ಸಂಸತ್‍ನಲ್ಲಿ ಪಸರಿಸಿದ ಕನ್ನಡದ ಕಂಪು
ಮೈಸೂರು

ಸಂಸತ್‍ನಲ್ಲಿ ಪಸರಿಸಿದ ಕನ್ನಡದ ಕಂಪು

June 18, 2019

ನವದೆಹಲಿ: ಹದಿನೇಳನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಿದ್ದು, ಹೊಸ ಸಂಸದರೆಲ್ಲರೂ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಮೊದಲ ದಿನದ ಅಧಿವೇಶನದಲ್ಲಿ ಕರ್ನಾಟಕದ ಸಂಸದರು ಪ್ರಮುಖ ಆಕರ್ಷಣೆಯಾಗಿ ಕಂಡು ಬಂದರು.

ರಾಜ್ಯದ 28 ಸಂಸದರು ಲೋಕಸಭೆ ಪ್ರವೇಶಿಸಿದ್ದು, 25 ಮಂದಿ ಬಿಜೆಪಿಯವರೇ ಇದ್ದಾರೆ, ಇಂದು ಎಲ್ಲ ಸಂಸದರು ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕದ ಸಂಸದರು ಬಹುತೇಕ ಎಲ್ಲರೂ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಮೊದಲಿಗೆ ಪ್ರಮಾಣ ವಚನ ಸ್ವೀಕರಿಸಿದ ಸದಾನಂದಗೌಡ ಅವರು, ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಕರ್ನಾಟಕದ ಎಲ್ಲ ಸಂಸದರು ಕನ್ನಡ ದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು.

ಮೈಸೂರು-ಕೊಡಗು ಸಂಸದರಾದ ಪ್ರತಾಪ್ ಸಿಂಹ ಅವರು ಕೊಡಗು ಸಾಂಪ್ರ ದಾಯಕ ಶೈಲಿಯಲ್ಲಿ ಉಡುಗೆತೊಟ್ಟು ಕೊಂಡು ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು. ಕೊಡಗಿನ ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ಪ್ರತಾಪ್ ಸಿಂಹ ಅವರು ಪ್ರಮುಖ ಆಕರ್ಷಣೆ ಆಗಿದ್ದರು. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಲೋಕಸಭೆ ಪ್ರವೇಶಿಸಿರುವ ತೇಜಸ್ವಿ ಸೂರ್ಯ ಅವರು ಪಂಚೆ, ಶಲ್ಯ ಧರಿಸಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು. ಕಾಂಗ್ರೆಸ್‍ನ ಡಿಕೆ ಸುರೇಶ್, ಜೆಡಿಎಸ್‍ನ ಪ್ರಜ್ವಲ್ ರೇವಣ್ಣ, ಮಂಡ್ಯ ಸಂಸದೆ ಸುಮಲತಾ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಮೊದಲ ದಿನದ ಅಧಿವೇಶನ ಸಂಸದರ ಪ್ರಮಾಣ ವಚನ ನೋಡಲು ರಾಜ್ಯ ಸರ್ಕಾರ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ದೆಹಲಿಗೆ ತೆರಳಿದ್ದರು. ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಇನ್ನೂ ಕೆಲವು ಸಂಸದರ ಜೊತೆಗೆ ಡಿ.ಕೆ.ಶಿವಕುಮಾರ್ ಅವರು ಫೋಟೊ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.