ಲಿಂಗತ್ವ ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಲು ಕರೆ
ಚಾಮರಾಜನಗರ

ಲಿಂಗತ್ವ ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಲು ಕರೆ

July 18, 2021

ಚಾಮರಾಜನಗರ, ಜು.17- ಲಿಂಗತ್ವ ಅಲ್ಪ ಸಂಖ್ಯಾತರು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಆರ್ಥಿಕವಾಗಿ, ಸಬಲರಾಗಿ ಸ್ವಾವಲಂಬಿಗಳಾಗ ಬೇಕು ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ ಕರೆ ನೀಡಿದರು.
ನಗರದ ಜಿಲ್ಲಾ ನ್ಯಾಯಾಲಯ ಆವ ರಣದಲ್ಲಿರುವ ವ್ಯಾಜ್ಯ ಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಮತಾ ಸೊಸೈಟಿ, ಇವರ ಸಹಯೋಗದಲ್ಲಿ ಆಯೋಜಿಸಿದ್ದ ಲಿಂಗತ್ವ ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಲಿಂಗತ್ವ ಅಲ್ಪ ಸಂಖ್ಯಾತರು ಹಲವು ಸಮಸ್ಯೆ ಸವಾಲುಗಳನ್ನು ಎದುರಿಸುತ್ತಿ ದ್ದಾರೆ. ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಗಳನ್ನು ತಡೆಗಟ್ಟಬೇಕಾದರೆ ಶಿಕ್ಷಣ ಪಡೆಯು ವುದು ಬಹಳ ಅಗತ್ಯ. ಸಮಸ್ಯೆಗಳ ನಡು ವೆಯು ಕೆಲವರು ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಪಡೆದಿರುವುದು ಸಂತೋಷ ಕರವಾಗಿದೆ ಎಂದರು.

ಲಿಂಗತ್ವ ಅಲ್ಪಸಂಖ್ಯಾತರ ಹಿತರಕ್ಷಣೆಗೆ ಇತ್ತೀಚೆಗೆ ಕಾನೂನು ಬಂದಿದೆ. ಮಹಿಳೆ ಯರ ಮೇಲೆ ಅತ್ಯಾಚಾರ ದೌರ್ಜನ್ಯ ನಡೆದರೆ ಮಾತ್ರ ಶಿಕ್ಷೆ ಇರುತ್ತಿತ್ತು. ಆದರೆ ಈಗಿನ ಕಾನೂನಿನಲ್ಲಿ ಪುರುಷರು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆದರೆ ಶಿಕ್ಷೆ ನೀಡಬಹು ದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್ ಮಾತ ನಾಡಿ, ಲಿಂಗತ್ವ ಅಲ್ಪಸಂಖ್ಯಾತರು ಪುರುಷರು ಹಾಗೂ ಮಹಿಳೆಯರಷ್ಟೇ ಶಕ್ತಿ, ಸಾಮಥ್ರ್ಯ ಹೊಂದಿದ್ದಾರೆ. ಸಮಾಜದಲ್ಲಿ ಇವರನ್ನು ದೂರ ಇಡುತ್ತಿರುವುದು ನೋವಿನ ಸಂಗತಿ. ಆದರೆ, ಕಾನೂನಿನಲ್ಲಿ ಇವರಿಗೆ ಸ್ಥಾನ ಮಾನಗಳು, ಭದ್ರತೆ ಒದಗಿಸಲಾಗಿದೆ. ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೆ ಸಿಗುವ ಸೌಕರ್ಯಗಳು ಲಿಂಗತ್ವ ಅಲ್ಪಸಂಖ್ಯಾ ತರಿಗೆ ಸಿಗುವಂತಾಗಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮ ತ್ತೂರು ಇಂದುಶೇಖರ್ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರಿಗೂ ಹೃದಯವಂತಿಕೆ, ಮಾನವೀಯ ಮೌಲ್ಯಗಳಿವೆ, ಆದರೆ ಸಮಾಜ ಅವರನ್ನು ನೋಡುವ ದೃಷ್ಟಿಕೋನ ಬದ ಲಾಗಬೇಕಿದೆ. ಲಿಂಗತ್ವ ಅಲ್ಪಸಂಖ್ಯಾತರು ಸಮಾಜದಲ್ಲಿ ಎದುರಿಸುತ್ತಿರುವ ಸಮಸ್ಯೆ ಗಳನ್ನು ಮನಗಾಣಲು, ಇತರರಂತೆ ಜೀವನ ನಡೆಸಲು ಅವರ ಸÀಮಗ್ರ ಅಭಿವೃದ್ಧಿಗಾಗಿ ನಿಗಮ ರಚಿಸಬೇಕು ಎಂದರು.

ಮೈಸೂರಿನ ನಿವೃತ್ತ ಕೆಎಎಸ್ ಅಧಿಕಾರಿ ಜಿ.ಎನ್.ಬಸವರಾಜುರವರು ಚಾಮರಾಜ ನಗರದ ಐವರು ಲಿಂಗತ್ವ ಅಲ್ಪಸಂಖ್ಯಾತ ರಿಗೆ ತಲಾ 10 ಸಾವಿರ ರೂ.ಗಳಂತೆ ಒಟ್ಟು ರೂ. 50 ಸಾವಿರ ರೂ.ಗಳನ್ನು ವೈಯಕ್ತಿಕ ಧನ ಸಹಾಯ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಗಣಪತಿ ಜಿ.ಬಾದಾಮಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಚಂಪಕ, ಪ್ರಧಾನ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್.ವಿ.ಸ್ಮಿತಾ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯ ದರ್ಶಿ ಎಸ್.ಮಂಜು, ಸಮತಾ ಸೊಸೈಟಿ ವ್ಯವಸ್ಥಾಪಕ ದೀಪಬುದ್ದೆ, ಸಾಧನ ಸಂಸ್ಥೆಯ ನಿರ್ದೇಶಕ ಟಿ.ಜೆ.ಸುರೇಶ್, ವಕೀಲ ಬಿ.ಮಂಜು ಉಪಸ್ಥಿತರಿದ್ದರು.

Translate »