ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹಿಸಿ ಪತ್ರ ಚಳುವಳಿ
ಮೈಸೂರು

ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹಿಸಿ ಪತ್ರ ಚಳುವಳಿ

September 17, 2019

ಮೈಸೂರು, ಸೆ. 16(ಆರ್‍ಕೆ)- ಕೇಂದ್ರ ಸರ್ಕಾರವು ನೆರೆ ಸಂತ್ರಸ್ತರಿಗೆ ಪರಿಹಾರದ ಹಣ ಬಿಡುಗಡೆ ಮಾಡು ವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪದಾಧಿಕಾರಿ ಗಳು ಇಂದು ಮೈಸೂರು ಮಹಾನಗರ ಪಾಲಿಕೆ ಕಚೇರಿ ಎದುರು ಅಂಚೆ ಪತ್ರ ಚಳು ವಳಿ ನಡೆಸಿದರು.

ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ. ಕಂದಾಯ ಇಲಾಖೆ ಮೂಲಕ ಬಿಡುಗಡೆ ಮಾಡಿರುವ ಅಲ್ಪ ಹಣದಿಂದ ಮನೆ, ಜಮೀನು, ಆಸ್ತಿ ಕಳೆದುಕೊಂಡವರನ್ನು ರಕ್ಷಿಸಲು ಸಾಧ್ಯವಿಲ್ಲ. ತಕ್ಷಣ ರಾಜ್ಯಕ್ಕೆ ಪರಿಹಾರದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದರು.

ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಂ, ನಿವೃತ್ತ ಪ್ರಾಧ್ಯಾಪಕ ಪ್ರೊ. ಮಹೇಶ್ ಚಂದ್ರಗುರು, ಚಿಂತಕ ಪ್ರೊ. ಕೆ.ಎಸ್.ಭಗವಾನ್, ಮುಖಂಡರಾದ ಎನ್.ಆರ್. ನಾಗೇಶ್, ವಿ. ಮಂಜುನಾಥ್, ಹೆಚ್.ಎಸ್. ಪ್ರಕಾಶ್, ಸಿ.ಬಿ.ಆಚಾರ್ಯ, ಜಾಕಿರ್ ಹುಸೇನ್ ಸೇರಿದಂತೆ ಹಲವರು ಅಂಚೆ ಪತ್ರ ಚಳವಳಿಯಲ್ಲಿ ಭಾಗವಹಿಸಿದ್ದರು.

Translate »