ರಾಜ್ಯದ ಎಲ್ಲಾ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ
ಮೈಸೂರು

ರಾಜ್ಯದ ಎಲ್ಲಾ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ

July 17, 2018
  • ಇಲವಾಲ ಹೋಬಳಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಸಚಿವ ಜಿ.ಟಿ. ದೇವೇಗೌಡರೊಂದಿಗೆ ಚಾಲನೆ ನೀಡಿದ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಪ್ರತಿಕ್ರಿಯೆ

ಮೈಸೂರು: ರಾಜ್ಯದಲ್ಲಿರುವ ಎಲ್ಲಾ ಕೆರೆಗಳನ್ನು ಅಭಿ ವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರೊಂದಿಗೆ ಮೈಸೂರು ತಾಲೂಕು ಇಲವಾಲ ಕೆರೆ ಅಭಿವೃದ್ಧಿ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲವಾಲ ಕೆರೆ ಹೂಳು ತೆಗೆಯು ವುದು, ಒತ್ತುವರಿ ತೆರವುಗೊಳಿಸಿ ಕೆರೆ ಸಂರಕ್ಷಣೆಗೆ ತಂತಿ ಬೇಲಿ ಹಾಕಿಸುವ ಜೊತೆಗೆ ನೀರು ತುಂಬಿಸಲು ಯೋಜಿಸಿರುವುದರಿಂದ ಸ್ಥಳ ಪರಿಶೀಲಿಸುತ್ತಿರುವುದಾಗಿ ತಿಳಿಸಿದರು.

ರಾಜ್ಯದಾದ್ಯಂತ ಮಳೆಯಾಗಿ ಜಲಾ ಶಯಗಳು ಭರ್ತಿಯಾಗಿರುವುದರಿಂದ ಏತ ನೀರಾವರಿ, ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ತಾವು ಚಾಲನೆ ನೀಡಿದ್ದು, ರೈತರ ಬೆಳೆ ಹಾಗೂ ಜಾನುವಾರುಗಳಿಗೆ ನೀರು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಇಲವಾಲ ಹೋಬಳಿಯಿಂದಲೇ ಕೆರೆಗಳಿಗೆ ನೀರು ತುಂಬಿಸುವ ಪೈಲಟ್ ಯೋಜನೆಯನ್ನು ಕೈಗೊಂಡಿದ್ದು, ಹಂತ-ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಾಮಗಾರಿ ಆರಂಭಿಸಲಾಗುವುದು ಎಂದು ಪುಟ್ಟರಾಜು ತಿಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು, ಚಾಮುಂಡೇಶ್ವರಿ ಕ್ಷೇತ್ರದಾದ್ಯಂತ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾ ಗಿದ್ದು, ಇಲವಾಲ ಕೆರೆ ಅಭಿವೃದ್ಧಿಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿ ಗಳಿಗೆ ಸೂಚಿಸಿದ್ದೇನೆ ಎಂದರು. 13.10 ಎಕರೆ ವಿಸ್ತೀರ್ಣವಿರುವ ಈ ಕೆರೆ ಅಭಿವೃದ್ಧಿಗೊಳಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಸಚಿವರು ಇಂದು ಇಲವಾಲ ಕೆರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದರು.

ವ್ಯಾಪಕ ಮಳೆಯಾಗಿದ್ದರೂ ಕೆರೆಗಳು ತುಂಬದಿರುವುದಕ್ಕೆ ಅಭಿವೃದ್ಧಿ ಕಡೆಗಣಿಸಿರುವುದೇ ಕಾರಣ. ಅದಕ್ಕಾಗಿಯೇ ಇಲವಾಲ, ಎಡಹಳ್ಳಿ, ಯಾಚೇಗೌಡನ ಹಳ್ಳಿ ಸೇರಿದಂತೆ ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರು ತುಂಬಿಸಲಾಗುವುದು ಎಂದು ಜಿಟಿಡಿ ತಿಳಿ ಸಿದರು. ನಂತರ ಆನಂದೂರು, ಯಡಹಳ್ಳಿ, ಯಾಚೇಗೌಡನಹಳ್ಳಿ ಕೆರೆಗಳಿಗೆ ತೆರಳಿದ ಸಚಿವರು ಏತ ನೀರಾವರಿ ಯೋಜನೆ ಗಳಿಗೆ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ತಹಸೀಲ್ದಾರ್ ಟಿ. ರಮೇಶ್‍ಬಾಬು, ಜಿಲ್ಲಾ ಪಂಚಾಯ್ತಿ ಸದಸ್ಯೆ ಚಂದ್ರಿಕಾ, ತಾಲೂಕು ಪಂಚಾಯ್ತಿ ಉಪಾ ಧ್ಯಕ್ಷ ಮಂಜು, ಸಣ್ಣ ನೀರಾವರಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ವೆಂಕಟೇಶ್, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಶ್ರೀನಿವಾಸ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಧರಿಸುತ್ತಾರೆ

ಮೈಸೂರು:  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕುರಿತಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ತಿಳಿಸಿ ದ್ದಾರೆ. ಮೈಸೂರು ತಾಲೂಕು ಇಲ ವಾಲ ಕೆರೆ ಅಭಿವೃದ್ಧಿ ಕುರಿತು ಸ್ಥಳ ಪರಿಶೀಲಿಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಈಗ ನಾನು ಉನ್ನತ ಶಿಕ್ಷಣ ಸಚಿವ ನಾಗಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಗಳ ಪ್ರಕ್ರಿಯೆ ನಡೆಸುವಾಗ ಮೈಸೂರಿಗೆ ಯಾರನ್ನು ಜಿಲ್ಲಾ ಉಸ್ತುವಾರಿಯ ನ್ನಾಗಿ ಮಾಡಬೇಕೆಂಬು ದರ ಬಗ್ಗೆ ಸಿಎಂ ಕುಮಾರಸ್ವಾಮಿ ಅವರು ನಿರ್ಧರಿಸುತ್ತಾರೆ ಎಂದರು.

Translate »