ಹಾನಗಲ್ಲು ಶೆಟ್ಟಳ್ಳಿಯಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣೆ ಬಹಿಷ್ಕಾರ
ಕೊಡಗು

ಹಾನಗಲ್ಲು ಶೆಟ್ಟಳ್ಳಿಯಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣೆ ಬಹಿಷ್ಕಾರ

April 8, 2019

ಸೋಮವಾರಪೇಟೆ: ಗ್ರಾಮ ಸಂಪರ್ಕಿಸುವ ಪ್ರಮುಖ ರಸ್ತೆ ಕಳೆದ ಹಲವಾರು ದಶಕಗಳಿಂದ ದುರಸ್ತಿ ಕಾಣದೇ ಇರುವುದರಿಂದ ಬೇಸತ್ತು ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಾನಗಲ್ಲು ಶೆಟ್ಟಳ್ಳಿ ಗ್ರಾಮಸ್ಥರು ಪ್ರಸಕ್ತ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಗ್ರಾಮದಲ್ಲಿ ಸಭೆ ಸೇರಿದ ಗ್ರಾಮಸ್ಥರು ಪ್ರಸಕ್ತ ಲೋಕಸಭಾ ಚುನಾವಣೆಯನ್ನು ಸಾಮೂಹಿಕವಾಗಿ ಬಹಿಷ್ಕರಿಸುವ ಬಗ್ಗೆ ಒಮ್ಮತದ ತೀರ್ಮಾನ ಕೈಗೊಂಡರು. ಹಾನಗಲ್ಲು ಶೆಟ್ಟಳ್ಳಿ ಗ್ರಾಮದ ಪ್ರಮುಖ ರಸ್ತೆ ಕಳೆದ ಅನೇಕ ದಶಕಗಳಿಂದ ಗುಂಡಿಬಿದ್ದು, ವಾಹನ ಸಂಚಾರಕ್ಕೆ ತೊಂದರೆ ಎದುರಾಗಿದೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಿಂದ ಹಿಡಿದು ಎಲ್ಲರಿಗೂ ಮನವಿ ಸಲ್ಲಿಸಲಾಗಿದೆ. ಸಂಬಂಧಿಸಿದ ಇಲಾಖೆಯ ಗಮನ ಸೆಳೆದರೂ ಸಹ ಈವರೆಗೆ ಯಾವದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾ ಧಾನ ವ್ಯಕ್ತಪಡಿಸಿ, ಲೋಕಸಭಾ ಚುನಾವಣೆಯನ್ನು ಬಹಿಷ್ಕರಿ ಸುವ ತೀರ್ಮಾನ ಕೈಗೊಂಡರು. ಸಭೆಯಲ್ಲಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಜೆ. ಸುರೇಶ್, ಉಪಾಧ್ಯಕ್ಷ ಎಲ್.ಜೆ. ದೊಡ್ಡಯ್ಯ, ಕಾರ್ಯದರ್ಶಿ ಲಕ್ಷ್ಮಣ, ಪ್ರಮುಖರಾದ ರವಿ, ವೆಂಕಟೇಶ್, ಎಂ.ಕೆ. ರಾಮಚಂದ್ರ, ಚಂದ್ರಶೇಖರ್, ಪ್ರೀತಮ್, ವಿಠಲ, ಅಪ್ಪಯ್ಯ, ಪೊನ್ನಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Translate »