ಮೈಸೂರು ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ನೆಲೆ ಸ್ಥಳಾಂತರವಿಲ್ಲ
ಮೈಸೂರು

ಮೈಸೂರು ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ನೆಲೆ ಸ್ಥಳಾಂತರವಿಲ್ಲ

February 11, 2020

ಮೈಸೂರು, ಫೆ.10 – ಬೆಂಗಳೂರಿನ ಯಲ ಹಂಕದಲ್ಲಿರುವ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ತರಬೇತಿ ಕೇಂದ್ರ ವನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾ ಣಕ್ಕೆ ಸ್ಥಳಾಂತರಿಸುವುದಿಲ್ಲ ಎಂದು ನಾಗರಿಕ ವಿಮಾನಯಾನ ರಾಜ್ಯ ಸಚಿವ ಹರ್‍ದೀಪ್ ಸಿಂಗ್‍ಪುರಿ ಭರವಸೆ ನೀಡಿದ್ದಾರೆ. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಇಂದು ಬೆಳಿಗ್ಗೆ ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ, ಐಎಎಫ್ ಹೆಲಿಕಾಪ್ಟರ್ ತರಬೇತಿ ಕೇಂದ್ರವನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಸ್ಥಳಾಂತರಿಸದಂತೆ ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು ಈ ಭರವಸೆ ನೀಡಿದ್ದಾರೆ. ಇದರೊಂ ದಿಗೆ ಮೈಸೂರಿಗರು ನಿಟ್ಟುಸಿರು ಬಿಡುವಂತಾಗಿದೆ.

ಮೈಸೂರು ವಿಮಾನ ನಿಲ್ದಾಣವನ್ನು ಐಎಎಫ್ ವಶಕ್ಕೆ ತೆಗೆದುಕೊಂಡು ಅದನ್ನು ಹೆಲಿಕಾಪ್ಟರ್ ವಾಯುನೆಲೆಯಾಗಿ ಪರಿವರ್ತಿಸಲಾಗುವುದು ಎಂದು ಕೇಳಿಬರುತ್ತಿರುವ ಊಹಾಪೆÇೀಹಗಳ ಕುರಿತು ಸಂಸದ ಪ್ರತಾಪ್ ಸಿಂಹ, ಸಚಿವರ ಗಮನ ಸೆಳೆದಿದ್ದಾರೆ. “ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದೇ ಕರೆಯಲ್ಪಡುವ ಮೈಸೂರು ಪ್ರವಾಸಿ ಗಳ ನೆಚ್ಚಿನ ತಾಣವಾಗಿದೆ. ಉಡಾನ್ ಯೋಜನೆ ಯಡಿಯೂ ಆರಂಭವಾದ ಮೈಸೂರು ವಿಮಾನ ನಿಲ್ದಾಣ ಈಗ ಉತ್ತಮವಾಗಿ ಕಾರ್ಯನಿರ್ವಹಿಸು ತ್ತಿದ್ದು ಈಗ ಕೊಚ್ಚಿನ್, ಹೈದರಾಬಾದ್, ಚೆನ್ನೈ, ಗೋವಾ, ಕಲಬುರಗಿ, ಬೆಳಗಾಂ ಮತ್ತು ಬೆಂಗಳೂರಿಗೆ ಇಲ್ಲಿಂದ ವಿಮಾನಗಳು ಹಾರಾಟ ನಡೆಸುತ್ತಿವೆ. ಪ್ರಯಾಣಿಕರ ಸಂಖ್ಯೆ ಏಳು ಪಟ್ಟು ಹೆಚ್ಚಾಗಿದೆ. ಇನ್ನೂ ಅನೇಕ ನಗರಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಪ್ರವಾಸೋ ದ್ಯಮಕ್ಕೆ ಉತ್ತೇಜನ ದೊರೆಯಲಿದೆ. ಜೊತೆಗೆ ಐಟಿ, ಬಿಟಿ ಸೇರಿ ಇನ್ನೂ ಅನೇಕ ಉದ್ಯಮಗಳಿಗೆ ಇದ ರಿಂದ ಮತ್ತಷ್ಟು ನೆರವಾಗಲಿದೆ. ವಿಮಾನ ನಿಲ್ದಾಣ ವನ್ನು ಐಎಎಫ್‍ಗೆ ಹಸ್ತಾಂತರಿಸುವುದರಿಂದ ಮೈಸೂರು ನಗರದ ಅಭಿವೃದ್ಧಿ ಹಾಗೂ ಸುತ್ತ ಮುತ್ತಲಿನ ಜಿಲ್ಲೆಗಳಲ್ಲಿನ ಪ್ರವಾಸೋದ್ಯಮಕ್ಕೆ ಅಡ್ಡಿಯಾಗಲಿದೆ ಎಂದು ಸಂಸದರು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ವಿಮಾನ ನಿಲ್ದಾಣದಲ್ಲಿ ನಿರ್ಬಂಧ: ಈ ಕುರಿತು ಸಚಿವರಿಗೆ ಮನವಿ ಪತ್ರವನ್ನು ನೀಡಿದ ಪ್ರತಾಪ್ ಸಿಂಹ, “ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಂಡು ಹೆಲಿಕಾಪ್ಟರ್ ಬೇಸ್ ಆಗಿ ಪರಿವರ್ತಿಸಿದಲ್ಲಿ, ರಕ್ಷಣಾ ಸಾಧನಗಳನ್ನು ರಕ್ಷಿಸಲು ರಾಷ್ಟ್ರೀಯ ಸುರಕ್ಷತೆ ದೃಷ್ಟಿಯಿಂದ ಹಲವು ರೀತಿಯ ನಿರ್ಬಂಧಗಳನ್ನು ವಿಧಿಸಬೇಕಾಗಿ ಬಂದು, ಪುಣೆ ಮತ್ತು ಬಾಗ್ದೋಗ್ರಾ ವಿಮಾನ ನಿಲ್ದಾಣ ಗಳಲ್ಲಿ ಆದಂತೆ, ವಿಮಾನ ನಿಲ್ದಾಣದ ಅಭಿವೃದ್ಧಿ ಕುಂಠಿತಗೊಳ್ಳಲಿದೆ. ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶದ ಭವಿಷ್ಯದ ಬೆಳವಣಿಗೆಯ ದೃಷ್ಟಿಯಿಂದ ಈ ಮೈಸೂರು ವಿಮಾನ ನಿಲ್ದಾಣ ಬಹು ಮುಖ್ಯ ಪಾತ್ರ ವಹಿಸಲಿದೆ” ಎಂದು ಸಚಿವರಿಗೆ ಮನವರಿಕೆ ಮಾಡಿದ್ದಾರೆ. ಸಂಸದರ ಮನವಿಗೆ ಸ್ಪಂದಿಸಿದ ಸಚಿವರು, ತಕ್ಷಣ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಗೆ ದೂರವಾಣಿ ಕರೆ ಮಾಡಿ ಮಾತನಾಡಿ, ನಂತರ ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಖಚಿತಪಡಿಸಿದ್ದಾರೆ.

ಕುಮಾರಸ್ವಾಮಿ ಪ್ರಸ್ತಾವನೆ: 2018ರಲ್ಲಿ ಆಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಐಎಎಫ್ ಹೆಲಿಕಾಪ್ಟರ್ ತರಬೇತಿ ಕೇಂದ್ರವನ್ನು ಯಲಹಂಕದಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಸ್ಥಳಾಂತರಗೊಳಿಸಬೇಕೆಂದು ಪ್ರಸ್ತಾಪಿಸಿದ್ದರು. ಪುಣೆ, ಚಂಡೀಗಢ ಮತ್ತು ಶ್ರೀನಗರ ವಿಮಾನ ನಿಲ್ದಾಣಗಳ ಮಾದರಿಯಲ್ಲಿ ಮೈಸೂರು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದಾಗಿ ಆಗಿನ ಮುಖ್ಯಮಂತ್ರಿಗಳಿಗೆ ತಿಳಿಸಿದ್ದ ಐಎಎಫ್, ಮೈಸೂರು ವಿಮಾನ ನಿಲ್ದಾಣವನ್ನು ತನ್ನದೇ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ನಾಗರಿಕ ಹಾಗೂ ಮಿಲಿಟರಿ ಬಳಕೆಗೆ ಸೌಲಭ್ಯ ಒದಗಿಸುವುದಾಗಿ ತನ್ನ ಪ್ರಸ್ತಾವನೆಯಲ್ಲಿ ತಿಳಿಸಿತ್ತು. ಇದರಿಂದಾಗಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಗಮನಾರ್ಹವಾಗಿ ಕಡಿಮೆಯಾಗಲಿದೆ ಎಂದು ಐಎಎಫ್ ಅಭಿಪ್ರಾಯಪಟ್ಟಿತ್ತು. ಮುಖ್ಯಮಂತ್ರಿಗಳ ಪ್ರಸ್ತಾವನೆಯ ನಂತರ, ಮೈಸೂರು ವಿಮಾನ ನಿಲ್ದಾಣದ ಬಳಕೆಗಾಗಿ ರಾಜ್ಯ ಸರ್ಕಾರದ ಕಡೆಯಿಂದ ‘ಯಾವುದೇ ಆಕ್ಷೇಪಣೆ ಇಲ್ಲ’ ಎಂಬ ಪ್ರಮಾಣಪತ್ರವನ್ನು ನೀಡಲಾಗಿತ್ತು. ವಿಮಾನ ನಿಲ್ದಾಣವು ವಿಮಾನ ನಿಲ್ದಾಣ ಪ್ರಾಧಿಕಾರ (ಂಂI)ದ ವ್ಯಾಪ್ತಿಗೆ ಬರುವುದರಿಂದ, ಮುಖ್ಯಮಂತ್ರಿಗಳು ನೀಡಿದ ಪ್ರಸ್ತಾವನೆ ಕುರಿತು ಇದುವರೆಗೂ ಯಾವುದೇ ಇತ್ಯರ್ಥವಾಗದೇ ಈಗ ಪ್ರಸ್ತಾವನೆಯನ್ನೇ ರದ್ದುಪಡಿಸಿದಂತಾಗಿದೆ.

Translate »