ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಅಧಿಕೃತ
ಮೈಸೂರು

ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಅಧಿಕೃತ

December 1, 2018

ಮೈಸೂರು:  ಕರ್ನಾಟಕ ರಕ್ಷಣಾ ವೇದಿಕೆಯ ಹೆಸರು ದುರ್ಬಳಕೆ ಮಾಡಿ ಕೊಳ್ಳುತ್ತಿರುವ ಬಗ್ಗೆ ದಾಖಲಿಸಿದ್ದ ಮೊಕದ್ದಮೆ ಸಂಬಂಧ ಸಂಘಟನೆಯ ಹೆಸರನ್ನು ಅನಧಿ ಕೃತ ವ್ಯಕ್ತಿಗಳು ಬಳಸದಂತೆ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಶಾಶ್ವತ ತಡೆಯಾಜ್ಞೆ ನೀಡಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್‍ಕುಮಾರ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಕ್ಷಣಾ ವೇದಿಕೆಯು ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960ರ ಪ್ರಕಾರ ನೋಂದಣಿಯಾಗಿದೆ. ಟಿ.ಎ.ನಾರಾಯಣಗೌಡ ವೇದಿಕೆಯ ರಾಜ್ಯಾಧ್ಯಕ್ಷರಾಗಿ ದ್ದಾರೆ. ಆದರೆ ಸಂಘದ ಸದಸ್ಯತ್ವ ಹೊಂದದ ಹಾಗೂ ಉಚ್ಚಾಟಿಸಲ್ಪಟ್ಟವರು ವೇದಿಕೆಗೆ ಕೆಟ್ಟ ಹೆಸರು ತರಲು ಸಂಘಟನೆ ಹೆಸರು ಬಳಸಿದ್ದರು. ಇದರ ವಿರುದ್ಧ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ನೀಡಿದ್ದು, ಅನ್ಯ ವ್ಯಕ್ತಿಗಳು ಸಂಘಟನೆ ಹೆಸರು ಬಳಸದಂತೆ ಶಾಶ್ವತ ತಡೆಯಾಜ್ಞೆ ನೀಡಿದೆ ಎಂದು ವಿವರಿಸಿದರು.

ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಚಂದ್ರ, ಜಿಲ್ಲಾ ಕಾರ್ಯದರ್ಶಿ ಲೋಕೇಶ್, ಸಂಘಟನೆಯ ರಫೀಕ್, ಹೇಮಂತ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

Translate »