ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ನಿಶ್ಚಿತ
ಮೈಸೂರು

ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ನಿಶ್ಚಿತ

January 7, 2021

ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ್ ಸ್ಪಷ್ಟೋಕ್ತಿ
ಬೆಂಗಳೂರು,ಜ.6(ಕೆಎಂಶಿ)-ಲವ್ ಜಿಹಾದ್ ನಿಷೇಧ ಕಾಯ್ದೆ ಯನ್ನು ಜಾರಿಗೆ ತರುವುದು ನಿಶ್ಚಿತ. ಈ ವಿಚಾರದಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಬಾಳ ಸಾಹೇಬ ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಲಾಖಾ ಅಭಿವೃದ್ಧಿ ಸಂಬಂಧಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಲವ್ ಜಿಹಾದ್ ನಿಷೇಧ ಕಾಯ್ದೆ ಹೆಚ್ಚು ವಿಸ್ತಾರವಾದ ವಿಷಯವಾಗಿದ್ದು ಕಾನೂನು ಇಲಾಖೆ ಪರಿಶೀಲನೆಯಲ್ಲಿದೆ ಎಂದರು. ಕಾಯ್ದೆ ಅಧ್ಯಯನ ಬಳಿಕ ಸಮಾಜದ ಮುಖಂಡರೊಂದಿಗೆ ಸಮಾಲೋಚಿಸಿ ನಂತರ ಸಚಿವ ಸಂಪುಟದಲ್ಲಿ ಚರ್ಚಿಸಿ ಜಾರಿಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗು ವುದು ಎಂದರಲ್ಲದೆ, ರಾಜ್ಯದ ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆಗೆ ಸರ್ಕಾರದ ಶಿಕ್ಷಣ ಇಲಾಖೆಯ ಪಠ್ಯಕ್ರಮವನ್ನೂ ಬೋಧಿಸಲು ಉದ್ದೇಶಿಸಲಾಗಿದೆ. ಮದರಸಾಗಳಲ್ಲಿ ಪಡೆಯುವ ಶಿಕ್ಷಣವನ್ನು ಎಸ್ಸೆಸ್ಸೆಲ್ಸಿಗೆ ತತ್ಸಮಾನವೆಂದು ಪರಿಗಣಿಸಲಾಗುತ್ತದೆ, ಇಲ್ಲಿ ಶಿಕ್ಷಣ ಪಡೆದು ಹೊರ ಬರುವ ವಿದ್ಯಾರ್ಥಿಗಳಿಗೆ ಐಟಿಐನಂತಹ ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅವಕಾಶ ಮಾಡಿಕೊಡಲಾಗುವುದು ಎಂದರು. ವಿವಿಧ ಕಾರಣಗಳಿಗಾಗಿ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ, ಕೋವಿಡ್‍ನಿಂದಾಗಿ ರಾಜ್ಯದಲ್ಲಿ ಹಣಕಾಸಿನ ಕೊರತೆಯಾಗಿದೆ ಎಂದರು.

 

 

Translate »