ದೇಶವಾಸಿಗಳ ರಕ್ಷಣೆಯಲ್ಲಿ ವೈದ್ಯ ಸಿಬ್ಬಂದಿಯ ಶ್ರಮ ಅನನ್ಯ
ಕೊಡಗು

ದೇಶವಾಸಿಗಳ ರಕ್ಷಣೆಯಲ್ಲಿ ವೈದ್ಯ ಸಿಬ್ಬಂದಿಯ ಶ್ರಮ ಅನನ್ಯ

April 8, 2020

ಮಡಿಕೇರಿ, ಏ.7- ದೇಶವನ್ನು ಕಾಪಾ ಡಲು ಸೈನಿಕರು ಶ್ರಮಿಸಿದರೆ, ದೇಶವಾಸಿ ಗಳ ಆರೋಗ್ಯವನ್ನು ಕಾಪಾಡಲು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ಹಗಲಿ ರುಳು ಶ್ರಮಿಸುತ್ತಿದ್ದಾರೆ. ಕೊರೊನಾ ಮಹಾ ಮಾರಿ ವಿರುದ್ದ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ ಗಳ ಕಾರ್ಯ ಸ್ತುತ್ಯಾರ್ಹ ಎಂದು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ವಿಶ್ವ ಆರೋಗ್ಯ ದಿನಾಚರಣೆ ಹಿನ್ನಲೆ ಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕು ಪೀಡಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳನ್ನು ಶಾಲು ಹೊದಿಸಿ ಶಾಸಕ ಅಪ್ಪಚ್ಚು ರಂಜನ್ ಮತ್ತು ಸುನಿಲ್ ಸುಬ್ರಮಣಿ ಗೌರವಿಸಿದರು.

ಬಳಿಕ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಕೊಡಗು ಜಿಲ್ಲೆಯಲ್ಲಿ ಒಂದು ಕೊರೊನಾ ಸೋಂಕು ಪ್ರಕರಣ ಕಂಡು ಬಂದಿತ್ತಾದರೂ, ಇದೀಗ ಆತ ಸಂಪೂರ್ಣ ಗುಣ ಮುಖನಾಗಿದ್ದಾರೆ. ಆ ಮೂಲಕ ಕೊರೊನಾ ಸೋಂಕು ಜಿಲ್ಲೆಯಲ್ಲಿ ಹರಡ ದಂತೆ ತಡೆಯುವಲ್ಲಿ ಆರೋಗ್ಯ ಇಲಾಖೆ, ವೈದ್ಯಕೀಯ ಸಿಬ್ಬಂದಿಗಳು, ಸ್ವಚ್ಚತಾ ಸಿಬ್ಬಂದಿಗಳು, ಪೊಲೀಸರು, ಜನಪ್ರತಿನಿಧಿಗಳು ಒಂದು ತಂಡವಾಗಿ ಕೆಲಸ ಮಾಡಿದ್ದಾರೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ತ್ಯಾಗದ ಕೆಲಸವನ್ನು ಪ್ರತಿಯೊಬ್ಬರು ಕೂಡ ಬೆನ್ನು ತಟ್ಟುವ ಮೂಲಕ ಬೆಂಬಲಿಸಬೇಕೆಂದು ಅಪ್ಪಚ್ಚು ರಂಜನ್ ಹೇಳಿದರು. ವಿಶ್ವ ಆರೋಗ್ಯ ದಿನಾಚರಣೆಯ ಸಂದರ್ಭ ಕೊರೊನಾ ವೈರಸ್ ವಿರುದ್ದ ಹೋರಾಡುತ್ತಿರುವ ವೈದ್ಯ ಕೀಯ ಸಿಬ್ಬಂದಿಗಳ ಶ್ರಮದಿಂದ ಇಡೀ ವಿಶ್ವವೇ ಆರೋಗ್ಯವಾಗಲಿ ಎಂದು ಅಪ್ಪಚ್ಚು ರಂಜನ್ ಆಶಿಸಿದರು.

ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಮಾತನಾಡಿ, ಪುರಾಣಗಳಲ್ಲೂ ವೈದ್ಯರನ್ನು ದೇವರಿಗೆ ಹೋಲಿಸಲಾಗಿದೆ. ಕೊರೊನಾ ವೈರಸ್ ವಿಶ್ವವನ್ನೇ ಆವರಿಸಿದಾಗ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ಜನರ ಪ್ರಾಣ ಉಳಿಸುವ ಕೆಲಸ ಮಾಡುತ್ತಿ ದ್ದಾರೆ. ಕೊಡಗು ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ, ವೈದ್ಯಕೀಯ ಸಿಬ್ಬಂದಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪೌರ ಕಾರ್ಮಿಕರು ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿಯೇ ಜಿಲ್ಲೆಯನ್ನು ಕೊರೊನಾ ಮುಕ್ತ ಮಾಡಲು ಸಾಧ್ಯ ವಾಗಿದೆ. ಇದೇ ರೀತಿಯಲ್ಲಿ ನಿಮ್ಮಗಳ ಸೇವೆ ಮುಂದುವರಿಯಲಿ ಎಂದು ಹೇಳಿದರು.

ಈ ಸಂದರ್ಭ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್, ಮೆಡಿಕಲ್ ಕಾಲೇಜು ಡೀನ್ ಡಾ. ಕಾರ್ಯಪ್ಪ, ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಲೋಕೇಶ್, ಮುಖ್ಯ ಶಸ್ತ್ರ ಚಿಕಿತ್ಸಕ ಡಾ. ಅಜೀಝ್, ಸಿಇಓ ಮೇರಿ ನಾಣಯ್ಯ, ಶುಶ್ರೂಷಕಿಯರು, ಸಿಬ್ಬಂದಿ ಗಳನ್ನು ಶಾಸಕರು ಗೌರವಿಸಿದರು.

Translate »