ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆ ಮತ್ತೇ ತ್ರಿವೇಣಿ ಸಂಗಮ ಜಲಾವೃತ
ಕೊಡಗು

ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆ ಮತ್ತೇ ತ್ರಿವೇಣಿ ಸಂಗಮ ಜಲಾವೃತ

June 15, 2018

ಮಡಿಕೇರಿ:  ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯ ಆರ್ಭಟ ಮುಂದುವರಿದಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಗುರುವಾರ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿತು.

ಭಾಗಮಂಡಲ-ಅಯ್ಯಂಗೇರಿ ರಸ್ತೆ ಮೇಲೆ 3 ಅಡಿ ನೀರು ಹರಿದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಕೇಶ ಮುಂಡನ ಪ್ರದೇಶ ಕೂಡ ನೀರಿನಿಂದ ಆವೃತವಾಗಿದ್ದು, ಸಂಪೂರ್ಣ ಪ್ರದೇಶ ದ್ವೀಪದಂತಾಗಿದೆ.ಜೂನ್ 2ನೇ ವಾರದಲ್ಲಿ ಭಾಗಮಂಡಲ ತ್ರಿವೇಣಿ ಸಂಗಮ 2ನೇ ಬಾರಿಗೆ ಜಲಾವೃತ ವಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.

ವಾಹನ ಸಂಚಾರ ಸಂಪೂರ್ಣ ಬಂದ್ ಆದ ಹಿನ್ನಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೋಟ್ ಮೂಲಕ ಜನರನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಿಸಿದರು. ಭಾಗಮಂಡಲ ವ್ಯಾಪ್ತಿಯಲ್ಲಿ 19 ಸೆ.ಮೀ.ಮಳೆಯಾದ ಬಗ್ಗೆ ವರದಿಯಾಗಿದೆ.

ಕಳೆದ 24 ಗಂಟೆಗಳಲ್ಲಿ ಕೊಡಗು ಜಿಲ್ಲೆ ಸರಾಸರಿ 85.06 ಮಿ.ಮಿ. ಮಳೆಯಾಗಿದ್ದು, ಮಡಿಕೇರಿ ತಾಲ್ಲೂಕಿಗೆ 148.45 ಮಿ.ಮಿ. ಮಳೆಯಾಗಿದೆ. ವಿರಾಜಪೇಟೆ 75.22 ಹಾಗೂ ಸೋಮ ವಾರಪೇಟೆ ತಾಲೂಕಿಗೆ 31.50 ಮಿ.ಮಿ. ಮಳೆಯಾಗಿದೆ. ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.

Translate »