ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಮಾನಸಿಕ ಪರಿವರ್ತನೆ ಅಗತ್ಯ
ಚಾಮರಾಜನಗರ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಮಾನಸಿಕ ಪರಿವರ್ತನೆ ಅಗತ್ಯ

June 13, 2018

ಚಾಮರಾಜನಗರ:  ಸಾಮಾ ಜಿಕ ಪಿಡುಗಾಗಿ ಪರಿಣಮಿಸಿರುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿ ಯೊಬ್ಬರಲ್ಲೂ ಮಾನಸಿಕ ಪರಿವರ್ತನೆ ಅಗತ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್ ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಂಯು ಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳು ಸಮಾಜದ ಆಸ್ತಿ. ಅವರನ್ನು ತಿದ್ದಿ ಸಮಾಜದ ಸತ್ಪ್ರ್ರಜೆಗಳಾಗಿ ಮಾಡು ವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಕ್ಕಳಿಗೆ ಉತ್ತಮ ಸಮಾಜ ಹಾಗೂ ಪರಿಸರ ಒದಗಿಸುವುದಲ್ಲದೇ ಬೌದ್ಧಿಕತೆ ಯನ್ನು ತುಂಬಿ ಪ್ರಬುದ್ಧರನ್ನಾಗಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಾಲಕಾರ್ಮಿಕ ಪದ್ಧತಿ ನಿಯಂತ್ರಣಕ್ಕಾಗಿ ಕಡ್ಡಾಯ ಶಿಕ್ಷಣ ನೀತಿ ಜಾರಿಗೊಳಿಸಿವೆ ಎಂದರು.
ಬಾಲಕಾರ್ಮಿಕರು ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್, ರಸ್ತೆ ಬದಿ ಹಾಗೂ ಇತರೆಡೆಯಲ್ಲಿ ಕಡಿಮೆ ಸಂಬಳ ಕ್ಕಾಗಿ ದುಡಿಯುತ್ತಿದ್ದು, ಮೊದಲು ಅವ ರನ್ನು ಗುರುತಿಸಿ ಮುಖ್ಯವಾಹಿನಿಗೆ ತರ ಬೇಕು. ಮಕ್ಕಳನ್ನು ಚಿಕ್ಕವಯಸ್ಸಿನಲ್ಲಿಯೇ ಕೂಲಿಗೆ ಕಳುಹಿಸದಂತೆ ಪೋಷಕರಿಗೂ ಅರಿವು ಮೂಡಿಸಬೇಕು. ಬಾಲ ಕಾರ್ಮಿಕ ಪದ್ಧತಿ ತಡೆಯಲು ಸಂಘಸಂಸ್ಥೆಗಳು, ನಾಗರಿ ಕರು, ವಿದ್ಯಾರ್ಥಿಗಳು ಜಾಗೃತರಾಗ ಬೇಕಿದೆ ಎಂದು ಹರೀಶ್‍ಕುಮಾರ್ ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರತಿ ಜ್ಞಾವಿಧಿ ಬೋಧಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ವಿಶಾಲಾಕ್ಷಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ತಡೆಯಲು ಇಂದು ವಿಶ್ವದೆಲ್ಲೆಡೆ ಕಾರ್ಯಕ್ರಮವನ್ನು ಆಚರಿಸ ಲಾಗುತ್ತಿದೆ. ಸ್ವಾರ್ಥ, ದುರಾಸೆ ಹಾಗೂ ದುರುದ್ದೇಶದಿಂದ ಮಕ್ಕಳನ್ನು ಬಾಲ ಕಾರ್ಮಿಕತೆಗೆ ದೂಡಲಾಗುತ್ತಿದೆ ಇದು ಅಪರಾಧ ಎಂದರು.

ಬಾಲಕಾರ್ಮಿಕ ಪದ್ಧತಿ ನಿಯಂತ್ರಣಕ್ಕಾಗಿ ಭಾರತ ಸರ್ಕಾರ 1986ರಲ್ಲಿ ಕಾಯ್ದೆ ಜಾರಿ ಗೊಳಿಸಿದೆ. ಕಾರ್ಖಾನೆ ಹಾಗೂ ಸ್ಫೋಟಕ ವಸ್ತುಗಳ ತಯಾರಿಕಾ ಉದ್ದಿಮೆಗಳಲ್ಲಿ ಮಕ್ಕ ಳನ್ನು ತೊಡಗಿಸಿಕೊಳ್ಳುವುದು ನಿಷಿದ್ಧ. ಸ್ವತಂತ್ರ ವಾಗಿ ಜೀವಿಸುವ ಹಕ್ಕನ್ನು ಮಕ್ಕಳಿಂದ ಬಲವಂತವಾಗಿ ಕಿತ್ತುಕೊಳ್ಳದೆ, ಅವರಿಗೆ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ಒದಗಿಸಬೇಕು. ಅವರಿಗೆ ಪುನರ್ವಸತಿ ಕಲ್ಪಿಸಿ ಕಡ್ಡಾಯ ಶಿಕ್ಷಣ ನೀಡಬೇಕು ಎಂದು ವಿಶಾಲಾಕ್ಷಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಬಾಲ ನ್ಯಾಯಮಂಡಳಿಯ ಸದಸ್ಯರು ಹಾಗೂ ಸಾಧನಾ ಸಂಸ್ಥೆಯ ನಿರ್ದೇಶÀಕ ಟಿ.ಜೆ. ಸುರೇಶ್ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿದೆ. ಚಿಕ್ಕ ವಯಸ್ಸಿನ ಮಕ್ಕಳು ದುಡಿಮೆ ಮಾಡಲು ದೈಹಿಕ ಹಾಗೂ ಮಾನ ಸಿಕರಾಗಿ ಸಿದ್ಧರಿರುವುದಿಲ್ಲ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ ಸರ್ಕಾರದ ಜತೆ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಘ ಸಂಸ್ಥೆಗಳು ಕೈ ಜೋಡಿಸಬೇಕಿದೆ ಎಂದರು.

ವಿದ್ಯಾರ್ಥಿಗಳು, ಶಾಲೆಯ ಮುಖ್ಯಸ್ಥರು ಗಳು ಒಂದು ಸಂಘಟನಾತ್ಮಕ ತಂಡ ರಚಿಸಿ ಶಾಲೆಯಿಂದ ಹೊರಗುಳಿದ ಮಕ್ಕ ಳನ್ನು ಗುರುತಿಸಿ ಬಾಲಕಾರ್ಮಿಕ ಮಕ್ಕಳ ಪೋಷಕರು ಹಾಗೂ ಆಯಾ ಸಮುದಾ ಯದ ಮುಖಂಡರೊಂದಿಗೆ ಚರ್ಚಿಸಿ ಅವ ರಿಗೆ ಜಾಗೃತಿ ಮೂಡಿಸಿ ಮಕ್ಕಳನ್ನು ಮರಳಿ ಶಾಲೆಗೆ ಕರೆತರಬೇಕು. ಅಲ್ಲದೆ ಬಾಲಕಾರ್ಮಿ ಕರು ಯಾವುದೇ ಸ್ಥಳದಲ್ಲಿ ಕಂಡುಬಂದರೆ 1098 ಸಹಾಯವಾಣಿ ಗೆ ಕರೆ ಮಾಡಿ ತಿಳಿಸಬಹುದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ವನಜಾಕ್ಷಿ, ಬಾಲಕಾರ್ಮಿ ಕನ್ನು ಗುರುತಿಸಿ ಅವರಿಗೆ ಶಿಕ್ಷಣ ಹಾಗೂ ಆರೋಗ್ಯ ಸುಧಾರಣೆಗೆ ಒತ್ತು ನೀಡಲು ಸರ್ಕಾರ ಬಾಲಕಾರ್ಮಿಕ ನಿಯಂತ್ರಣ ಕಾಯ್ದೆ ಅನುಷ್ಠಾನಗೊಳಿಸಿದೆ. ಗಣಿಗಾರಿಕೆ, ಸ್ಫೋಟಕ ವಸ್ತುಗಳ ತಯಾರಿಕಾ ಕಾರ್ಖಾ ನೆಯಲ್ಲಿ ಚಿಕ್ಕ ಮಕ್ಕಳನ್ನು ತೊಡಗಿಸಿ ಕೊಂಡರೆ 25 ಸಾವಿರ ದಂಡ ವಿಧಿಸ ಲಾಗುವುದು ಎಂದರು.

ಇದೇ ಸಂದರ್ಭದಲ್ಲಿ 2017ರ ಸಾಲಿ ನಲ್ಲಿ ಬಾಲಕಾರ್ಮಿಕ ಮಕ್ಕಳ ಕಲ್ಯಾಣ ಕ್ಷೇತ್ರ ದಲ್ಲಿ ರಾಷ್ಟ್ರಪ್ರಶಸ್ತಿ ಪಡೆದ ಜಿಲ್ಲೆಯ ಸಿಎಸಿಎಲ್‍ಕೆ ಸಂಸ್ಥೆಯ ಜಿಲ್ಲಾ ಸಂಚಾಲಕ ಬಿ.ಎಸ್. ಬಸವರಾಜು ಹಾಗೂ ಬಾಲ ಕಾರ್ಮಿಕರ ಪುನರ್ವಸತಿ ಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡಿ ಇಂದು ಉನ್ನತ ಶಿಕ್ಷಣ ಪಡೆಯುತ್ತಿ ರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಮಹೇಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದು ಶೇಖರ್, ಶಿಕ್ಷಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಸೋಮಶೇಖರಪ್ಪ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ನಿಜದನಿ ಗೋವಿಂದರಾಜು ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮೊದಲು ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾಗೆ ನಗ ರದ ಚಾಮರಾಜೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಸತ್ರ ನ್ಯಾಯಾಧೀಶ ಜಿ. ಬಸವರಾಜು ಚಾಲನೆ ನೀಡಿದರು.

Translate »