ಲಾರಿ-ಮಿನಿ ಲಾರಿ ಮುಖಾಮುಖಿ ಡಿಕ್ಕಿ ತಾಯಿ, ಮಗಳು ಸ್ಥಳದಲ್ಲೇ ಸಾವು
ಹಾಸನ

ಲಾರಿ-ಮಿನಿ ಲಾರಿ ಮುಖಾಮುಖಿ ಡಿಕ್ಕಿ ತಾಯಿ, ಮಗಳು ಸ್ಥಳದಲ್ಲೇ ಸಾವು

June 20, 2018

ಹಾಸನ: ಪೈಪ್ ತುಂಬಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಮೃತಪಟ್ಟಿದ್ದು, ಐವರು ಘಟನೆ ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ಗೌರಿ ಪಾಳ್ಯ ನಿವಾಸಿ ಷಹಜಾತ್(35), ಪುತ್ರಿ ಉಮರ್(3) ಮೃತರು. ಇವರು ತಮ್ಮ ಕುಟುಂಬದವರೊಂದಿಗೆ ಟಿಟಿ ವಾಹನದಲ್ಲಿ ಹಾಸನದ ದರ್ಗಾವೊಂದಕ್ಕೆ ಹೊರಟಿದ್ದರು ಎನ್ನಲಾಗಿದೆ. ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿ ಹೊಡೆದಿದೆ.

ಪರಿಣಾಮ ಟಿಟಿಯಲ್ಲಿದ್ದ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿಟಿಯಲ್ಲಿದ್ದವರು ಗಾಯ ಗೊಂಡಿದ್ದಾರೆ. ಚಾಲಕ ಶಫಿ ಸ್ಥಿತಿ ಗಂಭೀರವಾಗಿದ್ದು, ಚಿಕಿಸ್ತೆಗೆ ಬೆಂಗಳುರಿಗೆ ರವಾಸಲಾಗಿದೆ. ಸದ್ಯ ಲಾರಿ ಡ್ರೈವರ್ ಹಾಗೂ ಕ್ಲೀನರ್‍ರನ್ನೂ ಪೆÇಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »