ಇಂದು ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣದ ನೂತನ ಕಟ್ಟಡಗಳ ಉದ್ಘಾಟನೆ
ಮೈಸೂರು

ಇಂದು ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣದ ನೂತನ ಕಟ್ಟಡಗಳ ಉದ್ಘಾಟನೆ

March 2, 2019

ಮೈಸೂರು: ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ನಂಜನಗೂಡು ತಾಲೂಕಿನ ಮುಳ್ಳೂರಿನಲ್ಲಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲಾ ಸಂಕೀರ್ಣದ ನೂತನ ಕಟ್ಟಡಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಸೇರಿದ ವಿವಿಧ ಕಟ್ಟಡಗಳ ಉದ್ಘಾಟನಾ ಸಮಾರಂಭವು ಮಾ.2ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸುವರು, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟಡಗಳ ಉದ್ಘಾಟನೆ ಮಾಡುವರು. ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಉಪಸ್ಥಿತಿಯಲ್ಲಿ ಶಾಸಕ ಹರ್ಷ ವರ್ಧನ್ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಮ್, ಸಂಸದರಾದ ಆರ್.ಧ್ರುವನಾರಾಯಣ್, ಎಲ್.ಆರ್.ಶಿವರಾಮೇಗೌಡ, ಪ್ರತಾಪ್ ಸಿಂಹ, ಶಾಸಕರಾದ ತನ್ವೀರ್‍ಸೇಠ್, ಎ.ಹೆಚ್.ವಿಶ್ವನಾಥ್, ಎಸ್.ಎ.ರಾಮದಾಸ್, ಕೆ.ಮಹದೇವು, ಎಲ್.ನಾಗೇಂದ್ರ, ಡಾ. ಯತೀಂದ್ರ, ಎಂ.ಅಶ್ವಿನ್‍ಕುಮಾರ್, ಅನಿಲ್‍ಕುಮಾರ್, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಸ್.ನಾಗರಾಜು, ಆರ್.ಧರ್ಮಸೇನಾ, ಕೆ.ಟಿ.ಶ್ರೀಕಂಠೇಗೌಡ, ಕೆ.ವಿ.ನಾರಾ ಯಣಸ್ವಾಮಿ, ಜಿಪಂ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾ.ರಾ.ನಂದೀಶ್ ಹಾಗೂ ಇಲಾಖೆ ಅಧಿಕಾರಿಗಳು ಭಾಗವಹಿಸುವರು.

Translate »