ಮಾಸಾಂತ್ಯಕ್ಕೆ ಬೊಮ್ಮಾಯಿ ಸರ್ಕಾರದ ಭವಿಷ್ಯ ನಿರ್ಧಾರ
ಮೈಸೂರು

ಮಾಸಾಂತ್ಯಕ್ಕೆ ಬೊಮ್ಮಾಯಿ ಸರ್ಕಾರದ ಭವಿಷ್ಯ ನಿರ್ಧಾರ

April 19, 2022

ದೆಹಲಿಯಲ್ಲಿ ವಿಶೇಷ ಸಭೆಯಲ್ಲಿ ತೀರ್ಮಾನ

ಮುಖ್ಯಮಂತ್ರಿ ಬೊಮ್ಮಾಯಿಗೆ ಮಾಹಿತಿ ನೀಡಿದ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ

ಬೆಂಗಳೂರು,ಏ.೧೮(ಕೆಎAಶಿ)-ಮುಖ್ಯಮAತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಭವಿಷ್ಯವನ್ನು ದೆಹಲಿಯ ವರಿಷ್ಠರು ಈ ತಿಂಗಳ ಅಂತ್ಯದ ವೇಳೆಗೆ ನಿರ್ಧರಿಸಲಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಷಾ, ಪಕ್ಷದ ರಾಷ್ಟಿçÃಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೂಡಿ, ಸಂಘ ಪರಿವಾರದ ನಾಯಕರಾದ ದತ್ತಾತ್ರೇಯ ಹೊಸಬಾಳೆ, ಮುಕುಂದ್ ಹಾಗೂ ಅರುಣ್ ಅವರ ಜೊತೆ ಮಹತ್ವದ ಸಭೆ ನಡೆಸ ಲಿದ್ದು ಈ ಸಭೆಯಲ್ಲಿ ಬೊಮ್ಮಾಯಿ ಅವರ ಭವಿಷ್ಯ ನಿರ್ಧಾರ ಮಾಡಲಿದ್ದಾರೆ. ಭಾನುವಾರ ಹೊಸಪೇಟೆ ಯಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡಿದ್ದ ಪಕ್ಷದ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಈ ಕುರಿತಂತೆ ಬೊಮ್ಮಾಯಿ ಅವರಿಗೆ ಸಂದೇಶ ನೀಡಿದ್ದಾರೆ.

ಇದಕ್ಕೂ ಮುನ್ನ ಮುಖ್ಯಮಂತ್ರಿ ಸೇರಿದಂತೆ ಕೋರ್ ಕಮಿಟಿ ಸದಸ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡ ನಡ್ಡಾ, ದೆಹಲಿಯಲ್ಲಿ ನಡೆಯುವ ಸಭೆಯ ನಂತರ ನಮ್ಮ ತೀರ್ಮಾನವನ್ನು ನಿಮಗೆ ತಿಳಿಸುತ್ತೇವೆ ಎಂದರು.

ಸಭೆಯಲ್ಲಿ ಯಾರಿಗೂ ಮಾತನಾಡಲು ಅವಕಾಶ ನೀಡದ ನಡ್ಡಾ, ಸರ್ಕಾರ ಮತ್ತು ಪಕ್ಷದ ವರ್ಚಸ್ಸು ಕುಂದಿದೆ ಎಂದು ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಭ್ರಷ್ಟಾ ಚಾರದ ಆರೋಪ ಕೇಳಿ ಬರುತ್ತಿದೆ. ಇದಕ್ಕೆ ಇತಿಶ್ರೀ ಹಾಡಲು ವಿಫಲರಾಗಿದ್ದೀರಿ. ಸರ್ಕಾರಕ್ಕೆ ವರ್ಚಸ್ಸು ಬಂದರೆ ಪಕ್ಷಕ್ಕೂ ಬರುತ್ತದೆ. ಆದರೆ ನೀವು ವರ್ಚಸ್ಸು ಬರುವ ಕಾರ್ಯ ವನ್ನೇ ಮಾಡುತ್ತಿಲ್ಲ. ಭ್ರಷ್ಟಾಚಾರ ಆರೋಪದ ಮೇಲೆ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು.

ಆದರೆ ನೀವು ಬಂದ ನಂತರ ಅದೇ ಆರೋಪಗಳು ಮುಂದುವರೆದಿದೆ. ಇದನ್ನೇ ಪ್ರತಿಪಕ್ಷದವರು ದೊಡ್ಡದು ಮಾಡುತ್ತಿದ್ದಾರೆ. ಭ್ರಷ್ಟಾಚಾರ ನಿಲ್ಲದಿದ್ದರೆ, ಸರ್ಕಾರ ಮತ್ತು ಪಕ್ಷಕ್ಕೆ ವರ್ಚಸ್ಸು ಬರುವುದಿಲ್ಲ. ಇನ್ನು ಮುಂದೆ ಸರ್ಕಾರ ಮತ್ತು ಪಕ್ಷ ತೆಗೆದುಕೊಳ್ಳಬೇಕಾದ ತೀರ್ಮಾನ ವನ್ನು ನಾವೇ ತೆಗೆದುಕೊಳ್ಳುತ್ತೇವೆ. ಇದರಲ್ಲಿ ನೀವು ಮೂಗು ತೂರಿಸುವ ಅವಶ್ಯಕತೆ ಇರುವುದಿಲ್ಲ. ನಾವು ಯಾವ ತೀರ್ಮಾನಗಳನ್ನು ಕೈಗೊಳ್ಳುತ್ತೇವೋ ಆ ತೀರ್ಮಾನ ಗಳನ್ನು ಅನುಷ್ಠಾನಗೊಳಿಸಬೇಕು.

ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ವರಿಷ್ಠರ ವಿಶೇಷ ಸಭೆ ನಡೆಯುತ್ತದೆ. ಆ ಸಭೆಯ ನಂತರವೇ ಎಲ್ಲವೂ ತೀರ್ಮಾನ ವಾಗುತ್ತವೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಪಕ್ಷ ಮರಳಿ ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಗುರಿ. ಹಾಗೆ ಅಧಿಕಾರಕ್ಕೆ ಬಂದರೆ ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ದೊಡ್ಡ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಬಹುದು ಎಂಬುದು ನಮ್ಮ ಉದ್ದೇಶ. ಆದರೆ ೨೦೨೪ ರ ಲೋಕಸಭಾ ಚುನಾ ವಣೆಯಲ್ಲಿ ದೊಡ್ಡ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಪೂರಕವಾಗಿ ೨೦೨೩ರ ವಿಧಾನ ಸಭಾ ಚುನಾವಣೆಯಲ್ಲಿ ಸ್ವಯಂಬಲದ ಮೇಲೆ ಅಧಿಕಾರಕ್ಕೆ ಬರುವ ಸಾಧ್ಯತೆಗಳೇ ಕ್ಷೀಣವಾಗಿವೆ ಎಂದು ನಡ್ಡಾ ಹೇಳಿದ್ದಾರೆ ಎನ್ನಲಾಗಿದೆ. ಇದಾದ ನಂತರ ಬಸವರಾಜ ಬೊಮ್ಮಾಯಿ ಸರ್ಕಾರದ ಭವಿಷ್ಯದ ಬಗ್ಗೆ ಬಿಜೆಪಿಯ ಒಳವಲಯಗಳಲ್ಲಿ ಭಿನ್ನ ಭಿನ್ನ ಧ್ವನಿಗಳು ಕೇಳುತ್ತಿದ್ದು ಮುಂದೇನಾಗಲಿದೆ ಎಂಬ ಬಗ್ಗೆ ವ್ಯಾಪಕ ಚರ್ಚೆ ಶುರುವಾಗಿದೆ.

ಎಲ್ಲವೂ ದೆಹಲಿಯಲ್ಲೇ ನಿರ್ಧಾರ: ಸಿಎಂ ಸ್ಪಷ್ಟನೆ
ಹುಬ್ಬಳ್ಳಿ ಗಲಭೆ: ಸಂಬAಧಿತರ ಬಂಧನ

ಪಿಎಸ್‌ಐ ಪರೀಕ್ಷೆ ಅಕ್ರಮ: ಸಿಐಡಿ ವರದಿ ನಂತರ ನಿರ್ಧಾರ
ಬೆಂಗಳೂರು, ಏ.೧೮ (ಕೆಎಂಶಿ)-ಸAಪುಟ ವಿಸ್ತರಣೆ ಬಗ್ಗೆ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ಸಭೆ ನಡೆಸುತ್ತೇವೆ. ಸಭೆಯ ನಂತರ ಮಾಹಿತಿ ನೀಡುತ್ತೇನೆ. ಆನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ಹೇಳಿ ದ್ದಾರೆ ಎಂದರು. ಹುಬ್ಬಳ್ಳಿ ಘಟನೆಗೆ ಸಂಬAಧಿಸಿದ ಎಲ್ಲರನ್ನೂ ಬಂಧಿಸಲಾಗಿದೆ. ಅದರ ಹಿಂದಿರುವ ನಾಯಕರ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕಾನೂ ನಿನ ಕ್ರಮ ಜರುಗಿಸಲಾಗುವುದು ಎಂದರು.

ಪಿ.ಎಸ್.ಐ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಕುರಿತು ಗೃಹ ಸಚಿವರ ಗಮನಕ್ಕೆ ಬಂದ ಕೂಡಲೇ ನಿಷ್ಪಕ್ಷಪಾತ ತನಿಖೆಯಾಗಲು ಸಿಐಡಿಗೆ ವಹಿಸಲಾಗಿದೆ. ಪರೀಕ್ಷೆ ಯಾಗಿರುವ ಕೇಂದ್ರದಲ್ಲಿ ಸಮಸ್ಯೆಯಾಗಿದ್ದರೆ, ಅಧೀಕ್ಷ ಕರ ಮಟ್ಟದಲ್ಲಿ ಸಮಸ್ಯೆ ಅಥವಾ ಮೇಲಾಧಿಕಾರಿಗಳ ಸಮಸ್ಯೆ ಇದ್ದರೆ ಸಮಗ್ರವಾಗಿ ತನಿಖೆ ಮಾಡಲು ಆದೇಶ ನೀಡಲಾಗಿದೆ. ಬೇರೆ ಪಕ್ಷದ ಸರ್ಕಾರವಾಗಿದ್ದರೆ ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿದ್ದರು. ನಾವು ಸಿಐಡಿಗೆ ಮುಕ್ತ ಅವಕಾಶ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರೀಕ್ಷೆಗಳನ್ನು ಪುನಃ ಕೈಗೊಳ್ಳಲು ವಿದ್ಯಾರ್ಥಿಗಳು ಒತ್ತಾ ಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಐಡಿ ಸಮಗ್ರ ವರದಿ ನೀಡಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಉದ್ವಿಗ್ನತೆ ನಡುವೆ ಸಿಎಂ ಬೊಮ್ಮಾಯಿಗೆ ಮೀಸಲಾತಿ ಬಿಸಿ: ಏ.೨೧ ಅಂತಿಮ ಗಡುವು
ಬೆಂಗಳೂರು, ಏ. ೧೮- ರಾಜ್ಯದಲ್ಲಿ ನಾನಾ ಕಡೆ ಉದ್ವಿಗ್ನತೆ, ಸಚಿವ ಸಂಪುಟ ವಿಸ್ತರಣೆಯ ಗದ್ದಲದ ಜತೆಗೆ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ೨ಎ ಮೀಸಲಾತಿ ನೀಡುವ ಭರವಸೆ ವಿಚಾರವನ್ನು ನಿಭಾಯಿಸುವ ಸವಾಲು ಸಿಎಂ ಬಸವರಾಜ ಬೊಮ್ಮಾಯಿ ಅವರ ಮುಂದಿದ್ದು, ಏ.೨೧ ಅಂತಿಮ ಗಡುವು ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೋಮವಾರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಆಡಳಿ ತಾರೂಢ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದ್ದು, ಏ.೨೧ರೊಳಗೆ ಭರವಸೆ ಈಡೇರಿಸದಿದ್ದರೆ ಅಂದಿನಿAದ ಮತ್ತೆ ಧರಣ ಆರಂಭಿಸುವು ದಾಗಿ ಘೋಷಿಸಿದ್ದಾರೆ. ೨ಎ ಮೀಸಲಾತಿ ನೀಡಲು ಸರ್ಕಾರಕ್ಕೆ ಏ.೨೧ರ ಅಂತಿಮ ಗಡುವು ನೀಡಲಾಗಿದೆ. ಇದು ಮಾಡು ಇಲ್ಲವೇ ಮಡಿ ಹೋರಾಟ. ಸ್ಪಂದಿಸದಿದ್ದರೆ, ಮುಂದಾಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂದೂ ಎಚ್ಚರಿಸಿದರು.

Translate »