ನಾಳೆ ಮಹದೇಶ್ವರ ಬೆಟ್ಟಕ್ಕೆ ಸಿಎಂ ಹೆಚ್‍ಡಿಕೆ ಭೇಟಿ ಸುತ್ತೂರು ಮಠದ ಅತಿಥಿ ಗೃಹ ಉದ್ಘಾಟನೆ, ಸುತ್ತೂರು ಶ್ರೀ, ಆದಿಚುಂಚನಗಿರಿ ಶ್ರೀ, ಹಲವು ಸಚಿವರು ಭಾಗಿ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನ. 30ರಂದು ಸುತ್ತೂರು ಮಠದ ಅತಿಥಿ ಗೃಹ ಉದ್ಘಾ ಟನಾ ಸಮಾರಂಭ ನಡೆಯಲಿದೆ.

ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸುತ್ತೂರು ಮಠದ ಅತಿಥಿ ಗೃಹವನ್ನು ಉದ್ಘಾಟಿಸಲಿದ್ದಾರೆ. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಮಹದೇಶ್ವರ ಬೆಟ್ಟ ಸಾಲೂರು ಮಠದ ಶ್ರೀ ಗುರು ಸ್ವಾಮೀಜಿ, ವಾಟಾಳು ಮಠದ ಡಾ.ಶ್ರೀ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಚಿವ ಡಾ.ಶಾಮ ನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸ ಲಿದ್ದಾರೆ. ಸಚಿವರಾದ ಜಿ.ಟಿ.ದೇವೇಗೌಡ, ಸಿ.ಪುಟ್ಟರಂಗಶೆಟ್ಟಿ, ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾರಾ ಮಹೇಶ್, ರಾಜ ಶೇಖರ್ ಬಿ.ಪಾಟೀಲ್, ಸಂಸದ ಆರ್.ಧ್ರುವ ನಾರಾಯಣ್, ಶಾಸಕರಾದ ಆರ್.ನರೇಂದ್ರ, ಕೆ.ಟಿ.ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಸಂದೇಶ್ ನಾಗರಾಜ್, ಆರ್.ಧರ್ಮ ಸೇನ, ಸಿ.ಎಸ್.ನಿರಂಜನ್‍ಕುಮಾರ್, ಎನ್.ಮಹೇಶ್, ಮಾಜಿ ಶಾಸಕಿ ಪರಿಮಳಾ ನಾಗಪ್ಪ ಭಾಗವಹಿಸಲಿದ್ದಾರೆ.

ಸುತ್ತೂರು ಮಠಕ್ಕೂ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೂ ಮೊದಲಿನಿಂದಲೂ ನಿಕಟವಾದ ಸಂಬಂಧವಿದೆ. ಹೀಗಾಗಿ ಮಹದೇಶ್ವರ ಬೆಟ್ಟದಲ್ಲಿ ಸುತ್ತೂರು ಶಾಖಾ ಮಠವನ್ನು ಸ್ಥಾಪಿಸಲಾಗಿದೆ. ಈ ಶಾಖಾ ಮಠಕ್ಕೆ ಹೊಂದಿಕೊಂಡಂತೆ ಅತಿಥಿ ಗೃಹವನ್ನು ನಿರ್ಮಿಸಲಾಗಿದೆ. 63 ಸುಸಜ್ಜಿತ ಕೊಠಡಿಗಳಿವೆ. ಎಲ್ಲಾ ರೀತಿಯ ಅನುಕೂಲತೆಗಳನ್ನು ಕಲ್ಪಿಸಲಾಗಿದೆ. ಭಕ್ತಾದಿಗಳು ಹಾಗೂ ಯಾತ್ರಾರ್ಥಿಗಳ ವಾಸ್ತವ್ಯಕ್ಕೆ ಕೊಠಡಿಗಳು ಲಭ್ಯವಿದೆ ಎಂದು ಜೆಎಸ್‍ಎಸ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.