ಪತ್ನಿಯನ್ನು ಕೊಂದ ಪತಿಗೆ ಜೀವಾವಧಿ ಶಿಕ್ಷೆ
ಮೈಸೂರು

ಪತ್ನಿಯನ್ನು ಕೊಂದ ಪತಿಗೆ ಜೀವಾವಧಿ ಶಿಕ್ಷೆ

July 2, 2018

ಮೈಸೂರು: ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಮೈಸೂರಿನ ಕುಂಬಾರಕೊಪ್ಪಲಿನ ಗರಡಿ ಬೀದಿಯ ಮೂರ್ತಿ ಅಲಿಯಾಸ್ ಕೃಷ್ಣಮೂರ್ತಿ (37) ಜೀವಾವಧಿ ಶಿಕ್ಷೆಗೆ ಗುರಿಯಾದವ ನಾಗಿದ್ದು, ಈತ 2014ರ ಸೆ.25ರಂದು ತನ್ನ ಪತ್ನಿ ಸುವರ್ಣ ಅವರ ಶೀಲ ಶಂಕಿಸಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಪರಿಣಾಮ ಸುಟ್ಟ ಗಾಯಗಳಿಂದ ಸುವರ್ಣ ಸಾವನ್ನಪ್ಪಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಮೇಟಗಳ್ಳಿ ಪೊಲೀಸರು, ತನಿಖೆ ಕೈಗೊಂಡು ಎಲ್ಲಾ ಅಗತ್ಯ ಸಾಕ್ಷ್ಯಾ ಧಾರಗಳೊಂದಿಗೆ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾ ರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ ವಿಚಾರಣೆ ನಡೆಸಿದ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯ ಇದೇ ಜೂ.28ರಂದು ಮೂರ್ತಿ ಅಲಿಯಾಸ್ ಕೃಷ್ಣಮೂರ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸರ್ಕಾರಿ ಅಭಿಯೋಜಕ ಮಹಂತಪ್ಪ ಆರೋಪಿಯ ಕೃತ್ಯ ಸಾಬೀತುಪಡಿಸಲು ಸಮರ್ಥ ವಾದ ಮಂಡಿಸಿದ್ದರು.

ಈ ಪ್ರಕರಣದಲ್ಲಿ ಉತ್ತಮ ತನಿಖೆ ಕೈಗೊಂಡ ಮೇಟಗಳ್ಳಿ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್ಸ್‍ಪೆಕ್ಟರ್ ಎಂ.ಎಲ್. ಶೇಖರ್ ಹಾಗೂ ಸಿಬ್ಬಂದಿಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪ್ರಶಂಶಿಸಿದ್ದಾರೆ.

Translate »