ಶ್ರೀರಂಗಪಟ್ಟಣ: ರೈತರ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಕೊನೆಗೂ ತಾಲೂಕಿನ ಶ್ರೀನಿವಾಸ ಅಗ್ರಹಾರ ಬಳಿ ಇರಿಸಿದ್ದ ಬೋನಿಗೆ ಬಿದ್ದಿದೆ.
ಒಂದುವರೆ ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಒಂದು ವಾರದಿಂದ ಗ್ರಾಮದ ಹೊರ ವಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈ ಚಿರತೆ ಕುರಿ, ಮೇಕೆ, ಹಸುಗಳ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದ ರೈತರು ಆತಂಕಗೊಂಡಿ ದ್ದರು. ಇದೀಗ ಅರಣ್ಯ ಇಲಾಖೆಯು ಚಿರತೆಯನ್ನು ಹಿಡಿಯುವಲ್ಲಿ ಸಫಲವಾಗಿದ್ದು, ಗ್ರಾಮಸ್ಥರು ಆತಂಕದಿಂದ ಹೊರಬರುವಂತಾಗಿದೆ. ಸೆರೆ ಸಿಕ್ಕ ಚಿರತೆಯನ್ನು ಚಾಮರಾಜನಗರ ಅರಣ್ಯಕ್ಕೆ ಬಿಡುವುದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಮಂಡ್ಯ