ಜು.27ರಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ: ಎಡಿಸಿ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ
ಮೈಸೂರು

ಜು.27ರಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ: ಎಡಿಸಿ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ

July 10, 2018

ಮೈಸೂರು:  ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜು.27 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಇಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ್ ಮಾತನಾಡಿ, ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಗಳ ಸಹಕಾರ ಮುಖ್ಯವಾಗಿರುತ್ತದೆ. ಇಲಾಖೆಗಳಿಗೆ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ವಹಿಸಲಾಗಿರುವ ಕೆಲಸವನ್ನು ಅಧಿಕಾರಿಗಳು ಯಾವುದೇ ಲೋಪ ಉಂಟಾಗದಂತೆ ನಿರ್ವಹಿಸಬೇಕು ಎಂದರು.

ಜು.27 ರಂದು ಬೆಳಿಗ್ಗೆ 11-30 ಗಂಟೆಗೆ ಕಲಾಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಗೀತಗಾಯನ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9-30ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಕಲಾಮಂದಿರದ ವರೆಗೆ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಮೆರವಣಿಗೆ ಕಾರ್ಯಕ್ರಮವಿದ್ದು, ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಡೊಳ್ಳು ಕುಣಿತ, ವೀರಗಾಸೆ ಕಲಾತಂಡಗಳನ್ನು ಒಳಗೊಂಡಿರುತ್ತದೆ. ಮೆರವಣಿಗೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.

ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮೆರವಣಿಗೆಗೆ ಚಾಲನೆ ನೀಡುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣ ಹಾಗೂ ಕಲಾಮಂದಿರದಲ್ಲಿ ಸ್ವಚ್ಛತೆ, ತಳಿರು ತೋರಣದ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಿದ್ದಾರೆ.ಪೊಲೀಸ್ ಇಲಾಖೆ ಅಧಿಕಾರಿಗಳು ಸೂಕ್ತ ಭದ್ರತಾ ವ್ಯವಸ್ಥೆ ನೀಡುವಂತೆ ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ದಯಾನಂದ್, ಕನ್ನಡ ಮತ್ತು ಸಂಸ್ಕøತಿ ಸಹಾಯಕ ನಿರ್ದೇಶಕ ಚನ್ನಪ್ಪ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ತಯೂರು ವಿಠಲಮೂರ್ತಿ, ಮೈಕ್ ಪ್ರಕಾಶ್, ಯಶೋಧ ಹಾಗೂ ಇನ್ನಿತರ ಗಣ್ಯರು ಸಭೆಯಲ್ಲಿ ಹಾಜರಿದ್ದರು.

Translate »