ಬಾಲ್ಯವಿವಾಹ ತಡೆಯುವುದು ನಮ್ಮೆಲ್ಲರ ಕರ್ತವ್ಯ: ಜಿಲ್ಲಾಧಿಕಾರಿ
ಹಾಸನ

ಬಾಲ್ಯವಿವಾಹ ತಡೆಯುವುದು ನಮ್ಮೆಲ್ಲರ ಕರ್ತವ್ಯ: ಜಿಲ್ಲಾಧಿಕಾರಿ

March 18, 2021

ಹಾಸನ,ಮಾ.17-ಬಾಲ್ಯವಿವಾಹವು ಸಾಮಾಜಿಕ ಪಿಡುಗಾಗಿದ್ದು, ಅದನ್ನ ತಡೆಗಟ್ಟು ವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದಿಂದ ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ತಡೆ ಕಾಯ್ದೆ, ಪೋಕ್ಸೋ ಕಾಯ್ದೆ, ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಆಯೋಜಿಸಿದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು ಹೆಚ್ಚಿನ ನಿಗಾ ವಹಿಸಿ. ಯಾವುದೇ ಮಕ್ಕಳಿಗೂ ಅನ್ಯಾಯವಾಗದಂತೆ ಅಧಿಕಾರಿಗಳು, ಸಂಘ-ಸಂಸ್ಥೆಗಳು ಕಾಳಜಿವಹಿಸಿ ಕಾರ್ಯ ನಿರ್ವಹಿಸಬೇಕು. ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಿ ವಿದ್ಯಾವಂತರನ್ನಾಗಿಸಬೇಕು ಎಂದು ತಿಳಿಸಿದರಲ್ಲದೆ, ಬಾಲ್ಯವಿವಾಹ, ಬಾಲಕಾರ್ಮಿಕ, ಪೋಕ್ಸೋ ಕಾಯ್ದೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್‍ಗೌಡ ಮಾತನಾಡಿ, ಬಾಲ್ಯವಿವಾಹ, ಬಾಲಕಾರ್ಮಿಕತೆಯನ್ನು ತಡೆಗಟ್ಟುವುದರ ಜೊತೆಗೆ ಎಲ್ಲಾ ಪೋಷಕರಿಗೆ ಇದರ ಬಗ್ಗೆ ಮನವರಿಕೆ ಮಾಡಿಕೊಡುವಂತೆ ತಿಳಿಸಿದರು. ಎಎಸ್‍ಪಿ ಬಿ.ಎನ್.ನಂದಿನಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆÀ ಕೋಮಲ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿವೈಎಸ್‍ಪಿ ಪುಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ದಿಲೀಪ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜೆ.ಉಷಾ ಹಾಗೂ ಮತ್ತಿತರರಿದ್ದರು.

Translate »