ಅನ್ನಭಾಗ್ಯ ಯೋಜನೆ ಕೈಬಿಡಲು ಸಿಎಂ ಚಿಂತನೆ
ಮೈಸೂರು

ಅನ್ನಭಾಗ್ಯ ಯೋಜನೆ ಕೈಬಿಡಲು ಸಿಎಂ ಚಿಂತನೆ

June 7, 2019

ಬೆಂಗಳೂರು, ಜೂ.6-ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅನುಷ್ಠಾನಕ್ಕೆ ತಂದಿದ್ದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಕೈಬಿಡಲು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರೈತನ ಸಾಲ ಮನ್ನಾ ದಿಂದ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಅದನ್ನು ಸರಿದೂಗಿಸಲು ಅನ್ನಭಾಗ್ಯ ಯೋಜನೆ ಯನ್ನು ಕೈಬಿಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ. ಅಲ್ಲದೇ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಬಸ್ ಪಾಸ್ ಅನ್ನೂ ರದ್ದು ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿಗಳ ಮಧ್ಯೆ ಜಾತಿ ಹೆಸರಲ್ಲಿ ತಾರತಮ್ಯ ತೋರಿದಂತಾಗುತ್ತದೆ ಎಂಬ ಕಾರಣವನ್ನು ಮುಂದಿಟ್ಟು, ಉಚಿತ ಬಸ್ ಪಾಸ್ ರದ್ದುಪಡಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಮೂಲಗಳು ಹೇಳಿವೆ.

Translate »