಗೆ ಕುಡಿಯುವ ನೀರು ಪೂರೈಕೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆ ಗಳನ್ನು ನೀಡಿದರು.

ಇದೇ ರೀತಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪುಟ್ಟಸ್ವಾಮಿ ಅವರು ಸಹ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಗ್ರಾಮೀಣ ಕುಡಿ ಯುವ ನೀರಿನ ಯೋಜನೆಗಳ ಬಗ್ಗೆ ವಿವ ರಿಸಿದರು. ಸಭೆಯಲ್ಲಿ ಉಪವಿಭಾಗಾಧಿ ಕಾರಿಗಳಾದ ಡಾ.ಹೆಚ್.ಎಲ್.ನಾಗರಾಜು, ಕವಿತಾ ರಾಜಾರಾಂ, ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

Translate »