ತೋಟಗಾರಿಕೆ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಜಾರಿ
ಚಾಮರಾಜನಗರ

ತೋಟಗಾರಿಕೆ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಜಾರಿ

June 12, 2018

ಚಾಮರಾಜನಗರ: ತೋಟಗಾರಿಕೆ ಇಲಾಖೆಯು 2018ರ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ತಾಲೂಕಿನಲ್ಲಿ ಬೆಳೆಯುವ ಮುಖ್ಯ ತೋಟ ಗಾರಿಕಾ ಬೆಳೆಗಳಿಗೆ ಅನುಷ್ಠಾನಗೊಳಿಸುತ್ತಿದೆ.ಚಾಮರಾಜನಗರ ತಾಲೂಕಿನ ಕಸಬಾ, ಚಂದಕವಾಡಿ ಹೋಬಳಿಗೆ ಈರುಳ್ಳಿ (ನೀರಾ ವರಿ), ಅರಿಶಿನ, ಟೊಮೆಟೊ (ಅನಿರ್ದಿಷ್ಟ), ಹರದನಹಳ್ಳಿ ಹೋಬಳಿಗೆ ಈರುಳ್ಳಿ (ನೀರಾ ವರಿ), ಅರಿಶಿನ, ಆಲೂಗಡ್ಡೆ, ಟೊಮೆಟೊ (ಅನಿರ್ದಿಷ್ಟ), ಹರವೆ ಹಾಗೂ ಸಂತೇಮರ ಹಳ್ಳಿ ಹೋಬಳಿಗೆ ಅರಿಶಿನ, ಟೊಮೆಟೊ (ಅನಿರ್ದಿಷ್ಟ) ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿವೆ.

ಗುಂಡ್ಲುಪೇಟೆ ತಾಲೂಕಿನ ಕಸಬಾ, ಬೇಗೂರು, ಹಂಗಳ, ತೆರಕಣಾಂಬಿ ಹೋಬ ಳಿಗೆ ಹಾಗೂ ಕೊಳ್ಳೇಗಾಲ ತಾಲೂಕಿನ ಕಸಬಾ, ಪಾಳ್ಯ ಹೋಬಳಿಗೆ ಈರುಳ್ಳಿ (ನೀರಾ ವರಿ), ಅರಿಶಿನ, ಟೊಮೆಟೊ (ಅನಿರ್ದಿಷ್ಟ) ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿವೆ. ಹನೂರು ತಾಲೂಕಿನ ಹನೂರು ಭಾಗಕ್ಕೆ ಈರುಳ್ಳಿ (ನೀರಾವರಿ), ಅರಿಶಿನ, ಟೊಮೆಟೊ (ಅನಿ ರ್ದಿಷ್ಟ) ಹಾಗೂ ಲೊಕ್ಕನಹಳ್ಳಿ ಹೋಬಳಿಗೆ ಈರುಳ್ಳಿ (ನೀರಾವರಿ), ಅರಿಶಿನ, ಟೊಮೆಟೊ, ಆಲೂಗಡ್ಡೆ (ಅನಿರ್ದಿಷ್ಟ), ರಾಮಾಪುರ ಹೋಬಳಿಗೆ ಈರುಳ್ಳಿ (ನೀರಾವರಿ), ಅರಿಶಿನ (ಅನಿರ್ದಿಷ್ಟ) ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿವೆ.

48ಗಂಟೆಯಲ್ಲಿ ಬೆಳೆ ಹಾನಿ ಮಾಹಿತಿ: 2018ರ ಮುಂಗಾರು ಹಂಗಾಮಿನಲ್ಲಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿ ಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ ಇವುಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ಪರಿಹಾರವನ್ನು ನೀಡ ಲಾಗುವುದು ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆಯ ಕಚೇರಿಗಳಿಗೆ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 48 ಗಂಟೆಗಳೊಳಗೆ ತಿಳಿಸಬೇಕು.

ಮಳೆಯ ಅಭಾವ ಅಥವಾ ಇತರೇ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ.25ರಷ್ಟು ಪರಿ ಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ವಿಮೆಯನ್ನು ರದ್ದುಪಡಿಸಲಾಗುವುದು. ಇನ್ನುಳಿದಂತೆ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ಬೆಳೆ ವಿಮೆ ಹಣವನ್ನು ನೀಡಲಾಗುವುದು.

ಬೆಳೆ ನಷ್ಟ ಪರಿಹಾರ ಇತ್ಯರ್ಥ ಹೇಗೆ?: ಅಧಿಸೂಚಿತ ಘಟಕದಲ್ಲಿ ಸಂಭವಿಸುವ ಹವಾಮಾನ ವೈಪರಿತ್ಯಗಳಾದ ಹೆಚ್ಚಿನ ಮಳೆ, ನೆರೆ, ಪ್ರವಾಹಗಳಿಂದ ಬೆಳೆ ಮುಳು ಗಡೆ, ದೀರ್ಘಕಾಲದ ತೇವಾಂಶ ಕೊರತೆ, ತೀವ್ರ ಬರಗಾಲ ಮುಂತಾದವುಗಳಿಂದ ಯಾವುದೇ ಅಧಿಸೂಚಿತ ವಿಮಾ ಘಟಕ ದಲ್ಲಿ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ನಿರೀಕ್ಷಿತ ಇಳುವರಿಯು ಪ್ರಾರಂಭಿಕ ಇಳುವರಿಯ ಶೇ.50 ಕ್ಕಿಂತ ಕಡಿಮೆ ಇದ್ದರೆ, ವಿಮೆ ಮಾಡಿಸಿದ ರೈತರಿಗೆ ಅಂದಾಜು ಮಾಡ ಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ. 25ರಷ್ಟು ಹಣವನ್ನು ಮುಂಚಿತವಾಗಿ ವಿಮಾ ಸಂಸ್ಥೆಯು ನೀಡಲಾಗುವುದು. ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ಬೆಳೆ ಇಳುವರಿ ಮಾಹಿತಿ ಬಂದನಂತರ ಅಂತಿಮ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಈ ಹಣ ವನ್ನು ಹೊಂದಾಣಿಕೆ ಮಾಡಲಾಗುವುದು.
ಬೆಳೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭ ದಲ್ಲಿ ಕಟಾವು ಮಾಡಿದ ಎರಡು ವಾರ ಗಳೊಳಗೆ (ಹದಿನಾಲ್ಕು ದಿನಗಳು) ಚಂಡ ಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಗ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರ ವನ್ನು ಇತ್ಯರ್ಥಪಡಿಸಲಾಗುವುದು.

ವಿಮಾ ವ್ಯಾಪ್ತಿಗೆ ಒಳಪಡುವುದು ಹೇಗೆ?
ಹೋಬಳಿ ಪಟ್ಟಿಯಲ್ಲಿ ನೀಡಲಾಗಿರುವ ಬೆಳೆಗಳಿಗೆ ಇಚ್ಛೆಯುಳ್ಳ ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣ , ಬ್ಯಾಂಕ್ ಪಾಸ್‍ಪುಸ್ತಕ, ಆಧಾರ್ ಸಂಖ್ಯೆ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಗ್ರಾಮ ಪಂಚಾಯಿತಿಗಳಲ್ಲಿ ನೋಂದಣ ಮಾಡಿ ಸಂರಕ್ಷಣೆ ಪೋರ್ಟಲ್‍ನಲ್ಲಿ ಅಳವಡಿಸಿದ ನಂತರ ಅರ್ಜಿಗಳನ್ನು ಹತ್ತಿರದ ಆರ್ಥಿಕ ಸಂಸ್ಥೆ (ಬ್ಯಾಂಕ್)ಗಳಿಗೆ ಹಾಜರುಪಡಿಸಬೇಕು. ವಿಮಾ ಕಂತನ್ನು ಪಾವತಿಸಿ ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳಬೇಕು. ಬೆಳೆ ಸಾಲ ಪಡೆದ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸಲಾಗುವುದು.

ಬೆಳೆ ಸಾಲ ಪಡೆಯದ ರೈತರು ಅಂದಾಜು ಉಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೇ ಪಾಲ್ಗೊಳ್ಳಬಹುದು. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ ಅವಧಿಯೊಳಗಾಗಿ ನೋಂದಾಯಿಸಿದ ಆರ್ಥಿಕ ಸಂಸ್ಥೆಗಳಲ್ಲಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು, ಅಂತಹ ಸಂದರ್ಭದಲ್ಲಿ ಹೆಚ್ಚುವರಿ ವಿಮಾ ಕಂತಿನ ವ್ಯತ್ಯಾಸದ ಮೊತ್ತವನ್ನು ರೈತರು ಭರಿಸತಕ್ಕದ್ದು ಅಥವಾ ಹೆಚ್ಚುವರಿ ವಿಮಾ ಕಂತನ್ನು ಪಾವತಿಸಿದಲ್ಲಿ ರೈತರಿಗೆ ಮರು ಪಾವತಿಸಬಹುದು.

ವಿಮಾ ವ್ಯಾಪ್ತಿಗೆ ಒಳಪಟ್ಟ ಬೆಳೆಗಳಿಗೆ ಪಾವತಿಸಬೇಕಾದ ವಿಮಾ ಕಂತು (ಪ್ರತಿ ಎಕರೆಗೆ)

ಟೊಮೊಟೊ (ಅನಿರ್ಧಿಷ್ಟ) ರೂ. 2,388
ಆಲೂಗೆಡ್ಡೆ (ನೀರಾವರಿ) ರೂ. 2,935
ಈರುಳ್ಳಿ (ನೀರಾವರಿ) ರೂ. 1,518
ಅರಿಶಿನ (ಅನಿರ್ಧಿಷ್ಟ) ರೂ. 2,692

Translate »