ಮೈಸೂರು, ಜೂ.19(ಎಸ್‍ಪಿಎನ್)- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ `ಕೀಳುಮಟ್ಟದ ಪದ’ ಪ್ರಯೋಗ ಮಾಡಿರುವುದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿತನ ಹಾಗೂ ಘನತೆಗೆ ತಕ್ಕದ್ದಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಖಂಡಿಸಿದರು.
ಆಷಾಢ ಮಾಸ ಪ್ರಯುಕ್ತ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲು ಆಗಮಿಸಿದ್ದ ಅವರು ನಜರ್‍ಬಾದ್‍ನ ಸರ್ಕಾರಿ ಅತಿಥಿಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಪಟ್ಟು ಹಿಡಿದು ತರಲು ಸಿಎಂ ಬಿಎಸ್‍ವೈಗೆ `ಧಮ್’ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ಕೆ.ಎಸ್.ಈಶ್ವರಪ್ಪ ಖಾರವಾಗಿ ಪ್ರತಿಕ್ರಿಯಿಸಿದರು.
ಯಡಿಯೂರಪ್ಪ ಅವರು `ಧಮ್’ ಇದ್ದುದಕ್ಕೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ತಂದಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಅವರ `ಧಮ್’ ಏನು ಎನ್ನುವುದನ್ನು ಸಿದ್ದರಾಮುಯ್ಯ ಅರ್ಥ ಮಾಡಿ ಕೊಳ್ಳಲಿ ಎಂದು ತೀರುಗೇಟು ನೀಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಚಾಮುಂಡೇ ಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತರು. ಸ್ವಕ್ಷೇತ್ರದಲ್ಲಿ ಗೆಲ್ಲಲು ಅವರಿಗೆ ಧಮ್ ಇರಲಿಲ್ಲವೇ? ಅವರೇ ಸೋತು ಸುಣ್ಣವಾಗಿ ದ್ದರೂ ಯಡಿಯೂರಪ್ಪನವರ `ಧಮ್’ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ವಿಧಾನ ಪರಿಷತ್ ಚುನಾವಣೆಗೆ ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್ ಹಾಗೂ ಇಬ್ಬರು ಬಿಜೆಪಿ ಮುಖಂಡರಿಗೆ ಟಿಕೆಟ್ ಘೋಷಿಸಿರುವುದು ಹೈಕ ಮಾಂಡ್. ಮಾಜಿ ಸಚಿವ ಎ.ಎಚ್.ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಿಸಲು ಯಡಿಯೂರಪ್ಪನವರು ಸಾಕಷ್ಟು ಶ್ರಮಿಸಿದ್ದಾರೆ. ಆದರೆ, ಹೈಕಮಾಂಡ್ ತಾಂತ್ರಿಕ ಕಾರಣಕ್ಕೆ ಟಿಕೆಟ್ ನಿರಾಕರಿಸಿರಬಹುದು. ಮುಂದಿನ ದಿನಗಳಲ್ಲಿ ಅವರಿಗೂ ಸೂಕ್ತ ಸ್ಥಾನಮಾನ ಸಿಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಾಕಿ ಅನುದಾನ ಬಂದಿದೆ: ಗ್ರಾಮೀಣಾಭಿವೃದ್ಧಿ ಇಲಾಖೆಗೆ ಕೇಂದ್ರ ದಿಂದÀ 1,861 ಕೋಟಿ ರೂ. ಅನುದಾನದಲ್ಲಿ ಈ ಮೊದಲೇ ಸಾವಿರ ಕೋಟಿ ರೂ. ಅನುದಾನ ಬಂದಿದೆ. ಈಗ 2 ದಿನದ ಹಿಂದೆ 461 ಕೋಟಿ ರೂ. ಬಂದಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ಕೊಟ್ಟಿಲ್ಲ ಎಂಬ ಸಿದ್ದರಾಮಯ್ಯನವರ ಆರೋಪ ಸತ್ಯಕ್ಕೆ ದೂರ ಎಂದರು. ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕ ರಿಗೆ ಜಾಬ್ ಕಾರ್ಡ್ ವಿತರಿಸಲಾಗಿದೆ. ಕೆಲಸ ನಿರ್ವಹಿಸಿದ 7 ದಿನಗಳೊಳಗೆ ನೇರವಾಗಿ ಅವರ ಖಾತೆಗೆ ಹಣ ವರ್ಗಾವಣೆ ಯಾಗಲಿದೆ. ಈಗ ಚಾಮರಾಜನಗರ ಜಿಲ್ಲೆಯಲ್ಲಿ ನರೇಗಾ ಕಾರ್ಯಕ್ರಮಗಳನ್ನು ವೀಕ್ಷಿಸಲು ಹೋಗುತ್ತಿದ್ದೇನೆ ಎಂದರು.