ಸರ್ಕಾರಿ ಯೋಜನೆ ಅನುಷ್ಠಾನಕ್ಕೆ ನಿರ್ಲಕ್ಷ್ಯ ಬೇಡಕಂದಾಯ ಅದಾಲತ್‍ನಲ್ಲಿ ಡಿಸಿ ಅಕ್ರಂ ಪಾಷ ಸೂಚನೆ
ಹಾಸನ

ಸರ್ಕಾರಿ ಯೋಜನೆ ಅನುಷ್ಠಾನಕ್ಕೆ ನಿರ್ಲಕ್ಷ್ಯ ಬೇಡಕಂದಾಯ ಅದಾಲತ್‍ನಲ್ಲಿ ಡಿಸಿ ಅಕ್ರಂ ಪಾಷ ಸೂಚನೆ

July 23, 2019

ಹಾಸನ, ಜು.22- ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಅಥವಾ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. ವಿಶೇಷ ಕಾಳಜಿವಹಿಸಿ ಅಧಿಕಾರಿಗಳು ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು.

ಕೆಂಚಮ್ಮನ ಹೊಸಕೋಟೆಯಲ್ಲಿ ಸೋಮವಾರ ಜಿಲ್ಲಾಡಳಿತ, ಆಲೂರು ತಾಲೂಕು ಆಡಳಿತದ ವತಿಯಿಂದ ಏರ್ಪ ಡಿಸಲಾಗಿದ್ದ ಕಂದಾಯ ಅದಾಲತ್ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನು ಭವಿಗಳು ಸರ್ಕಾರಿ ಕಚೇರಿಗೆ ಅಲೆದಾಡು ವಂತಾಗಬಾರದು. ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ವಿಶೇಷ ಕಾಳಜಿ ವಹಿಸಿ ಕೆಲಸ ಮಾಡ ಬೇಕು ಎಂದರು.

ಜಿಲ್ಲೆಯಲ್ಲಿ ಪೌತಿ ಖಾತೆ ಆಂದೋಲನ ಪ್ರಾರಂಭಿಸಲಾಗಿದೆ. ಎಲ್ಲರ ಜಮೀನು ದಾಖಲೆಗಳನ್ನು ನ್ಯಾಯ ಸಮ್ಮತವಾಗಿ ಸರಿಪಡಿಸಿಕೊಡುವ ಕೆಲಸಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸೌಲಭ್ಯಗಳನ್ನು ವಿತರಿಸಲು ಜಿಲ್ಲಾಡಳಿ ತವೇ ಗ್ರಾಮ ಗ್ರಾಮಗಳಿಗೆ ಆಗಮಿಸು ತ್ತಿದ್ದು, ಆ ಮೂಲಕ ಜನಸಾಮಾನ್ಯರ ಕುಂದು ಕೊರತೆಗಳನ್ನು ನಿವಾರಿಸಲು ಶ್ರಮಿಸುತ್ತಿದೆ. ಇದೇ ರೀತಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅನುಷ್ಠಾನ ದಲ್ಲಿ ಹಾಸನ ಜಿಲ್ಲಾಡಳಿತ ವಿಶೇಷ ಪರಿ ಶ್ರಮ ವಹಿಸಿ ರೈತರ ದಾಖಲೆಗಳನ್ನು ಗಣಕೀ ಕರಣ ಮಾಡಲಾಗಿದೆ ಎಂದರು.

ಉಪವಿಭಾಗಾಧಿಕಾರಿ ಕವಿತಾ ರಾಜಾ ರಾಂ ಮಾತನಾಡಿ, ಕಂದಾಯ ಇಲಾಖೆ ಇನ್ನಷ್ಟು ಸಮಾಜಮುಖಿಯಾಗುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಯವರ ಮಾರ್ಗ ದರ್ಶನದಲ್ಲಿ ಕೆಲಸ ಮಾಡಲಾಗುತ್ತಿದೆ. ಎಲ್ಲಾ ರೀತಿಯ ಪಿಂಚಣಿಗಳಿಗೆ ಅರ್ಹ ರಾಗಿರುವ ಫಲಾನುಭವಿಗಳನ್ನು ಗುರುತಿಸಿ ಸಾಮಾಜಿಕ ಭದ್ರತಾ ಯೋಜನಾ ಸೌಲಭ್ಯ ಒದಗಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿರೀನ್ ತಾಜ್ ಮತ್ತಿತರರು ಹಾಜರಿ ದ್ದರು. ಅಲ್ಲದೇ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಯಿತು.

ವಿದ್ಯಾರ್ಥಿ ನಿಲಯಗಳಿಗೆ ಭೇಟಿ, ಪರಿಶೀಲನೆ: ಇದೇ ವೇಳೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆಲೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿದ್ಯಾರ್ಥಿ ನಿಲಯದ ಕುಂದು ಕೊರತೆ ಪರಿಶೀಲಿಸಿದ ಅವರು ವಿದ್ಯಾರ್ಥಿಗಳಿಗೆ ಈ ಬಗ್ಗೆ ಯಾವುದೇ ಅಸಮಾಧಾನವಿದ್ದಲ್ಲಿ ಅಥವಾ ಮೂಲ ಸೌಲಭ್ಯದ ಕೊರತೆ ಯಿದ್ದಲ್ಲಿ ಶೀಘ್ರ ಬಗೆಹರಿಸಿಕೊಳ್ಳುವಂತೆ ತಿಳಿಸಿದರು. ಅಲ್ಲದೇ ಜಿಲ್ಲಾಧಿಕಾರಿ ಅಕ್ರಂ ಪಾಷ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ಗಳಿಗೆ ಜಲ ಸಂರಕ್ಷಣೆ, ಜಲ ಸಾಕ್ಷರತೆ ಬಗ್ಗೆ ಅರಿವು ಮೂಡಿಸಿದರು.

Translate »