ದೇವರು, ಜನರ ಆಶೀರ್ವಾದದಿಂದ ಸರ್ಕಾರ ಸುಭದ್ರ
ಹಾಸನ

ದೇವರು, ಜನರ ಆಶೀರ್ವಾದದಿಂದ ಸರ್ಕಾರ ಸುಭದ್ರ

September 20, 2018

ಹಾಸನ: ದೇವರ ಅನುಗ್ರಹ, ಜನರ ಆಶೀರ್ವಾದದಿಂದ ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಹೆಚ್.ಡಿ.ಕುಮಾರ ಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದು ವರೆಯಲಿದ್ದಾರೆ ಎಂದು ಲೋಕೋಪ ಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಪುನರುಚ್ಛರಿಸಿದರು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ದಕ್ಷ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸನ್ಮಾನ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ರೈತರು ಕಳೆದ ನಾಲ್ಕು ವರ್ಷ ದಲ್ಲಿ ಮಳೆ-ಬೆಳೆ ಬಾರದೆ ರೈತರು ಕಣ್ಣೀರಿ ನಲ್ಲಿ ಕೈ ತೊಳೆಯುತ್ತಿದ್ದಾರೆ. ಜಿಲ್ಲೆಯ 1.45 ಲಕ್ಷ ರೈತ ಕುಟುಂಬಗಳಿಗೆ ಸಾಂಕೇತಿಕ ವಾಗಿ 500 ಕೋಟಿ ರೂ. ಸಾಲ ಕೊಡ ಲಾಗುತ್ತಿದೆ. ರಾಜ್ಯದಲ್ಲಿ 22 ಲಕ್ಷ ಕುಟುಂಬ ಗಳಿಗೆ ಸಾಲ ನೀಡಲಾಗುತ್ತಿದೆ. ಸಾಲಮನ್ನಾ ಆದ ಮೇಲೆ ಮತ್ತೆ ಸಾಲ ಕೊಡಲು ಗಮನ ನೀಡಲಾಗುವುದು. ಕಳೆದ 10 ವರ್ಷ ಶಿಕ್ಷಣ ಇಲಾಖೆಯಲ್ಲಿ ಪ್ರಥಮ ದರ್ಜೆ ಕಾಲೇಜಿಗೆ ಒಬ್ಬ ಪ್ರಾಧ್ಯಾಪಕರನ್ನೂ ನೇಮಕ ಮಾಡಿಕೊಂಡಿರಲಿಲ್ಲ. ಇನ್ನು 15 ದಿನ ಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭ ವಾಗಲಿದ್ದು, ಸಾವಿರ ಆಂಗ್ಲ ಮಾಧ್ಯಮ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು. ಈ ವರ್ಷ ಶಿಕ್ಷಣ ಇಲಾಖೆಗೆ ಸುಮಾರು 1.200 ಕೋಟಿ ರೂ. ಅನುದಾನ ನೀಡಲು ಇನ್ನೆರಡು-ಮೂರು ದಿನದಲ್ಲಿ ಆದೇಶ ದೊರೆ ಯಲಿದೆ. ರಾಜ್ಯದಲ್ಲಿರುವ ಎಲ್ಲಾ ಪ್ರಥಮ ದರ್ಜೆ ಕಾಲೇಜಿಗೆ ಕಟ್ಟಡ ನಿರ್ಮಾಣಕ್ಕೆ ಒತ್ತು ಕೊಡಲಾಗುವುದು. ಹಳ್ಳಿ ಮಕ್ಕಳಿಗೆ ಪ್ರತಿ ತಾಲೂಕಿನಲ್ಲಿ ಕನಿಷ್ಠ 7ನೇ ತರಗತಿವರೆಗೆ ಸೆಂಟ್ರಲ್ ಸಿಲಬಸ್ ಶಾಲೆ ತೆರೆವ ಗುರಿ ಹೊಂದಿದ್ದೇವೆ ಎಂದು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಶೃಂಗೇರಿ ಶಾರದಾಂಬೆ ಅನುಗ್ರಹ ಮತ್ತು ರಾಜ್ಯದ ಜನರ ಆಶೀರ್ವಾದ ಇರು ವವರೆಗೂ ಸರ್ಕಾರಕ್ಕೆ ಏನೂ ಆಗುವು ದಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಅಷ್ಟೇ. ಸರ್ಕಾರ ಆರು ತಿಂಗಳು ಅಥವಾ ಒಂದು ವರ್ಷ ಇರುತ್ತದೆಯೋ ಎಂಬುದು ಬೇರೆ ವಿಚಾರ. ಆದರೆ ಅಭಿವೃದ್ಧಿ ವಿಚಾರದಲ್ಲಿ ನಾವು ಯಾರೊಂದಿಗೂ ರಾಜಿ ಮಾಡಿ ಕೊಂಡಿಲ್ಲ. ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆ ಎಂದರು.

ಇದೆ ವೇಳೆ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸುಮಾರು 275ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ದಕ್ಷ ಸರ್ಕಾರಿ ಅಧಿಕಾರಿ ಮತ್ತು ನೌಕರರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಶ್ರೀ, ಶಾಸಕರಾದ ಸಿ.ಎನ್.ಬಾಲಕೃಷ್ಣ, ಕೆ.ಎಂ.ಶಿವಲಿಂಗೇ ಗೌಡ, ಕೆ.ಎಸ್.ಲಿಂಗೇಶ್, ರಾಜ್ಯ ನೌಕರರ ಸಂಘದ ಅಧ್ಯಕ್ಷ ರಾಮು, ಜಿಲ್ಲಾಧ್ಯಕ್ಷ ಕೆ.ಎಂ. ಶ್ರೀನಿವಾಸ್, ಜಿಪಂ ಪ್ರಭಾರಿ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಪುಟ್ಟಸ್ವಾಮಿ, ಎಸ್ಪಿ ಪ್ರಕಾಶ್ ಗೌಡ, ಜಿಲ್ಲಾಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಶಿವ ಸ್ವಾಮಿ, ಉಪಾಧ್ಯಕ್ಷ ವಿಶ್ವನಾಥ್, ರಾಜ್ಯ ಸಂಘಟನಾ ಕಾರ್ಯದರ್ಶಿ ಎನ್. ರಾಮಚಂದ್ರ, ಖಜಾಂಚಿ ಅಣ್ಣೇಗೌಡ, ಬಿ.ಕೆ. ರುದ್ರಪ್ಪ ಇತರರಿದ್ದರು.

Translate »