ಉಚಿತ ಲಸಿಕೆ ಘೋಷಣೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಲ್ಲ
ಮೈಸೂರು

ಉಚಿತ ಲಸಿಕೆ ಘೋಷಣೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಲ್ಲ

November 1, 2020

ನವದೆಹಲಿ,ಅ.31-ಉಚಿತ ಕೊರೊನಾ ಲಸಿಕೆ ವಿತರಣಾ ಘೋಷಣೆ ಚುನಾ ವಣಾ ನೀತಿ ಸಂಹಿತಿ ಉಲ್ಲಂಘನೆಯಾಗು ವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಬಿಹಾರ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಜೆಪಿ ಉಚಿತ ಕೊರೊನಾ ಲಸಿಕೆ ವಿತ ರಣೆ ಮಾಡುವ ಘೋಷಿಸಿತ್ತು. ಬಿಜೆಪಿ ಈ ನಡೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿದ್ದವು. ಆಡಳಿತಾ ರೂಢ ಸರ್ಕಾರವು ಮತದಾರರಿಗೆ ಆಮಿಷ ಒಡ್ಡುತ್ತಿದೆ.

ಹೀಗಾಗಿ ಬಿಜೆಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಚುನಾವಣಾ ಆಯೋಗ ವನ್ನು ಒತ್ತಾಯಿಸಿದ್ದವು. ಅಂತೆಯೇ ಬಿಜೆಪಿಯ ಈ ಘೋಷಣೆಯನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಆಯೋಗಕ್ಕೆ ದೂರು ನೀಡಿದ್ದರು. ಬಿಜೆಪಿಯ ಭರವಸೆಯು ತಾರತಮ್ಯದಿಂದ ಕೂಡಿದ್ದು, ಚುನಾವಣೆಯ ವೇಳೆ ಕೇಂದ್ರ ಸರ್ಕಾರದ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ದೂರನ್ನು ಕೈಗೆತ್ತಿಗೊಂಡ ಆಯೋಗ, ಬಿಜೆಪಿ ನೀಡಿದ್ದ ಭರವಸೆಯು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Translate »