ಶ್ರವಣಬೆಳಗೊಳ: ಮಹಾಮಸ್ತ ಕಾಭಿಷೇಕ ಮಹೋತ್ಸವ ಸಂದರ್ಭದಲ್ಲಿ ಸರ್ಕಾರ ರಚಿಸಿದ ರಾಜ್ಯಮಟ್ಟದ ಸಮಿತಿಯ ಸದಸ್ಯರಾಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಹೋತ್ಸವವು ಯಶಸ್ವಿ ಯಾಗಲು ಹಲವಾರು ಜನಪ್ರತಿನಿಧಿಗಳು ಕಾರಣರಾಗಿದ್ದಾರೆ ಎಂದು ಸ್ವಸ್ತಿಶ್ರೀ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.
ಶ್ರವಣಬೆಳಗೊಳದ ಚಾವುಂಡರಾಯ ಸಭಾಮಂಟಪದಲ್ಲಿ ನಡೆದ ಕಾರ್ತಿಕ ಅಷ್ಟ ಹ್ನಿಕ ಮಹಾಪರ್ವದ ಬೃಹತ್ ತ್ರೈಲೋಕ ಮಂಡಲ ವಿಧಾನದ ಹಿನ್ನೆಲೆಯಲ್ಲಿ ನಡೆದ ಅಭಿನಂದನಾ ಸಮಾರಂಭದ ನೇತೃತ್ವ ವಹಿಸಿ ಮಾತನಾಡಿ, ಮಹಾಮಸ್ತಕಾಭಿ ಷೇಕ ಮಹೋತ್ಸವ ಯಶಸ್ವಿಯಾಗಲು ಎಲ್ಲರ ಸಹಕಾರ ಪ್ರಶಂಸನೀಯ ಎಂದರು.
ಕಾರ್ಯಕ್ರಮಕ್ಕೆ ಅಗತ್ಯವಾದ ರಸ್ತೆ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಸಮರ್ಪಕ ವಿದ್ಯುಚ್ಛಕ್ತಿ ವ್ಯವಸ್ಥೆ, ಆರೋಗ್ಯ ತಪಾಸಣಾ ಕೇಂದ್ರಗಳ ಸ್ಥಾಪನೆ ಹಾಗೂ ಮೂಲಭೂತ ಸೌಕರ್ಯಗಳನ್ನು ವ್ಯವ ಸ್ಥಿತವಾಗಿ ಒದಗಿಸಿದ್ದರಿಂದ ಮಹೋ ತ್ಸವವು ಯಶಸ್ವಿಯಾಗಿ ಐತಿಹಾಸಿಕ ದಾಖಲೆಯಾಗಿದೆ ಎಂದರು.
ನಂತರ ಅಭಿನಂದನೆ ಸ್ವೀಕರಿಸಿ ಮಾತ ನಾಡಿದ ಶಾಸಕ ಸಿ.ಎನ್.ಬಾಲಕೃಷ್ಣ, ಮಹಾ ಮಸ್ತಕಾಭಿಷೇಕ ಮಹೋತ್ಸವದ ಸಂದ ರ್ಭದಲ್ಲಿ ಈ ಕ್ಷೇತ್ರದ ಶಾಸಕನಾಗಿ ಸೇವೆ ಸಲ್ಲಿಸಿರುವುದು ನನ್ನ ಪುಣ್ಯ ಮತ್ತು 81ನೇ ಕನ್ನಡ ಸಾಹಿತ್ಯ ಸಮ್ಮೇಳನವು ಶ್ರೀಗಳ ಸಾರಥ್ಯ ದಲ್ಲಿ ಅತ್ಯಂತ ಯಶಸ್ವಿಯಾಗಿತ್ತು ಎಂದರು.
ಶ್ರೀಗಳ ಆಶೀರ್ವಾದದಿಂದ ಮತ್ತೊಮ್ಮೆ ಶಾಸಕನಾಗಿ ಆಯ್ಕೆಯಾಗಿದ್ದು, ಶ್ರೀಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಕ್ಷೇತ್ರಕ್ಕೆ ಒಂದು ದೊಡ್ಡ ಭವನದ ಅವ ಶ್ಯಕತೆಯಿದ್ದು ಮುಂದಿನ ಬಜೆಟ್‍ನಲ್ಲಿ ಸೇರಿಸಿ ಭವನದ ಕಾಮಗಾರಿಯನ್ನು ಶುರು ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ರಮೇಶ್, ತಾಲೂಕು ಪಂಚಾಯಿತಿ ಸದಸ್ಯೆ ಮಹಾಲಕ್ಷ್ಮಿ ಶಿವ ರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ರಮೇಶ್, ಮಾಜಿ ಅಧ್ಯಕ್ಷೆ ಹೇಮಾ ಪ್ರಭಾ ಕರ್, ವೈದ್ಯಾಧಿಕಾರಿ ಡಾ.ಬಿ.ಆರ್. ಯುವ ರಾಜ್, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೆ ಶೀಲಾ ಅನಂತ ರಾಜ್, ಪದಾಧಿಕಾರಿಗಳಾದ ಲತಾ ಸುದ ರ್ಶನ್, ಕಲ್ಪನಾ ಉದಯಕುಮಾರ್, ರಾಜಶ್ರೀ ಕುಶನಾಳೆ ಹಾಗೂ ಸುಪ್ರಭಾ ಅಭಿನಂದನ ಅವರನ್ನು ಸನ್ಮಾನಿಸಲಾಯಿತು.ಆಚಾರ್ಯ ಶ್ರೀ ವರ್ಧಮಾನ ಸಾಗರ ಮಹಾರಾಜರು, ಆಚಾರ್ಯ ಶ್ರೀ ಸುವಿಧಿ ಸಾಗರ ಮಹಾರಾಜರು, ಆಚಾರ್ಯ ಶ್ರೀ ಕೀರ್ತಿ ಸಾಗರ ಮಹಾರಾಜರು, ಮಾತಾಜಿ ಯವರು ಹಾಗೂ ಇತರರು ಭಾಗವಹಿಸಿದ್ದರು.