ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕೇವಲ ಅಧಿಕಾರಿಗಳ ಜವಾಬ್ದಾರಿ ಮಾತ್ರವಲ್ಲ, ಸಾರ್ವಜನಿಕರ ಸಹಭಾಗಿತ್ವವೂ ಹೌದು: ಮೈಸೂರು ಜಿಲ್ಲಾ ನ್ಯಾಯಾಧೀಶ ಎಸ್.ಕೆ. ವಂಟಿಗೊಡಿ ಅಭಿಮತ
ಮೈಸೂರು

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕೇವಲ ಅಧಿಕಾರಿಗಳ ಜವಾಬ್ದಾರಿ ಮಾತ್ರವಲ್ಲ, ಸಾರ್ವಜನಿಕರ ಸಹಭಾಗಿತ್ವವೂ ಹೌದು: ಮೈಸೂರು ಜಿಲ್ಲಾ ನ್ಯಾಯಾಧೀಶ ಎಸ್.ಕೆ. ವಂಟಿಗೊಡಿ ಅಭಿಮತ

June 13, 2018

ಮೈಸೂರು: ಮಕ್ಕಳ ಬಾಲ್ಯವನ್ನು ಬಲಿ ತೆಗೆದುಕೊಳ್ಳುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕೇವಲ ಇಲಾಖಾಧಿಕಾರಿಗಳ ಜವಾಬ್ದಾರಿ ಮಾತ್ರ ವಲ್ಲ. ಇದಕ್ಕೆ ಸಾರ್ವಜನಿಕರ ಸಹಭಾಗಿತ್ವವೂ ಅಷ್ಟೇ ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಕೆ.ವಂಟಿ ಗೊಡಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ರಾಶ್ರಯದಲ್ಲಿ ಮೈಸೂರಿನ ಜೆಎಲ್‍ಬಿ ರಸ್ತೆಯ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಮಂಗಳ ವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾ ಟಿಸಿ ಅವರು ಮಾತನಾಡಿದರು.

ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ 14 ವರ್ಷದೊಳಗಿನ ಮಕ್ಕ ಳನ್ನು ಕಾರ್ಮಿಕರಾಗಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಈ ಕಾಯ್ದೆ 1986 ರಲ್ಲಿ ಜಾರಿಗೊಂಡಿದ್ದರೂ ಇಂದಿಗೂ ಬಾಲ ಕಾರ್ಮಿಕ ಪದ್ಧತಿ ಜೀವಂತವಾಗಿಯೇ ಉಳಿದಿದೆ. ಆದರೆ ಇಳಿಮುಖವಾಗಿರು ವುದು ಸಮಾಧಾನಕರ ಸಂಗತಿ. ಈ ಅನಿಷ್ಟ ಪದ್ಧತಿಯನ್ನು ನಮ್ಮ ಸಮಾಜದಿಂದ ತೊಡೆದು ಹಾಕಲು ಸದರಿ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸ ಬೇಕಿದ್ದು, ಇದಕ್ಕೆ ಸಂಬಂಧಿಸಿದ ಇಲಾಖಾ ಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ ಕೊಳ್ಳಬೇಕು. ಜೊತೆಗೆ ಸಾರ್ವಜನಿಕರು ತಮ್ಮ ಸುತ್ತಮುತ್ತ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಮುಂದಾಗಬೇಕು. 14ರಿಂದ 18 ವರ್ಷದೊಳಗಿನ ವಯೋಮಾನದ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಮೆ ಮಾಡಿಸುವುದು ಅಪರಾಧ ವಾಗುತ್ತದೆ ಎಂದು ವಿವರಿಸಿದರು.

ಬಚ್ಪನ್ ಬಚಾವೋ ಚಳವಳಿ: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಚಳವಳಿಯನ್ನೇ ನಡೆಸಿ 2014ರ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾದ ಕೈಲಾಶ್ ಸತ್ಯಾರ್ಥಿ ಅವರನ್ನು ಶ್ಲಾಘಿಸಿದ ನ್ಯಾಯಾಧೀಶ ಎಸ್.ಕೆ.ವಂಟಿ ಗೊಡಿ, ಈ ಚಳವಳಿಯಿಂದ ಬಾಲಕಾರ್ಮಿಕ ಪದ್ಧತಿ ಪರಿಣಾಕಾರಿಯಾಗಿ ಇಳಿಮುಖ ಗೊಂಡಿತು. ಹೀಗಾಗಿ ಇಂತಹ ಚಳವಳಿ ಗಳು ಅಗತ್ಯ ಎಂದು ಹೇಳಿದರು.
ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (ಆರ್‍ಎಲ್‍ಹೆಚ್‍ಪಿ) ನಿರ್ದೇಶಕಿ ಕೆ.ಸರಸ್ವತಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ನಿಷೇಧಿಸಿ 1986ರಲ್ಲಿ ಕಾಯ್ದೆ ಜಾರಿಗೊಳಿಸಲಾಗಿದೆ. ಜೊತೆಗೆ 1992ರಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದಾಗಿ ವಿಶ್ವಸಂಸ್ಥೆಯ ಒಡಂಬಡಿಕೆಗೆ ಭಾರತ ಸಹಿ ಕೂಡ ಹಾಕಿದೆ. ಹೀಗಿದ್ದರೂ ದೇಶದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವಲ್ಲಿ ವಿಫಲತೆ ಕಂಡಿದ್ದೇವೆ. ಇದಕ್ಕೆ ಮುಖ್ಯ ಕಾರಣ ಬಡತನವಾಗಿದ್ದು, ಬಡವರ್ಗದ ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿಗೆ ದೂಡ ಲಾಗುತ್ತಿದೆ. ಮತ್ತೊಂದು ಗಮನಾರ್ಹ ಅಂಶವೆಂದರೆ ಮಕ್ಕಳನ್ನು ಹೆಚ್ಚು ಸಮಯ ದುಡಿಸಿಕೊಂಡು ಕಡಿಮೆ ಹಣ ನೀಡಬಹು ದೆಂಬ ಲೆಕ್ಕಾಚಾರವೂ ಇದೆ ಎಂದು ಅಸಮಾ ಧಾನ ವ್ಯಕ್ತಪಡಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಸಿ.ಜಿ.ಮಹಮ್ಮದ್ ಮುಜೀರುಲ್ಲಾ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧ ಸಭಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಉಪಪೊಲೀಸ್ ಆಯುಕ್ತ ಎನ್.ವಿಷ್ಣು ವರ್ಧನ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಕೆ.ರಾಧ, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಸಹಾಯಕ ನಿರ್ದೇ ಶಕ ಹೆಚ್.ಸುರೇಶ್, ಹೆಚ್‍ಡಿ ಕೋಟೆಯ ನಿಸರ್ಗ ಫೌಂಡೇಶನ್ ಕಾರ್ಯದರ್ಶಿ ನಂಜಂಡಯ್ಯ, ಜ್ಞಾನಜ್ಯೋತಿ ಸಂಸ್ಥೆ ಸಂಸ್ಥಾ ಪನಾ ಕಾರ್ಯದರ್ಶಿ ಎಂ.ಎಸ್.ಹೇಮಾ ವತಿ, ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಎ.ಸಿ. ತಮ್ಮಣ್ಣ, ವಕೀಲ ಎನ್.ಸುಂದರ್‍ರಾಜ್ ಮತ್ತಿತರರು ಹಾಜರಿದ್ದರು.

Translate »