ಮಂಡ್ಯ ಲೋಕಸಭೆ ಕ್ಷೇತ್ರ ಮೊದಲ ದಿನ 3 ನಾಮಪತ್ರ
ಮಂಡ್ಯ

ಮಂಡ್ಯ ಲೋಕಸಭೆ ಕ್ಷೇತ್ರ ಮೊದಲ ದಿನ 3 ನಾಮಪತ್ರ

March 20, 2019

ಮಂಡ್ಯ: ಮಂಡ್ಯ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಅದಾಗಲೇ ಅಧಿ ಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಆರಂಭಗೊಂಡಿದ್ದು, ಮೂರು ನಾಮಪತ್ರ ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸಲು ಮೊದಲ ದಿನ ವಾದ ಇಂದು ಕೌಡ್ಲೆ ಚನ್ನಪ್ಪ ಎಂಬವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು, ಸಂಯುಕ್ತ ಜನತಾ ದಳ ಪಕ್ಷದಿಂದ ಒಂದು ಹಾಗೂ ಸಮಾಜವಾದಿ ಪಕ್ಷದಿಂದ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.

ಅಭ್ಯರ್ಥಿ ನಟರ ಸಿನಿಮಾ ನಿರ್ಬಂಧ: ಚಿತ್ರ ನಟರು ಚುನಾವಣಾ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವುದರಿಂದ ಅವರು ನಟಿಸಿದ ಚಲನಚಿತ್ರಗಳು ಪ್ರದರ್ಶನವಾಗುತ್ತಿ ರುವುದರಿಂದ ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತಿದೆ ಎಂದು ಸಾರ್ವ ಜನಿಕರಿಂದ ದೂರುಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿರುವ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರು, ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ವಾಣಿಜ್ಯ ಜಾಹಿರಾತು, ಚಲನಚಿತ್ರ ಪ್ರದರ್ಶನ ಹಾಗೂ ಸಿನಿಮಾ ಮಂದಿರ ಗಳಲ್ಲಿ ಚಲನಚಿತ್ರಗಳನ್ನು ಖಾಸಗಿ ಚಾನೆಲ್ ಗಳಲ್ಲಿ ಪ್ರದರ್ಶಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಭಾರತ ಚುನಾವಣಾ ಆಯೋಗ (ಪತ್ರ ಸಂ 437/6ಜಿಜೆ-ಹೆಚ್‍ಪಿ/2014) ಸ್ಪಷ್ಟಪಡಿಸಿದೆ. ಆದರೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರು ವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ಚಲನಚಿತ್ರಗಳನ್ನು (ವಾಣಿಜ್ಯ ಜಾಹೀ ರಾತು ಹೊರತುಪಡಿಸಿ) ಸರ್ಕಾರಿ ಸ್ವಾಮ್ಯದ ದೂರದರ್ಶನ ಚಾನೆಲ್‍ನಲ್ಲಿ ಪ್ರದರ್ಶಿಸಲು ನಿರ್ಬಂಧವಿರುತ್ತದೆ ಎಂದು ವಿವರಿಸಿದ್ದಾರೆ.

100 ಮೀ ನಿಷೇಧಾಜ್ಞೆ: ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ತಮ್ಮ ಬೆಂಬಲಿಗರ ಜತೆಗೂಡಿ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಬರುವುದರಿಂದ ಹೆಚ್ಚಿನ ಜನದಟ್ಟಣೆ ಉಂಟಾಗಲಿದೆ. ಈ ಪರಿಸ್ಥಿತಿ ನಿಯಂತ್ರಿ ಸುವ ಸಲುವಾಗಿ ಜಿಲ್ಲಾಧಿಕಾರಿ ಕಚೇರಿ ಸುತ್ತಲ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಆದೇಶ ಮಾ.26ರ ಮಧ್ಯರಾತ್ರಿ 12 ಗಂಟೆವರೆಗೂ ಜಾರಿಯ ಲ್ಲಿರುತ್ತದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸುಗಮವಾಗಿ ಸಾಗಲೆಂದೇ ಈ ಕ್ರಮ ಕೈ ಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

Translate »